World Test Championship: ಪಾಕಿಸ್ತಾನಕ್ಕೆ ಭರ್ಜರಿ ಜಯ: 4ನೇ ಸ್ಥಾನಕ್ಕೇರಿದ ಭಾರತ

ICC World Test Championship Points Table: 2021 ರಿಂದ 2023 ರವರೆಗೆ ನಡೆಯಲಿರುವ ಪ್ರಮುಖ ದೇಶಗಳ ಪಂದ್ಯಗಳ ಫಲಿತಾಂಶದ ಮೇಲೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಡೆಯುತ್ತಿದೆ. ಇಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಆಡಲಿದೆ.

World Test Championship: ಪಾಕಿಸ್ತಾನಕ್ಕೆ ಭರ್ಜರಿ ಜಯ: 4ನೇ ಸ್ಥಾನಕ್ಕೇರಿದ ಭಾರತ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 21, 2022 | 11:34 AM

ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್​ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 4 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ, ಇತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್  ಪಾಯಿಂಟ್ಸ್​ ಟೇಬಲ್​ನಲ್ಲಿ (World Test Championship Points Table) ಮಹತ್ವದ ಬದಲಾವಣೆಯಾಗಿದೆ. ಗಾಲೆಯಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಯುವ ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ಭರ್ಜರಿ 160 ರನ್​ಗಳ ಇನಿಂಗ್ಸ್ ಆಡುವ ಮೂಲಕ 342 ರನ್​ಗಳನ್ನು ಚೇಸ್ ಮಾಡಿ ಗೆಲುವು ದಾಖಲಿಸಿತ್ತು. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಶ್ರೇಯಾಂಕದಲ್ಲಿ ಪಾಕ್ ತಂಡವು 3ನೇ ಸ್ಥಾನಕ್ಕೇರಿದೆ. ಹಾಗೆಯೇ ಈ ಪಂದ್ಯದಲ್ಲಿ ಸೋತ ಶ್ರೀಲಂಕಾ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ಒಂದೆಡೆ ಪಾಯಿಂಟ್ ಟೇಬಲ್​ನಲ್ಲಿ ಪಾಕ್ ಮೇಲೇರಿದ ಮತ್ತು ಶ್ರೀಲಂಕಾ ಕುಸಿದ ಪರಿಣಾಮ ಟೀಮ್ ಇಂಡಿಯಾ ನಾಲ್ಕನೇ ಸ್ಥಾನಕ್ಕೇರಿದೆ.

ಸದ್ಯ ಅಗ್ರಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದ್ದು, ದಕ್ಷಿಣ ಆಫ್ರಿಕಾ 7 ಟೆಸ್ಟ್ ಪಂದ್ಯಗಳಲ್ಲಿ 5 ಜಯ ಸಾಧಿಸಿ ಶೇ. 71.43 ರಷ್ಟು ಗೆಲುವಿನ ಶೇಕಡಾವಾರಿನೊಂದಿಗೆ ಮೊದಲ ಸ್ಥಾನ ಅಲಂಕರಿಸಿದೆ. ಇನ್ನು 10 ಪಂದ್ಯಗಳಲ್ಲಿ 6 ಗೆಲುವು, 3 ಡ್ರಾ ಸಾಧಿಸಿರುವ ಆಸ್ಟ್ರೇಲಿಯಾ ಶೇ. 70 ರಷ್ಟು ಗೆಲುವಿನ ಶೇಕಡಾವಾರಿನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಹಾಗಿದ್ರೆ ನೂತನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿ ನೋಡೋಣ..,

  1. – ಸೌತ್ ಆಫ್ರಿಕಾ (71.43 ಗೆಲುವಿನ ಶೇಕಡಾವಾರು)
  2. – ಆಸ್ಟ್ರೇಲಿಯಾ (70 ಗೆಲುವಿನ ಶೇಕಡಾವಾರು)
  3. ಇದನ್ನೂ ಓದಿ
    Image
    T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
    Image
    Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
    Image
    Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
    Image
    Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
  4. – ಪಾಕಿಸ್ತಾನ್ (58.33 ಗೆಲುವಿನ ಶೇಕಡಾವಾರು)
  5. – ಟೀಮ್ ಇಂಡಿಯಾ (52.8 ಗೆಲುವಿನ ಶೇಕಡಾವಾರು)
  6. – ವೆಸ್ಟ್ ಇಂಡೀಸ್ (50 ಗೆಲುವಿನ ಶೇಕಡಾವಾರು)
  7. – ಶ್ರೀಲಂಕಾ (48.15 ಗೆಲುವಿನ ಶೇಕಡಾವಾರು)
  8. – ಇಂಗ್ಲೆಂಡ್ (33.33 ಗೆಲುವಿನ ಶೇಕಡಾವಾರು)
  9. – ನ್ಯೂಜಿಲೆಂಡ್ (25.93 ಗೆಲುವಿನ ಶೇಕಡಾವಾರು)
  10. – ಬಾಂಗ್ಲಾದೇಶ್ (13.33 ಗೆಲುವಿನ ಶೇಕಡಾವಾರು)

ಏನಿದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​?

2021 ರಿಂದ 2023 ರವರೆಗೆ ನಡೆಯಲಿರುವ ಪ್ರಮುಖ ದೇಶಗಳ ಪಂದ್ಯಗಳ ಫಲಿತಾಂಶದ ಮೇಲೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಡೆಯುತ್ತಿದೆ. ಇಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಫೈನಲ್ ಆಡಲಿದೆ. ಆದರೆ ಇಲ್ಲಿ ಗೆಲುವಿನ ಶೇಕಡಾವಾರು (ಪರ್ಸಂಟೇಜ್) ಮೇಲೆ ಪಾಯಿಂಟ್ಸ್​ ಟೇಬಲ್​ನಲ್ಲಿ ಸ್ಥಾನ ನಿಗದಿಯಾಗಲಿದೆ. ಅದರಂತೆ ಗೆಲುವುಗಳ ಸಂಖ್ಯೆ, ಡ್ರಾ ಪಂದ್ಯಗಳ ಸಂಖ್ಯೆ ಕೂಡ ಇಲ್ಲಿ ಗಣನೆಗೆ ಬರಲಿದೆ. ಇದರಿಂದ ಹೆಚ್ಚು ಪಂದ್ಯ ಗೆದ್ದ ತಂಡ ಅಧಿಕ ಪಾಯಿಂಟ್ ಪಡೆದರೂ, ಗೆಲುವು ಹಾಗೂ ಡ್ರಾ ಸಾಧಿಸಿದ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೇಲೇರಬಹುದು.

ಅಂದರೆ ಇಲ್ಲಿ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ. ಇದರಿಂದ ಸರಣಿಗಳ ಪಂದ್ಯಾವಳಿಯ ಲೆಕ್ಕಚಾರ ಸಮಗೊಳ್ಳಲಿದೆ. ಇಲ್ಲಿ ಗೆದ್ದ ಪಂದ್ಯಗಳಿಗೆ ಮತ್ತು ಡ್ರಾ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ಪಾಯಿಂಟ್ಸ್​ ಟೇಬಲ್​ನಲ್ಲಿ ರ್‍ಯಾಂಕ್ ಪಡೆದುಕೊಳ್ಳುತ್ತವೆ. ಇದರಿಂದ ಪಂದ್ಯಗಳಿಗೆ ಅಥವಾ ಸರಣಿಗೆ ಅನುಸಾರವಾಗಿ ಶ್ರೇಯಾಂಕ ಪಟ್ಟಿ ಬದಲಾಗಬಹುದು. ಅಲ್ಲದೆ ಪಾಯಿಂಟ್ ಟೇಬಲ್​ನಲ್ಲೂ ಪಂದ್ಯಕ್ಕನುಸಾರವಾಗಿ ಪೈಪೋಟಿ ಕಂಡು ಬರಲಿದೆ. ಅಂತಿಮವಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡಲಿದೆ.

ಎಷ್ಟು ಪಂದ್ಯ ನಡೆಯಲಿದೆ? ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 2021 ರಿಂದ 2023 ರ ಒಳಗೆ ಒಂದು ತಂಡವು ಒಟ್ಟು 6 ಟೆಸ್ಟ್​ ಸರಣಿಗಳನ್ನು ಆಡಲಿದೆ. ಇದರಲ್ಲಿ ಮೂರು ಟೆಸ್ಟ್ ಸರಣಿ ತವರಿನಲ್ಲಿ ನಡೆದರೆ ಮತ್ತು ಮೂರು ವಿದೇಶಿ ಸರಣಿಗಳನ್ನು ಆಡಲಿದೆ. ಈಗಾಗಲೇ ಭಾರತ ತಂಡವು ನ್ಯೂಜಿಲೆಂಡ್, ಶ್ರೀಲಂಕಾ ವಿರುದ್ದದ ಸರಣಿ ಮುಗಿಸಿದೆ. ಹಾಗೆಯೇ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಸಹ ಆಡಿದೆ. ಇನ್ನುಳಿದಿರುವುದು ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ಪ್ರವಾಸ ಸರಣಿ ಮಾತ್ರ. ಹೀಗಾಗಿ ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಲು ಈ ಎರಡು ಸರಣಿಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ