
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಈ ಎರಡು ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್‌ಗೆ ಪ್ರವೇಶಿಸಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್‌ಗೆ ಅರ್ಹತೆ ಪಡೆಯಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಗಳಲ್ಲಿರುವ ತಂಡಗಳು.
ಐಸಿಸಿ ನಿಯಮದ ಪ್ರಕಾರ, ಸೆಮಿಫೈನಲ್ ಪಂದ್ಯಗಳು ನಿಗದಿತ ದಿನ ಮತ್ತು ಮೀಸಲು ದಿನದಂದು (Reserve Day) ಮಳೆಯಿಂದಾಗಿ ನಡೆಯದಿದ್ದರೆ ಅಥವಾ ಇನ್ನತರೆ ಕಾರಣಗಳಿಂದ ಪಂದ್ಯ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಈ ಹಿಂದಿನ ಅಂಕ ಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಇಲ್ಲಿ ಸೆಮಿಫೈನಲ್ಗೂ ಮುನ್ನ ಸೂಪರ್-8 ಪಂದ್ಯಗಳು ನಡೆದಿದ್ದವು. ಹೀಗಾಗಿ ಸೂಪರ್-8 ಸುತ್ತಿನ ಅಂಕ ಪಟ್ಟಿಯನ್ನು ಪರಿಗಣಿಸಲಾಗುತ್ತದೆ. ಅದರಂತೆ ಸೂಪರ್-8 ಸುತ್ತಿನ ಗ್ರೂಪ್-1 ರ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ಹಾಗೂ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ತಂಡಗಳು ಫೈನಲ್ಗೇರಲಿದೆ.
ಇದನ್ನೂ ಓದಿ: OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಂದರೆ ಸೌತ್ ಆಫ್ರಿಕಾ-ನ್ಯೂಝಿಲೆಂಡ್, ಭಾರತ-ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ ಸೂಪರ್-8 ಸುತ್ತಿನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಫೈನಲ್ಗೇರಲಿದೆ.