AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಈ ಪಂದ್ಯಗಳು ಮಳೆಯಿಂದಾಗಿ ರದ್ದಾದರೆ?

T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ..!
Team India
ಝಾಹಿರ್ ಯೂಸುಫ್
|

Updated on: Feb 22, 2026 | 2:10 PM

Share

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಮ್ಯಾಚ್ ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮಳೆ ಬಂದರೆ ಸೆಮಿಫೈನಲ್​ಗೇರುವುದು ಯಾರು ಎಂಬ ಲೆಕ್ಕಾಚಾರ ಕೂಡ ಶುರುವಾಗಿದೆ. ಅದರಲ್ಲೂ ಎಲ್ಲಾ ಮ್ಯಾಚ್​ಗಳು ರದ್ದಾದರೆ ಸೆಮಿಫೈನಲ್​ಗೆ ತಂಡಗಳ ಆಯ್ಕೆ ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಟಿ20 ವಿಶ್ವಕಪ್‌ನ ಸೂಪರ್- 8 ಹಂತದ ಎಲ್ಲಾ ಪಂದ್ಯಗಳು ಮಳೆಯಿಂದ ರದ್ದಾದರೆ , ಭಾರತ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇದಕ್ಕೆ ಮುಖ್ಯ ಕಾರಣ ಐಸಿಸಿ ನಿಯಮಗಳು.

ಸೂಪರ್-8 ಹಂತದ ನಿಯಮಗಳು:

  • ಐಸಿಸಿ ನಿಯಮದಂತೆ, ಸೂಪರ್ 8 ಹಂತದ ಪಂದ್ಯಗಳಿಗೆ ಮೀಸಲು ದಿನ ಇರುವುದಿಲ್ಲ. ಒಂದು ವೇಳೆ ಪಂದ್ಯವು ಮಳೆಯಿಂದ ರದ್ದಾದರೆ, ಎರಡೂ ತಂಡಗಳಿಗೆ ತಲಾ 1 ಅಂಕವನ್ನು ನೀಡಲಾಗುತ್ತದೆ.
  • ಗ್ರೂಪ್- 1ರ ಎಲ್ಲಾ ಪಂದ್ಯ ರದ್ದಾದರೆ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಂದಿನ ಹಂತಕ್ಕೇರಲಿದೆ.

ಏಕೆಂದರೆ ಪಂದ್ಯ ರದ್ದಾದರೆ ಒಂದು ಅಂಕಗಳನ್ನು ನೀಡಲಾಗುತ್ತದೆಯೇ ಹೊರತು ಯಾವುದೇ ನೆಟ್ ರನ್ ರೇಟ್ ಇರುವುದಿಲ್ಲ. ಒಂದು ವೇಳೆ ಗ್ರೂಪ್-1 ರ ಎಲ್ಲಾ ಮ್ಯಾಚ್​ಗಳು ರದ್ದಾದರೆ, ಎಲ್ಲಾ ತಂಡಗಳ ಪಾಯಿಂಟ್ಸ್ 3 ಆಗಿರಲಿದೆ. ಇದಾಗ್ಯೂ ವೆಸ್ಟ್ ಇಂಡೀಸ್, ಝಿಂಬಾಬ್ವೆ ಬದಲಿಗೆ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

ಭಾರತ ಮತ್ತು ಸೌತ್ ಆಫ್ರಿಕಾ ಆಯ್ಕೆ ಯಾಕೆ?

ಐಸಿಸಿ ಟೂರ್ನಿಯ ಎಲ್ಲಾ ಪಂದ್ಯಗಳು ರದ್ದಾಗಿ ಅಂಕಗಳು ಸಮನಾದಾಗ ಸೆಮಿಫೈನಲ್ ಪ್ರವೇಶಿಸುವ ತಂಡವನ್ನು ಆಯ್ಕೆ ಮಾಡಲು ಈ ಕೆಳಗಿನ ಮಾನದಂಡಗಳನ್ನು ಬಳಸುತ್ತದೆ…

  • ಹೆಚ್ಚಿನ ಗೆಲುವುಗಳು: ಇಲ್ಲಿ ಎಲ್ಲಾ ತಂಡಗಳ ಗೆಲುವು  0 ಇರುತ್ತವೆ.
  • ಉತ್ತಮ ನೆಟ್ ರನ್ ರೇಟ್: ಪಂದ್ಯ ನಡೆಯದ ಕಾರಣ ಎಲ್ಲಾ ತಂಡಗಳ ನೆಟ್ ರನ್​ ರೇಟ್ 0.00 ಇರುತ್ತದೆ.
  • ಹೆಡ್-ಟು-ಹೆಡ್: ತಂಡಗಳ ನಡುವೆ ಪಂದ್ಯ ಪೂರ್ಣಗೊಳ್ಳದ ಕಾರಣ ಇದು ಅನ್ವಯಿಸುವುದಿಲ್ಲ.
  • ಐಸಿಸಿ ಟಿ20 ಶ್ರೇಯಾಂಕ: ಮೇಲಿನ ಯಾವುದೂ ಅನ್ವಯಿಸದಿದ್ದರೆ, ಟೂರ್ನಿ ಆರಂಭಕ್ಕೂ ಮುನ್ನ ಇದ್ದ ಐಸಿಸಿ ಟಿ20 ತಂಡಗಳ ಶ್ರೇಯಾಂಕವನ್ನು ಪರಿಗಣಿಸಲಾಗುತ್ತದೆ.

ಅಂದರೆ ಐಸಿಸಿ ಟಿ20 ತಂಡಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಗ್ರೂಪ್-1 ರಿಂದ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು 5ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡ 2ನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ.

ಇದೇ ನಿಯಮ ಗ್ರೂಪ್-2 ಗೂ ಅನ್ವಯಿಸಲಿದೆ. ಅಂದರೆ ಗ್ರೂಪ್-2 ರ ಎಲ್ಲಾ ಪಂದ್ಯಗಳು ಮಳೆಯಿಂದಾಗಿ ರದ್ದಾದರೆ, ಐಸಿಸಿ ಟಿ20 ತಂಡಗಳ ಶ್ರೇಯಾಂಕದಲ್ಲಿ ಮೇಲಿನ ಸ್ಥಾನಗಳಲ್ಲಿರುವ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಅದರಂತೆ ಗ್ರೂಪ್- 2 ನಿಂದ ಟಿ20 ತಂಡಗಳ ರ್ಯಾಂಕಿಂಗ್​ನಲ್ಲಿ 2ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಹಾಗೂ 4ನೇ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ: ‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್

ಅಂದರೆ ಸೂಪರ್-8 ಸುತ್ತಿನ ಎಲ್ಲಾ ಪಂದ್ಯಗಳು ಮಳೆಯ ಕಾರಣ ರದ್ದಾದರೆ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..