ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ತಂಡದ ಪಾಲ್ಗೊಳ್ಳುವಿಕೆಯ ಬಗ್ಗೆ ಇನ್ನೂ ಸಹ ಖಚಿತತೆ ಏರ್ಪಟ್ಟಿಲ್ಲ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಯಿಂದ ಭಾರತ ಹಿಂದೆ ಸರಿಯುವ ಸಾಧ್ಯತೆಯಿದೆ ಎಂದು ವರದಿಗಳಾಗಿವೆ. ಈ ವರದಿಗಳ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಪಾಕ್ ತಂಡದ ಮಾಜಿ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರು ಬರದಿದ್ದರೆ, ಬೇಡ ಅಷ್ಟೇ… ನಾನು ಟೂರ್ನಿಯನ್ನು ಆಯೋಜಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತವು ಆಡಲು ಬಯಸಿದರೆ ಪಾಕಿಸ್ತಾನಕ್ಕೆ ಬರಲಿ. ಅವರು ಬರಲು ಬಯಸದಿದ್ದರೆ, ಪರವಾಗಿಲ್ಲ. ಅವರ ನಿರ್ಧಾರದ ಬಗ್ಗೆ ವಿವಾದ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ. ಇದು ಯಾರನ್ನೂ ಕೆಟ್ಟದಾಗಿ ಮಾಡುವುದಿಲ್ಲ. ಇದು ಐಸಿಸಿಯ ಟೂರ್ನಮೆಂಟ್. ಅವರು ಸಮಸ್ಯೆಯನ್ನು ಪರಿಶೀಲಿಸುತ್ತಾರೆ ಎಂದು ಸಕ್ಲೇನ್ ಮುಷ್ತಾಕ್ ಹೇಳಿದ್ದಾರೆ.
ಇದಾಗ್ಯೂ ಭಾರತ ತಂಡವು ಪಾಕ್ನಲ್ಲಿ ಟೂರ್ನಿ ಆಡಲು ಮುಂದಾಗದಿದ್ದರೆ, ಅವರು ಹೊರಗುಳಿಯಲಿ. ಇದರಿಂದ ಏನೂ ಆಗುವುದಿಲ್ಲ. ನಾವು ಟೂರ್ನಿಯನ್ನು ಆಯೋಜಿಸಿದರೆ ಸಾಕಲ್ವಾ ಎಂದು ಸಕ್ಲೇನ್ ಮುಷ್ತಾಕ್ ಅಭಿಪ್ರಾಯಪಟ್ಟಿದ್ದಾರೆ.
2006 ರ ಬಳಿಕ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಿಲ್ಲ. ಆದರೆ ಈ ಬಾರಿ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಿ ನಡೆಯುತ್ತಿದೆ. ಹೀಗಾಗಿ ಈ ಟೂರ್ನಿಯಲ್ಲಿ ಭಾರತ ಭಾಗವಹಿಸಲಿದೆಯಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಏಕೆಂದರೆ ಐಸಿಸಿ ಟೂರ್ನಿಗಳನ್ನು ಸ್ಥಳಾಂತರಿಸಬೇಕಿದ್ದರೆ ನಿರ್ದಿಷ್ಠ ಕಾರಣಗಳಿರಬೇಕಾಗುತ್ತದೆ. ಇಲ್ಲಿ ಬಿಸಿಸಿಐ ಟೂರ್ನಿಯನ್ನು ಸ್ಥಳಾಂತರಿಸಲು ಸುರಕ್ಷತೆಯ ಕಾರಣಗಳನ್ನು ನೀಡಿದರೂ, ಅದಕ್ಕೆ ಇತರೆ ಕ್ರಿಕೆಟ್ ಮಂಡಳಿಗಳೂ ಕೂಡ ಕೈ ಜೋಡಿಸಬೇಕಾಗುತ್ತದೆ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?
ಆದರೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಇಂಗ್ಲೆಂಡ್, ನ್ಯೂಝಿಲೆಂಡ್ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಿದೆ. ಇದೇ ವಾದವನ್ನು ಮುಂದಿಟ್ಟು ಟೂರ್ನಿಯನ್ನು ಸ್ಥಳಾಂತರಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಿಂದೇಟು ಹಾಕಬಹುದು.
ಈ ಎಂಟು ತಂಡಗಳನ್ನು ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಎರಡು ಗ್ರೂಪ್ಗಳಲ್ಲಿ ತಲಾ 4 ಟೀಮ್ಗಳು ಕಾಣಿಸಿಕೊಳ್ಳಲಿದೆ. ಅಲ್ಲದೆ ಮೊದಲ ಸುತ್ತಿನಲ್ಲಿ ಗ್ರೂಪ್ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಅಂದರೆ ಗ್ರೂಪ್-ಎ ನಲ್ಲಿರುವ ಭಾರತ ತಂಡವು, ಪಾಕಿಸ್ತಾನ್, ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ತಂಡಗಳನ್ನು ಎದುರಿಸಲಿದೆ.
ಚಾಂಪಿಯನ್ಸ್ ಟ್ರೋಫಿ ಗ್ರೂಪ್:
Published On - 11:37 am, Sun, 4 August 24