WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೆ ಡೇಟ್ ಫಿಕ್ಸ್

ICC World Test Championship 2025 final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 9 ತಂಡಗಳಿವೆ. 2023 ರಿಂದ 2025 ರವರೆಗೆ ಆಡಿದ ಟೆಸ್ಟ್ ಪಂದ್ಯಗಳಿಗೆ ಅನುಗುಣವಾಗಿ ಇಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಈ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಲಿದೆ.

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೆ ಡೇಟ್ ಫಿಕ್ಸ್
WTC 2025
Follow us
ಝಾಹಿರ್ ಯೂಸುಫ್
|

Updated on: Sep 03, 2024 | 3:21 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಅದರಂತೆ ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ WTC ಫೈನಲ್ ಪಂದ್ಯ ಜರುಗಲಿದೆ. ಇನ್ನು ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದೆ. ಇದಕ್ಕೂ ಮುನ್ನ ನಡೆದ 2021ರ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಗಳಿಗೆ ಇಂಗ್ಲೆಂಡ್​ನ ಓವಲ್ ಮೈದಾನ ಆತಿಥ್ಯವಹಿಸಿತ್ತು. ಈ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಅಂತಿಮ ಹಣಾಹಣಿಯನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ.

ಮೀಸಲು ದಿನದಾಟ:

ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಇನ್ನಿತರ ಕಾರಣಗಳಿಂದ ದಿನದಾಟ ನಡೆಯದಿದ್ದರೆ ಮೀಸಲು ದಿನದಾಟದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಇದಕ್ಕಾಗಿ ಜೂನ್ 16 ಮೀಸಲು ದಿನವಾಗಿ ಘೋಷಿಸಲಾಗಿದೆ.

ಫೈನಲ್​ ಹಾದಿ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುವ ತಂಡಗಳಾವುವು ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಹಾಗೆಯೇ ಆಸ್ಟ್ರೇಲಿಯಾ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ನ್ಯೂಝಿಲೆಂಡ್ ತಂಡ ಮೂರನೇ ಸ್ಥಾನದಲ್ಲಿದರೆ, ಇಂಗ್ಲೆಂಡ್ ನಾಲ್ಕನೇ ಸ್ಥಾನಕ್ಕೇರಿದೆ.

ಇಲ್ಲಿ ಭಾರತ ತಂಡವು ಬಾಂಗ್ಲಾದೇಶ್ ಹಾಗೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಂಡರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವುದು ಖಚಿತವಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಫೈನಲ್​ಗೇರುವ ಅವಕಾಶವನ್ನು ಹೊಂದಿದೆ.

ಇನ್ನು ಮೂರನೇ ಸ್ಥಾನದಲ್ಲಿರುವ ನ್ಯೂಝಿಲೆಂಡ್ ಭಾರತ ತಂಡವನ್ನು ಮುಂದಿನ ಟೆಸ್ಟ್ ಸರಣಿಯಲ್ಲಿ ಸೋಲಿಸಿದ ಎರಡನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಹಾಗೆಯೇ ಇದೀಗ ನಾಲ್ಕನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ವಿರುದ್ಧದ ಸರಣಿಗಳಲ್ಲಿ ಅಮೋಘ ಗೆಲುವು ಸಾಧಿಸಿದರೆ ಫೈನಲ್​ಗೇರಬಹುದು.

ಹೀಗಾಗಿ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿರುವ ತಂಡಗಳಿಗೆ ಮುಂಬರುವ ಸರಣಿಗಳು ತುಂಬಾ ಮಹತ್ವದ್ದು. ಹೀಗಾಗಿ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಆಡುವ ತಂಡಗಳಾವುವು ಎಂಬುದು ನಿರ್ಧಾರವಾಗಲು ಡಿಸೆಂಬರ್​ವರೆಗೂ ಕಾಯಬೇಕಾಗಿ ಬರಬಹುದು.

ಟೀಮ್ ಇಂಡಿಯಾ ಉತ್ತಮ ಅವಕಾಶ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಏಕೆಂದರೆ ಭಾರತ ತಂಡವು ಮುಂದಿನ 2 ಟೆಸ್ಟ್ ಸರಣಿಗಳನ್ನು ಆಡುತ್ತಿರುವುದು ತವರಿನಲ್ಲಿ. ಅಂದರೆ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡವು 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್ಧ ಕೂಡ ಭಾರತದಲ್ಲೇ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಇದನ್ನೂ ಓದಿ: 2 ವರ್ಷ ಬೆಂಚ್ ಕಾಯಿಸಿದ RCBಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ ಮನೋಜ್ ಭಾಂಡಗೆ

ಈ ಎರಡು ಸರಣಿಗಳಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅಗ್ರಸ್ಥಾನವನ್ನು ಖಚಿತಪಡಿಸಿಕೊಂಡು ಫೈನಲ್​ಗೇರಬಹುದು. ಒಂದು ವೇಳೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೆಲ ಪಂದ್ಯಗಳಲ್ಲಿ ಸೋಲನುಭವಿಸಿದರೆ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂಲಕ ಫೈನಲ್​ಗೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್