AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Final: ರಣಜಿ ಟ್ರೋಫಿ ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್​?

Ranji Trophy Final 2022: 4ನೇ ದಿನದಾಟದ ಊಟದ ವಿರಾಮದ ವೇಳೆಗೆ ಮಧ್ಯ ಪ್ರದೇಶ ತಂಡವು 6 ವಿಕೆಟ್ ಕಳೆದುಕೊಂಡು 475 ರನ್​ ಕಲೆಹಾಕಿದೆ. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 101 ರನ್​ಗಳ ಮುನ್ನಡೆ ಸಾಧಿಸಿದೆ.

Ranji Trophy Final: ರಣಜಿ ಟ್ರೋಫಿ ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್​?
Madhya Pradesh vs Mumbai
TV9 Web
| Updated By: ಝಾಹಿರ್ ಯೂಸುಫ್|

Updated on: Jun 25, 2022 | 12:43 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ (Ranji Trophy Final 2022) ಪಂದ್ಯವು ಏಕಪಕ್ಷೀಯದತ್ತ ಮುಖ ಮಾಡುತ್ತಿದೆ. ಮುಂಬೈ-ಮಧ್ಯ ಪ್ರದೇಶ (Madhya Pradesh vs Mumbai) ನಡುವಣ ಫೈನಲ್ ಕಾದಾಟವು ಇದೀಗ 4ನೇ ದಿನದಾಟಕ್ಕೆ ಕಾಲಿಟ್ಟಿದೆ. ಇದಾಗ್ಯೂ 2ನೇ ಇನಿಂಗ್ಸ್ ಆರಂಭವಾಗಿಲ್ಲ. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಸರ್ಫರಾಜ್ ಖಾನ್ (134) ಅವರ ಶತಕದ ನೆರವಿನಿಂದ 374 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಮಧ್ಯ ಪ್ರದೇಶ ತಂಡವು ಯಶ್ ದುಬೆ (133) ಅವರ ಭರ್ಜರಿ ಶತಕದೊಂದಿಗೆ ಉತ್ತಮ ಆರಂಭ ಪಡೆಯಿತು. ಆ ಬಳಿಕ ಬಂದ ಶುಭಂ ಶರ್ಮಾ (116) ಹಾಗೂ ರಜತ್ ಪಾಟಿದಾರ್ ಕೂಡ ಸೆಂಚುರಿ ಸಿಡಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.

4ನೇ ದಿನದಾಟದ ಊಟದ ವಿರಾಮದ ವೇಳೆಗೆ ಮಧ್ಯ ಪ್ರದೇಶ ತಂಡವು 6 ವಿಕೆಟ್ ಕಳೆದುಕೊಂಡು 475 ರನ್​ ಕಲೆಹಾಕಿದೆ. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 101 ರನ್​ಗಳ ಮುನ್ನಡೆ ಸಾಧಿಸಿದೆ. ಇದಾಗ್ಯೂ ಇನ್ನೂ ಕೂಡ ಡಿಕ್ಲೇರ್ ಘೋಷಿಸಿಲ್ಲ. ಕ್ರೀಸ್​ನಲ್ಲಿ 195 ಎಸೆತಗಳಲ್ಲಿ 120 ರನ್​ ಬಾರಿಸಿರುವ ರಜತ್ ಪಾಟಿದಾರ್ ಹಾಗೂ ಸರನ್ಶ್ ಜೈನ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಪ್ರಸ್ತುತ ಸನ್ನಿವೇಶ ಗಮಿಸಿದರೆ ಮಧ್ಯ ಪ್ರದೇಶ ತಂಡವು ಆಲೌಟ್ ಆಗದಿದ್ದರೆ, ನಾಲ್ಕನೇ ದಿನದಾಟವನ್ನು ಪೂರ್ಣಗೊಳಿಸುವ ಸಾಧ್ಯತೆ ಹೆಚ್ಚು. ಅಲ್ಲದೆ ಐದನೇ ದಿನದಾಟದ ಅರ್ಧದಲ್ಲಿ ಡಿಕ್ಲೇರ್ ಘೋಷಿಸಬಹುದು.

ಈಗಾಗಲೇ ಬೃಹತ್ ಮುನ್ನಡೆ ಪಡೆದಿರುವ ಮಧ್ಯ ಪ್ರದೇಶ ತಂಡವು ಐದನೇ ದಿನದಾಟದಲ್ಲಿ ಡಿಕ್ಲೇರ್ ಘೋಷಿಸಿದರೆ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳಲಿದೆ. ಇದರಿಂದ ಮಧ್ಯ ಪ್ರದೇಶ ತಂಡವು ಚಾಂಪಿಯನ್ ಪಟ್ಟಕ್ಕೇರಬಹುದು. ಏಕೆಂದರೆ ರಣಜಿ ಟೂರ್ನಿಯ ನಾಕೌಟ್ ಹಾಗೂ ಫೈನಲ್​ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಇನಿಂಗ್ಸ್​ನ ಮುನ್ನಡೆಯ ಆಧಾರದ ಮೇಲೆ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಅಂದರೆ ಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯವಾದರೆ, ಮೊದಲ ಇನಿಂಗ್ಸ್​ನಲ್ಲಿ ಯಾವ ತಂಡವು ಮುನ್ನಡೆ ಪಡೆದಿರುತ್ತದೆಯೋ ಆ ತಂಡವನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ. ಇದೀಗ ಮಧ್ಯ ಪ್ರದೇಶ ತಂಡವು ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯವನ್ನು ಡ್ರಾಗೊಳಿಸಲು ಮಧ್ಯ ಪ್ರದೇಶ ತಂಡವು ಹೆಚ್ಚಿನ ಆಸಕ್ತಿ ತೋರಲಿದೆ. ಈ ಮೂಲಕ ಮೊದಲ ಇನಿಂಗ್ಸ್​ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಳ್ಳಬಹುದು.

ಹೀಗಾಗಿ ಈ ಬಾರಿಯ ರಣಜಿ ಟೂರ್ನಿಯ ಚಾಂಪಿಯನ್ ಆಗಿ ಮಧ್ಯ ಪ್ರದೇಶ ತಂಡವು ಹೊರಹೊಮ್ಮುವ ಸಾಧ್ಯತೆ ಹೆಚ್ಚು. ಇದಾಗ್ಯೂ ನಾಟಕೀಯ ಕುಸಿತಗಳಿಗೆ ಕಾರಣವಾಗಿ ಪಂದ್ಯದ ಫಲಿತಾಂಶದಲ್ಲಿ ಬದಲಾವಣೆ ಕಂಡು ಬರಲಿದೆಯಾ ಕಾದು ನೋಡಬೇಕಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ