AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಬರದಿದ್ದರೆ ನಾವು ಕೂಡ ಬರುವುದಿಲ್ಲ’; ಬಿಸಿಸಿಐ ಎದುರು ಗುಡುಗಿದ ಪಾಕ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ!

IND vs PAK: ಒಂದು ವೇಳೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

‘ನೀವು ಬರದಿದ್ದರೆ ನಾವು ಕೂಡ ಬರುವುದಿಲ್ಲ’; ಬಿಸಿಸಿಐ ಎದುರು ಗುಡುಗಿದ ಪಾಕ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ!
india vs pakistan
TV9 Web
| Updated By: ಪೃಥ್ವಿಶಂಕರ|

Updated on:Nov 26, 2022 | 12:39 PM

Share

ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನ (India and Pakistan) ನಡುವಿನ ಹದಗೆಟ್ಟ ರಾಜಕೀಯ ಸಂಬಂಧದಿಂದಾಗಿ ಕ್ರಿಕೆಟ್ ಸಂಬಂಧವೂ ಹದಗೆಟ್ಟಿದೆ. ಎರಡು ದೇಶಗಳು ಪರಸ್ಪರ ದ್ವಿಪಕ್ಷೀಯ ಸರಣಿಯನ್ನು ಆಡುವುದನ್ನು ಬಿಟ್ಟು ಬಹಳ ವರ್ಷಗಳೇ ಕಳೆದಿವೆ. ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಈ ಎರಡು ತಂಡಗಳು ಮುಖಾಮುಖಿಯಾಗುವುದನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಾರೆ. ಆದಾಗ್ಯೂ, ಮುಂಬರುವ ವರ್ಷದಲ್ಲಿ ಈ ಅವಕಾಶಕ್ಕೂ ಕಲ್ಲುಬೀಳುವ ಸಾಧ್ಯತೆ ಇದೆ. ಮುಂದಿನ ವರ್ಷ ಏಷ್ಯಾಕಪ್ (Asia Cup) ಪಾಕಿಸ್ತಾನದಲ್ಲಿ ನಡೆದರೆ, ಏಕದಿನ ವಿಶ್ವಕಪ್ (ODI World Cup) ಭಾರತದಲ್ಲಿ ನಡೆಯಲಿದೆ. ಆದರೆ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಏಷ್ಯಾಕಪ್‌ಗೆ ಟೀಂ ಇಂಡಿಯಾ ಹೋಗುವುದಿಲ್ಲ ಎಂಬುದು ಈಗಾಗಲೇ ಧೃಡಪಟ್ಟಿದೆ. ಈಗ ಭಾರತದ ಈ ನಿಲುವಿಗೆ ತಿರುಗೇಟು ನೀಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಮೀಜ್ ರಾಜಾ (Rameez Raja), ಒಂದು ವೇಳೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಕಳೆದ ಬಾರಿಯೂ ಸಹ ಏಷ್ಯಾಕಪ್ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭಾರತ ಬರುವುದಿಲ್ಲ ಎಂಬ ಕಾರಣಕ್ಕಾಗಿ ಈ ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಸರ್ಕಾರದಿಂದ ಅನುಮತಿ ಸಿಗುವವರೆಗೆ ಪಾಕಿಸ್ತಾನ ಪ್ರವಾಸ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ಹೇಳಿದೆ. ಅದೇ ಸಮಯದಲ್ಲಿ ಪಾಕಿಸ್ತಾನ ಕೂಡ ಟೀಂ ಇಂಡಿಯಾ ಬರದಿದ್ದರೆ ನಮ್ಮ ತಂಡವೂ ಕೂಡ ಏಕದಿನ ವಿಶ್ವಕಪ್‌ಗೆ ಬರುವುದಿಲ್ಲ ಎಂಬ ಬೆದರಿಕೆ ಹಾಕಿದೆ.

ಇದನ್ನೂ ಓದಿ: Shreyas Iyer: ಕಳೆದ 8 ಇನ್ನಿಂಗ್ಸ್​ಗಳಲ್ಲಿ ಬರೋಬ್ಬರಿ 512 ರನ್; ಏಕದಿನ ಮಾದರಿಯಲ್ಲಿ ಶ್ರೇಯಸ್​ಗಿಲ್ಲ ಸರಿಸಾಟಿ..!

ಪಾಕಿಸ್ತಾನ ತಂಡ ವಿಶ್ವಕಪ್ ಆಡಲು ಭಾರತಕ್ಕೆ ಬರುವುದಿಲ್ಲ

ಈ ಬಗ್ಗೆ ರಮೀಜ್ ರಾಜಾ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ ಅದನ್ನು ಯಾರು ನೋಡುತ್ತಾರೆ?. ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಭಾರತ ತಂಡ ಇಲ್ಲಿಗೆ ಬಂದರೆ ಮಾತ್ರ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿ ವಿಶ್ವಕಪ್ ಆಡಲಿದೆ. ಒಂದು ವೇಳೆ ಟೀಂ ಇಂಡಿಯಾ ಬರದಿದ್ದರೆ, ಅವರು ನಾವಿಲ್ಲದೆ (ಪಾಕಿಸ್ತಾನ ತಂಡ) ವಿಶ್ವಕಪ್ ಆಡಬೇಕಾಗುತ್ತದೆ. ನಾವೂ ಕೂಡ ಕಠಿಣ ನಿಲುವು ತೆಗೆದುಕೊಳ್ಳಲು ಬದ್ಧರಿದ್ದೇವೆ. ನಮ್ಮ ತಂಡ ಉತ್ತಮ ಆಟ ಪ್ರದರ್ಶಿಸುತ್ತಿದೆ. ಅಲ್ಲದೆ ನಾವು ನಮ್ಮ ಮಂಡಳಿಯ ಆರ್ಥಿಕ ಸ್ಥಿತಿಯನ್ನು ಸಹ ಸುಧಾರಿಸಬೇಕಾಗಿದೆ. ನಮ್ಮ ತಂಡ ಉತ್ತಮವಾಗಿ ಆಡಿದರೆ ಮಾತ್ರ ಅದು ಸಂಭವಿಸುತ್ತದೆ. ಇದಕ್ಕೆ ಪೂರಕವೆಂಬಂತೆ ನಮ್ಮ ತಂಡ 2021ರ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಿದೆ. 2022 ರ ಏಷ್ಯಾಕಪ್‌ನಲ್ಲಿಯೂ ನಾವು ಭಾರತವನ್ನು ಸೋಲಿಸಿದ್ದೇವೆ. ಒಂದು ವರ್ಷದ ಅವಧಿಯಲ್ಲಿ ನಾವು ಬಿಲಿಯನ್ ಡಾಲರ್ ತಂಡವನ್ನು ಎರಡು ಬಾರಿ ಸೋಲಿಸಿದ್ದೇವೆ ಎಂದಿದ್ದಾರೆ.

2008ರ ನಂತರ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಿಲ್ಲ

ಭಾರತ ಕೊನೆಯ ಬಾರಿಗೆ 2008ರಲ್ಲಿ ಏಷ್ಯಾಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಪಾಕಿಸ್ತಾನಿ ತಂಡ ಕೂಡ 2016 ರಲ್ಲಿ ಐಸಿಸಿ ಟಿ20 ವಿಶ್ವಕಪ್‌ಗಾಗಿ ಕೊನೆಯ ಬಾರಿಗೆ ಭಾರತಕ್ಕೆ ಬಂದಿತ್ತು. ಏಷ್ಯಾಕಪ್ ಹೊರತಾಗಿ 2025ರ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವುದರಿಂದ ಭಾರತಕ್ಕೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ. 2008ರ ನಂತರ ಮೊದಲ ಬಾರಿಗೆ ಪಾಕಿಸ್ತಾನ ಐಸಿಸಿ ಟೂರ್ನಿಯನ್ನು ಆಯೋಜಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sat, 26 November 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್