NZ vs PAK, ICC World Cup: ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು ಎರಡು ಪಂದ್ಯ: ನ್ಯೂಝಿಲೆಂಡ್ ಗೆದ್ದರೆ 4 ತಂಡಗಳು ಹೊರಕ್ಕೆ
England vs Australia, ICC ODI World Cup: ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಫಲಿತಾಂಶ ಕೇವಲ ಈ ಎರಡು ತಂಡಕ್ಕೆ ಮಾತ್ರವಲ್ಲದೆ ಇತರೆ ಟೀಮ್ಗಳ ಮೇಲೂ ಪರಿಣಾಮ ಬೀರಲಿದೆ. ಇಂದು ನ್ಯೂಝಿಲೆಂಡ್ ಗೆದ್ದರೆ ಪಾಕಿಸ್ತಾನ, ಶ್ರೀಲಂಕಾ, ನೆದರ್ಲೆಂಡ್ಸ್ ಮತ್ತು ಇಂಗ್ಲೆಂಡ್ ತಂಡ ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬೀಳಲಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು (ICC ODI World Cup) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಟಾಮ್ ಲಾಥಮ್ ನಾಯಕತ್ವದ ನ್ಯೂಝಿಲೆಂಡ್ ಮತ್ತು ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಮುಖಾಮುಖಿ ಆಗಲಿದೆ. ಮಧ್ಯಾಹ್ನ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಇಂಗ್ಲೆಂಡ್ ಹಾಗೂ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಸೆಣೆಸಾಟ ನಡೆಸಲಿದೆ. ಇಂದು ನಡೆಯಲಿರುವ ಎರಡೂ ಮ್ಯಾಚ್ ಹೈವೋಲ್ಟೇಜ್ ಪಂದ್ಯ ಆಗುವ ನಿರೀಕ್ಷೆ ಇದೆ.
ಕಿವೀಸ್-ಪಾಕ್
ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಫಲಿತಾಂಶ ಕೇವಲ ಈ ಎರಡು ತಂಡಕ್ಕೆ ಮಾತ್ರವಲ್ಲದೆ ಇತರೆ ಟೀಮ್ಗಳ ಮೇಲೂ ಪರಿಣಾಮ ಬೀರಲಿದೆ. ಇಂದು ನ್ಯೂಝಿಲೆಂಡ್ ಗೆದ್ದರೆ ಪಾಕಿಸ್ತಾನ, ಶ್ರೀಲಂಕಾ, ನೆದರ್ಲೆಂಡ್ಸ್ ಮತ್ತು ಇಂಗ್ಲೆಂಡ್ ತಂಡ ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಬಾಬರ್ ಪಡೆ ಗೆಲ್ಲಲಿ ಎಂದು ಇತರೆ ತಂಡಗಳು ಕೂಡ ಹರಸುತ್ತಿದೆ. ಗೆಲುವಿನ ಲಯಕ್ಕೆ ಮರಳಿರುವ ಪಾಕ್ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹೇಗೆ ಪ್ರದರ್ಶನ ನೀಡುತ್ತೆ ನೋಡಬೇಕು. ಮತ್ತೊಂದೆಡೆ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಕಿವೀಸ್ಗೆ ಕೂಡ ಗೆಲುವು ಅಗತ್ಯ.
ನ್ಯೂಜಿಲೆಂಡ್ಗೆ ಮತ್ತೊಂದು ಬಿಗ್ ಶಾಕ್; ವಿಶ್ವಕಪ್ನಿಂದ ಹೊರಬಿದ್ದ ತಂಡದ ಸ್ಟಾರ್ ವೇಗಿ..!
ಆಸೀಸ್-ಇಂಗ್ಲೆಂಡ್
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂಗ್ಲೆಂಡಿನ ಕಳಪೆ ಪ್ರದರ್ಶನ ಕಾಂಗರೂ ಪಡೆಯ ವಿರುದ್ಧವೂ ಮುಂದುವರೆಯುತ್ತಾ ನೋಡಬೇಕು. ಮತ್ತೊಂದೆಡೆ, ಸೆಮಿಫೈನಲ್‌ಗೆ ಲಗ್ಗೆ ಇಡಲು ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಜೋಸ್ ಬಟ್ಲರ್ ನಾಯಕತ್ವದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಕೇವಲ ಒಂದು ಗೆಲುವು ಸಾಧಿಸಿದ್ದು ಬಿಟ್ಟರೆ, ಇತರ ಎಲ್ಲಾ ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ್ದಾರೆ. ನೆದರ್ಲೆಂಡ್ಸ್ ಸಹ ಹಾಲಿ ಚಾಂಪಿಯನ್‌ಗಳಿಗಿಂತ ಹೆಚ್ಚು ಗೆಲುವು ಸಾಧಿಸಿದೆ.
ತಂಡಗಳು:
ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.
ಪಾಕಿಸ್ತಾನ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮುಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಆಗಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಮೊಹಮ್ಮದ್ ಅಫ್ರಿದಿ, ಮೊಹಮ್ಮದ್ ವಾಸಿಂ.
ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್ವುಡ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಸೀನ್ ಅಬಾಟ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ