AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಸ್- ಲಂಕಾ ಗೆಲುವಿನ ಬಳಿಕ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆ; ಭಾರತಕ್ಕೆ ಯಾವ ಸ್ಥಾನ?

ICC World Test Championship Points Table Update: ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ಇತ್ತೀಚಿನ ಟೆಸ್ಟ್ ಗೆಲುವುಗಳಿಂದಾಗಿ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ರ ಅಂಕಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ, ಶ್ರೀಲಂಕಾ ಬಾಂಗ್ಲಾದೇಶವನ್ನು ಸೋಲಿಸಿದೆ. ಈ ಗೆಲುವುಗಳಿಂದಾಗಿ ಈ ಎರಡೂ ತಂಡಗಳು ಅಂಕಪಟ್ಟಿಯಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಮವಾಗಿ ಐದನೇ ಮತ್ತು ಎರಡನೇ ಸ್ಥಾನದಲ್ಲಿವೆ.

ಆಸೀಸ್- ಲಂಕಾ ಗೆಲುವಿನ ಬಳಿಕ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆ; ಭಾರತಕ್ಕೆ ಯಾವ ಸ್ಥಾನ?
Wtc Rankings
ಪೃಥ್ವಿಶಂಕರ
|

Updated on: Jun 28, 2025 | 4:19 PM

Share

ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು, ಬಾಂಗ್ಲಾದೇಶ (SL vs BAN) ವಿರುದ್ಧ ಇನ್ನಿಂಗ್ಸ್ ಮತ್ತು 78 ರನ್‌ಗಳಿಂದ ಜಯಗಳಿಸಿತು. ಇತ್ತ, ಬಾರ್ಬಡೋಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ (AUS vs WI) ತಂಡವನ್ನು 159 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ಗೆಲುವಿನ ನಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ರ ಪಾಯಿಂಟ್‌ ಪಟ್ಟಿಯಲ್ಲಿ (WTC Points Table Update) ಸಾಕಷ್ಟು ಬದಲಾವಣೆಗಳಾಗಿವೆ. ಆ ಪ್ರಕಾರ ಈ ಎರಡೂ ತಂಡಗಳು ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ 3 ಸ್ಥಾನದಲ್ಲಿ ಕಾಣಿಸಿಕೊಂಡಿವೆ.

ಮೊದಲ ಟೆಸ್ಟ್ ಗೆದ್ದ ಆಸ್ಟ್ರೇಲಿಯಾ

ಬಾರ್ಬಡೋಸ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 159 ರನ್​ಗಳ ಭರ್ಜರಿ ಜಯ ಸಾಧಿಸಿತು. ಕಾಂಗರೂಗಳ ಗೆಲುವಿನ ಅಂತರ ಇಂಗ್ಲೆಂಡ್‌ ತಂಡಕ್ಕಿಂತ ಹೆಚ್ಚಿರುವ ಕಾರಣ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿರುವ ಇಂಗ್ಲೆಂಡ್ ಎರಡನೇ ಸ್ಥಾನ ಪಡೆದುಕೊಂಡರೆ, ಇತ್ತ ಬಾಂಗ್ಲಾ ವಿರುದ್ಧ ಇನ್ನಿಂಗ್ಸ್ ಜಯ ಸಾಧಿಸಿರುವ ಶ್ರೀಲಂಕಾ ಮೂರನೇ ಸ್ಥಾನದಲ್ಲಿದೆ.

ಬಾಂಗ್ಲಾ, ಶ್ರೀಲಂಕಾಗೆ 3 ಮತ್ತು 4ನೇ ಸ್ಥಾನ

ಬಾಂಗ್ಲಾದೇಶ ಹಾಗೂ ಶ್ರೀಲಂಕಾ ನಡುವೆ ನಡೆದ ಎರಡು ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯ ಡ್ರಾದಲ್ಲಿ ಅಂತ್ಯವಾದರೆ, ಇನ್ನೊಂದು ಪಂದ್ಯದಲ್ಲಿ ಲಂಕಾ ಜಯ ಸಾಧಿಸಿತು. ಈ ಮೂಲಕ ಲಂಕಾ ತಂಡವು 16 ಅಂಕಗಳನ್ನು ಹೊಂದಿದ್ದು, ಅದರ ಗೆಲುವಿನ ಶೇಕಡಾವಾರು 66.67 ಆಗಿದೆ. ಇನ್ನು ಈ ಆವೃತ್ತಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಒಂದು ಪಂದ್ಯದಲ್ಲಿ ಸೋತಿರುವ ಬಾಂಗ್ಲಾದೇಶ ತಂಡವು ನಾಲ್ಕು ಅಂಕಗಳನ್ನು ಹೊಂದಿದ್ದು, 16.670 ರ ಗೆಲುವಿನ ಶೇಕಡಾವಾರುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

IND vs ENG: 2ನೇ ಟೆಸ್ಟ್ ಗೆಲ್ಲಲು ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ; ವಿಡಿಯೋ

ಭಾರತಕ್ಕೆ ಯಾವ ಸ್ಥಾನ?

ತಲಾ ಒಂದೊಂದು ಪಂದ್ಯಗಳನ್ನು ಸೋತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಐದನೇ ಮತ್ತು ಆರನೇ ಸ್ಥಾನಗಳಲ್ಲಿವೆ. ಈ ಎರಡೂ ತಂಡಗಳು ಇಲ್ಲಿಯವರೆಗೆ ತಲಾ ಒಂದು ಪಂದ್ಯವನ್ನು ಆಡಿದ್ದು, ಆ ಪಂದ್ಯದಲ್ಲಿ ಸೋತಿವೆ. ಉಳಿದಂತೆ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಈ ಆವೃತ್ತಿಯಲ್ಲಿ ಇದುವರೆಗೆ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ. ಇನ್ನು ದಕ್ಷಿಣ ಆಫ್ರಿಕಾ ತಂಡವು ಪ್ರಸ್ತುತ ಜಿಂಬಾಬ್ವೆ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದ ಫಲಿತಾಂಶದ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆಯಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!