AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನೇ ಮರೆತು ಬಿಡುತ್ತಾರೆ’; ಶಾಹಿದ್ ಅಫ್ರಿದಿ

Champions Trophy 2025: ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನು ಮರೆತು ಬಿಡುತ್ತಾರೆ. ವಿರಾಟ್ ಕೊಹ್ಲಿಗೆ ಭಾರತದಲ್ಲಿ ಸಾಕಷ್ಟು ಕ್ರೇಜ್ ಇದೆ. ಪಾಕಿಸ್ತಾನದ ಜನರು ಅವರನ್ನು ತುಂಬಾ ಇಷ್ಟಪಡುತ್ತಾರೆ. ಅವರು ನನ್ನ ನೆಚ್ಚಿನ ಆಟಗಾರ ಕೂಡ. ಆದರೆ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಿಂದ ನಿವೃತ್ತಿಯಾಗಬಾರದಿತ್ತು ಎಂದು ಅಫ್ರಿದಿ ಹೇಳಿದ್ದಾರೆ.

‘ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನೇ ಮರೆತು ಬಿಡುತ್ತಾರೆ’; ಶಾಹಿದ್ ಅಫ್ರಿದಿ
ಶಾಹಿದ್ ಅಫ್ರಿದಿ, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on: Jul 12, 2024 | 11:00 PM

Share

ಟಿ20 ವಿಶ್ವಕಪ್ ಬಳಿಕ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ನಡೆದಿದೆ. 2025 ರ ಫೆಬ್ರವರಿ 19 ರಿಂದ ಮಾರ್ಚ್ 9 ರ ನಡುವೆ ನಡೆಯಲ್ಲಿರುವ ಈ ಸಮರಕ್ಕೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಆದರೆ, ಈ ಟೂರ್ನಿಯಲ್ಲಿ ಭಾಗವಹಿಸಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಾಗಿಲ್ಲ. ಹೀಗಾಗಿ ಏಷ್ಯಾಕಪ್​ನಂತೆಯೇ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಅಂದರೆ ಭಾರತದ ಪಂದ್ಯಗಳನ್ನು ದುಬೈ ಅಥವಾ ಶ್ರೀಲಂಕಾದಂತಹ ತಟಸ್ಥ ಸ್ಥಳಗಳಲ್ಲಿ ನಡೆಸಬೇಕೆಂದು ಬಿಸಿಸಿಐ ಕೋರಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಮಾಜಿ ನಾಯಕ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ.

ಟೀಂ ಇಂಡಿಯಾಗೆ ಸ್ವಾಗತ

ಮೊದಲು ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಮಾತನಾಡಿದ ಶಾಹಿದ್ ಅಫ್ರಿದಿ, ‘ನಾನು ಭಾರತ ತಂಡವನ್ನು ಸ್ವಾಗತಿಸುತ್ತೇನೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಬೇಕು. ಪಾಕಿಸ್ತಾನ ತಂಡವೂ ಪ್ರವಾಸ ಕೈಗೊಂಡಾಗ ಭಾರತದಲ್ಲಿ ಗೌರವ ಮತ್ತು ಪ್ರೀತಿ ಸಿಗುತ್ತಿತ್ತು. ಅದೇ ರೀತಿ ಭಾರತ ತಂಡ ಪಾಕಿಸ್ತಾನಕ್ಕೆ ಬಂದಾಗ ಅವರಿಗೂ ಪ್ರೀತಿ, ಗೌರವ ಸಿಕ್ಕಿತು. ಎಲ್ಲರೂ ತುಂಬಾ ಎಂಜಾಯ್ ಮಾಡಿದರು. ಕ್ರಿಕೆಟಿಗರ ಪ್ರವಾಸಗಳನ್ನು ರಾಜಕೀಯದಿಂದ ದೂರವಿಡಬೇಕು. ದೇಶದಲ್ಲಿ ಪರಸ್ಪರ ಕ್ರಿಕೆಟ್ ಆಡುವುದಕ್ಕಿಂತ ಉತ್ತಮ ರಾಜಕೀಯ ಮತ್ತೊಂದಿಲ್ಲ. ಕ್ರಿಕೆಟ್‌ಗಿಂತ ಉತ್ತಮ ರಾಜತಾಂತ್ರಿಕತೆ ಇನ್ನೊಂದಿಲ್ಲ ಎಂದು ನಾನು ಯಾವಾಗಲೂ ಹೇಳುತ್ತೇನೆ’ ಎಂದರು.

ಕೊಹ್ಲಿ ಬಗ್ಗೆ ಅಫ್ರಿದಿ ಮಾತು

ಇನ್ನು ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ ಶಾಹಿದ್, ‘ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನು ಮರೆತು ಬಿಡುತ್ತಾರೆ. ವಿರಾಟ್ ಕೊಹ್ಲಿಗೆ ಭಾರತದಲ್ಲಿ ಸಾಕಷ್ಟು ಕ್ರೇಜ್ ಇದೆ. ಪಾಕಿಸ್ತಾನದ ಜನರು ಅವರನ್ನು ತುಂಬಾ ಇಷ್ಟಪಡುತ್ತಾರೆ. ಅವರು ನನ್ನ ನೆಚ್ಚಿನ ಆಟಗಾರ ಕೂಡ. ಆದರೆ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಿಂದ ನಿವೃತ್ತಿಯಾಗಬಾರದಿತ್ತು. ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿದ್ದು ಫಿಟ್ ಕೂಡ ಆಗಿದ್ದಾರೆ. ಹೀಗಾಗಿ ಅವರು ಟಿ20 ಆಡಬೇಕು. ಅವರ ಉಪಸ್ಥಿತಿಯು ಇತರ ಆಟಗಾರರಿಗೆ ಬೆಂಬಲವನ್ನು ನೀಡುತ್ತದೆ. ವಿರಾಟ್‌ನಿಂದ ಕಲಿಯಬಲ್ಲವರು ಬೇರೆಯವರಿಂದ ಕಲಿಯಲು ಸಾಧ್ಯವಿಲ್ಲ’ ಎಂದಿದ್ದಾರೆ.

ಬಿಸಿಸಿಐ ನಿರ್ಧಾರದ ಮೇಲೆ ಎಲ್ಲರ ಕಣ್ಣು

2008 ರ ಏಷ್ಯಾಕಪ್ ಮತ್ತು ಕಳೆದ ವರ್ಷ ನಡೆದ ಏಷ್ಯಾಕಪ್​ನ ಕೆಲವು ಪಂದ್ಯಗಳನ್ನು ಆತಿಥ್ಯ ವಹಿಸಿದ್ದರೂ, 1996 ರ ನಂತರ ಪಾಕಿಸ್ತಾನವು ಪ್ರಮುಖ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಐಸಿಸಿ ಟೂರ್ನಿಗಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಬಿಸಿಸಿಐ ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ. ಮಂಡಳಿಯ ಈ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಬಿಸಿಸಿಐ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ, ಆದರೆ ತಂಡವು ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್