AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ ಪಡೆ ಈವರೆಗೆ 8 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು, ಇದೀಗ ಈ ಸಂಖ್ಯೆಯನ್ನು 9ಕ್ಕೇರಿಸುವ ವಿಶ್ವಾಸದಲ್ಲಿದೆ.

Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?
Kar Vs Jk
ಝಾಹಿರ್ ಯೂಸುಫ್
|

Updated on:Feb 26, 2026 | 12:11 PM

Share

ರಣಜಿ ಟೂರ್ನಿಯ 91ನೇ ಸೀಸನ್​ನ ಫೈನಲ್​ ಪಂದ್ಯ ಶುರುವಾಗಿದೆ. ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ಈ ಬಾರಿಯ ಫೈನಲ್​ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಮೊದಲ ಇನಿಂಗ್ಸ್ ಆಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಭೋಜನಾ ವಿರಾಮದ ವೇಳೆಗೆ 34 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 104 ರನ್​ ಕಲೆಹಾಕಿದೆ. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿರುವ ಕಾಶ್ಮೀರಿ ಪಡೆ ಮೊದಲ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿದೆ.

ಹೀಗೆ ಬೃಹತ್ ಮೊತ್ತ ಪೇರಿಸಿ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ..

  • ರಣಜಿ ಟ್ರೋಫಿ ಫೈನಲ್ ಪಂದ್ಯವು ಡ್ರಾ ಆದಲ್ಲಿ, ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ  ಸಾಧಿಸಿದ ತಂಡವನ್ನು ವಿಜೇತ ಎಂದು ಘೋಷಿಸಲಾಗುತ್ತದೆ.
  • ಒಂದು ವೇಳೆ ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್​ನಲ್ಲಿ 400 ರನ್​ ಕಲೆಹಾಕಿ, ಕರ್ನಾಟಕ ತಂಡ ಮೊದಲ ಇನಿಂಗ್ಸ್​ನಲ್ಲಿ 399 ರನ್​ಗಳಿಸಿ ಪಂದ್ಯ ಡ್ರಾ ಆದರೆ, ಮೊದಲ ಇನಿಂಗ್ಸ್​ನಲ್ಲಿ 1 ರನ್​ಗಳ ಮುನ್ನಡೆ ಹೊಂದಿರುವ ಜಮ್ಮು-ಕಾಶ್ಮೀರ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.
  • ಜಮ್ಮು-ಕಾಶ್ಮೀರ ತಂಡ ಮೊದಲ ಇನಿಂಗ್ಸ್​ನಲ್ಲಿ 400 ರನ್​ಗಳಿಸಿ, ಕರ್ನಾಟಕ ಪ್ರಥಮ ಇನಿಂಗ್ಸ್​ನಲ್ಲಿ 401 ರನ್​ಗಳಿಸಿ ಪಂದ್ಯ ಡ್ರಾನಲ್ಲಿ ಅಂತ್ಯವಾದರೆ, ಮೊದಲ ಇನಿಂಗ್ಸ್​ನಲ್ಲಿ 1 ರನ್​ಗಳ ಮುನ್ನಡೆ ಹೊಂದಿರುವ ಕರ್ನಾಟಕ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆ.
  • ಹೀಗೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ತಂಡ ಚಾಂಪಿಯನ್ ಪಟ್ಟಕ್ಕೇರಬೇಕಿದ್ದರೆ ಎರಡು ತಂಡಗಳು ಮೊದಲ ಇನಿಂಗ್ಸ್​ನಲ್ಲಿ ಆಲೌಟ್ ಆಗಿರಬೇಕು. ಅಂದರೆ ಜಮ್ಮು-ಕಾಶ್ಮೀರದ ಇನಿಂಗ್ಸ್ ಮುಗಿದು ಕರ್ನಾಟಕ ತಂಡದ ಮೊದಲ ಇನಿಂಗ್ಸ್ ಕೊನೆಗೊಂಡಿದ್ದರೆ ಮಾತ್ರ ಮೊದಲ ಇನಿಂಗ್ಸ್​ನ ಮುನ್ನಡೆಯ ಆಧಾರದ ಮೇಲೆ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ರಣಜಿ ಟ್ರೋಫಿ ಫೈನಲ್ ಪಂದ್ಯದ ನಿಯಮಗಳು:

  • ಮೊದಲ ಇನಿಂಗ್ಸ್ ಮುನ್ನಡೆ: ಐದು ದಿನಗಳ ಆಟದ ನಂತರವೂ ಪಂದ್ಯವು ಯಾವುದೇ ಸ್ಪಷ್ಟ ಫಲಿತಾಂಶ ನೀಡದೆ ಡ್ರಾನಲ್ಲಿ ಅಂತ್ಯಗೊಂಡರೆ,​ ಯಾವ ತಂಡವು ತನ್ನ ಮೊದಲ ಇನಿಂಗ್ಸ್‌ನಲ್ಲಿ (ಆಲೌಟ್ ಆದ ಬಳಿಕ) ಹೆಚ್ಚಿನ ರನ್ ಗಳಿಸಿರುತ್ತದೆಯೋ ಆ ತಂಡಕ್ಕೆ ಚಾಂಪಿಯನ್ ಪಟ್ಟ ಸಿಗುತ್ತದೆ.
  • ಮೊದಲ ಇನಿಂಗ್ಸ್ ಟೈ: ಒಂದು ವೇಳೆ ಮೊದಲ ಇನಿಂಗ್ಸ್ ಮೊತ್ತವೂ ಸಮನಾಗಿದ್ದರೆ ಅಥವಾ ಮೊದಲ ಇನಿಂಗ್ಸ್ ಪೂರ್ಣಗೊಳ್ಳದಿದ್ದರೆ, ಲೀಗ್ ಹಂತದಲ್ಲಿ ಹೆಚ್ಚಿನ ಅಂಕಗಳನ್ನು (Points) ಗಳಿಸಿದ ತಂಡವನ್ನು ವಿಜೇತ ಎಂದು ಪರಿಗಣಿಸಲಾಗುತ್ತದೆ.
  • ಹಿಂದಿನ ಇತಿಹಾಸ: ಕಳೆದ ವರ್ಷ (2024-25) ವಿದರ್ಭ ತಂಡವು ಕೇರಳ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಆಗಿತ್ತು.

ಇದನ್ನೂ ಓದಿ: ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು!

ಒಟ್ಟಾರೆಯಾಗಿ ಹೇಳುವುದಾದರೆ ಫೈನಲ್ ಪಂದ್ಯದ ಮೊದಲ ಇನಿಂಗ್ಸ್‌ನ ಪ್ರದರ್ಶನವು ಅತ್ಯಂತ ನಿರ್ಣಾಯಕವಾಗಿರುತ್ತದೆ. ಅದರಲ್ಲೂ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ತಂಡಕ್ಕೆ ಬೃಹತ್ ಮೊತ್ತ ಪೇರಿಸಲು ಉತ್ತಮ ಅವಕಾಶವಿದೆ. ಈ ಅವಕಾಶವನ್ನು ಬಳಸಿಕೊಂಡು ಬೃಹತ್ ಮೊತ್ತ ಪೇರಿಸಿದರೆ ಕರ್ನಾಟಕ ತಂಡ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಕರ್ನಾಟಕ ತಂಡವು ಜಮ್ಮು-ಕಾಶ್ಮೀರ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸುವುದು ಅತ್ಯಗತ್ಯ.

Published On - 12:53 pm, Tue, 24 February 26

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!