AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ ಬರದಿದ್ದರೆ ಬೇಡ, ಅಷ್ಟೇ: ಸಕ್ಲೇನ್ ಮುಷ್ತಾಕ್

Champions trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿರುವುದರಿಂದ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿದೆ.

Champions Trophy 2025: ಭಾರತ ಬರದಿದ್ದರೆ ಬೇಡ, ಅಷ್ಟೇ: ಸಕ್ಲೇನ್ ಮುಷ್ತಾಕ್
IND vs PAK
ಝಾಹಿರ್ ಯೂಸುಫ್
|

Updated on:Aug 04, 2024 | 11:38 AM

Share

ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ತಂಡದ ಪಾಲ್ಗೊಳ್ಳುವಿಕೆಯ ಬಗ್ಗೆ ಇನ್ನೂ ಸಹ ಖಚಿತತೆ ಏರ್ಪಟ್ಟಿಲ್ಲ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಯಿಂದ ಭಾರತ ಹಿಂದೆ ಸರಿಯುವ ಸಾಧ್ಯತೆಯಿದೆ ಎಂದು ವರದಿಗಳಾಗಿವೆ. ಈ ವರದಿಗಳ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಪಾಕ್ ತಂಡದ ಮಾಜಿ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರು ಬರದಿದ್ದರೆ, ಬೇಡ ಅಷ್ಟೇ… ನಾನು ಟೂರ್ನಿಯನ್ನು ಆಯೋಜಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಚಾಂಪಿಯನ್ಸ್​ ಟ್ರೋಫಿಯಲ್ಲಿ ಭಾರತವು ಆಡಲು ಬಯಸಿದರೆ ಪಾಕಿಸ್ತಾನಕ್ಕೆ ಬರಲಿ. ಅವರು ಬರಲು ಬಯಸದಿದ್ದರೆ, ಪರವಾಗಿಲ್ಲ. ಅವರ ನಿರ್ಧಾರದ ಬಗ್ಗೆ ವಿವಾದ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ. ಇದು ಯಾರನ್ನೂ ಕೆಟ್ಟದಾಗಿ ಮಾಡುವುದಿಲ್ಲ. ಇದು ಐಸಿಸಿಯ ಟೂರ್ನಮೆಂಟ್. ಅವರು ಸಮಸ್ಯೆಯನ್ನು ಪರಿಶೀಲಿಸುತ್ತಾರೆ ಎಂದು ಸಕ್ಲೇನ್ ಮುಷ್ತಾಕ್ ಹೇಳಿದ್ದಾರೆ.

ಇದಾಗ್ಯೂ ಭಾರತ ತಂಡವು ಪಾಕ್​ನಲ್ಲಿ ಟೂರ್ನಿ ಆಡಲು ಮುಂದಾಗದಿದ್ದರೆ, ಅವರು ಹೊರಗುಳಿಯಲಿ. ಇದರಿಂದ ಏನೂ ಆಗುವುದಿಲ್ಲ. ನಾವು ಟೂರ್ನಿಯನ್ನು ಆಯೋಜಿಸಿದರೆ ಸಾಕಲ್ವಾ ಎಂದು ಸಕ್ಲೇನ್ ಮುಷ್ತಾಕ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡ ಪಾಕ್​ಗೆ ತೆರಳಿದೆಯಾ?

2006 ರ ಬಳಿಕ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಿಲ್ಲ. ಆದರೆ ಈ ಬಾರಿ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಿ ನಡೆಯುತ್ತಿದೆ. ಹೀಗಾಗಿ ಈ ಟೂರ್ನಿಯಲ್ಲಿ ಭಾರತ ಭಾಗವಹಿಸಲಿದೆಯಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಐಸಿಸಿ ಟೂರ್ನಿಗಳನ್ನು ಸ್ಥಳಾಂತರಿಸಬೇಕಿದ್ದರೆ ನಿರ್ದಿಷ್ಠ ಕಾರಣಗಳಿರಬೇಕಾಗುತ್ತದೆ. ಇಲ್ಲಿ ಬಿಸಿಸಿಐ ಟೂರ್ನಿಯನ್ನು ಸ್ಥಳಾಂತರಿಸಲು ಸುರಕ್ಷತೆಯ ಕಾರಣಗಳನ್ನು ನೀಡಿದರೂ, ಅದಕ್ಕೆ ಇತರೆ ಕ್ರಿಕೆಟ್ ಮಂಡಳಿಗಳೂ ಕೂಡ ಕೈ ಜೋಡಿಸಬೇಕಾಗುತ್ತದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಆದರೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಇಂಗ್ಲೆಂಡ್, ನ್ಯೂಝಿಲೆಂಡ್​ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಿದೆ. ಇದೇ ವಾದವನ್ನು ಮುಂದಿಟ್ಟು ಟೂರ್ನಿಯನ್ನು ಸ್ಥಳಾಂತರಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಿಂದೇಟು ಹಾಕಬಹುದು.

ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳು:

  1. ಭಾರತ
  2. ಪಾಕಿಸ್ತಾನ್
  3. ಸೌತ್ ಆಫ್ರಿಕಾ
  4. ನ್ಯೂಝಿಲೆಂಡ್
  5. ಅಫ್ಘಾನಿಸ್ತಾನ್
  6. ಇಂಗ್ಲೆಂಡ್
  7. ಬಾಂಗ್ಲಾದೇಶ್
  8. ಆಸ್ಟ್ರೇಲಿಯಾ

ಈ ಎಂಟು ತಂಡಗಳನ್ನು ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಎರಡು ಗ್ರೂಪ್​ಗಳಲ್ಲಿ ತಲಾ 4 ಟೀಮ್​ಗಳು ಕಾಣಿಸಿಕೊಳ್ಳಲಿದೆ. ಅಲ್ಲದೆ ಮೊದಲ ಸುತ್ತಿನಲ್ಲಿ ಗ್ರೂಪ್ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಅಂದರೆ ಗ್ರೂಪ್-ಎ ನಲ್ಲಿರುವ ಭಾರತ ತಂಡವು, ಪಾಕಿಸ್ತಾನ್, ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ತಂಡಗಳನ್ನು ಎದುರಿಸಲಿದೆ.

ಚಾಂಪಿಯನ್ಸ್ ಟ್ರೋಫಿ ಗ್ರೂಪ್​:

  • ಗ್ರೂಪ್-A
  • ಭಾರತ
  • ಪಾಕಿಸ್ತಾನ್
  • ಬಾಂಗ್ಲಾದೇಶ್
  • ನ್ಯೂಝಿಲೆಂಡ್
  • ಗ್ರೂಪ್-B
  • ಆಸ್ಟ್ರೇಲಿಯಾ
  • ಇಂಗ್ಲೆಂಡ್
  • ಸೌತ್ ಆಫ್ರಿಕಾ
  • ಅಫ್ಘಾನಿಸ್ತಾನ್.

Published On - 11:37 am, Sun, 4 August 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?