AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ದಾಖಲೆ ಬರೆದ ಪಾಕ್ ಆಟಗಾರ

Iftikhar Ahmed Six Sixes: ಅಮೆರಿಕದ ಜಸ್ಕರನ್ ಮಲ್ಹೋತ್ರಾ. ಈ ನಾಲ್ವರು ಆಟಗಾರರು ಮಾತ್ರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಓವರ್‌ನಲ್ಲಿ ಆರು ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6,6,6,6,6,6: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ದಾಖಲೆ ಬರೆದ ಪಾಕ್ ಆಟಗಾರ
Iftikhar Ahmed
TV9 Web
| Edited By: |

Updated on:Feb 05, 2023 | 5:04 PM

Share

PSL Exhibition Match: ಪಾಕಿಸ್ತಾನ ಸೂಪರ್ ಲೀಗ್​ನ (PSL) ಪ್ರದರ್ಶನ ಪಂದ್ಯದಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಇಫ್ತಿಕಾರ್ ಅಹ್ಮದ್ (Iftikhar Ahmed) ದಾಖಲೆ ಬರೆದಿದ್ದಾರೆ. ಪೇಶಾವರ್ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್ ನಡುವಣ ಈ ಪಂದ್ಯದಲ್ಲಿ ಇಫ್ತಿಕಾರ್ 6 ಎಸೆತಗಳಲ್ಲಿ 36 ರನ್ ಬಾರಿಸಿ ಮಿಂಚಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಫ್ತಿಕಾರ್ ಅಹ್ಮದ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಸ್ಪೋಟಕ ಬ್ಯಾಟಿಂಗ್ ಮೂಲಕ ಪೇಶಾವರ್​ ಝಲ್ಮಿ ಬೌಲರ್​​ಗಳ ಬೆಂಡೆತ್ತಿದ ಇಫ್ತಿಕಾರ್ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬ್ಯಾಟಿಂಗ್ ವರಸೆ ಬದಲಿಸಿದ ಹಿರಿಯ ಆಟಗಾರ ಮೈದಾನದ ಮೂಲೆ ಮೂಲೆಗೂ ಚೆಂಡನ್ನಟ್ಟಿದರು.

ಪರಿಣಾಮ 19 ಓವರ್​ಗಳಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡದ ಮೊತ್ತ 148 ಕ್ಕೆ ಬಂದು ನಿಂತಿತು. ಇನ್ನು ವಹಾಬ್ ರಿಯಾಝ್ ಎಸೆದ 20ನೇ ಓವರ್​ನಲ್ಲಿ ಇಫ್ತಿಕಾರ್ ಅಹ್ಮದ್ ಬ್ಯಾಕ್ ಟು ಬ್ಯಾಕ್ 6 ಸಿಕ್ಸ್​ಗಳನ್ನು ಸಿಡಿಸಿದರು. ಈ ಮೂಲಕ 36 ರನ್​ ಕಲೆಹಾಕಿ ತಂಡದ ಮೊತ್ತವನ್ನು 184 ಕ್ಕೆ ತಂದು ನಿಲ್ಲಿಸಿದರು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಈ ಪಂದ್ಯದಲ್ಲಿ 50 ಎಸೆತಗಳಲ್ಲಿ ಅಜೇಯ 94 ರನ್​ ಬಾರಿಸಿದ ಇಫ್ತಿಕಾರ್ ಅಹ್ಮದ್ ಅವರ ಸಿಡಿಲಬ್ಬರದ ಸಿಕ್ಸ್​ಗಳ ವಿಡಿಯೋ ಇದೀಗ ವೈರಲ್ ಆಗಿದೆ.

ಇಫ್ತಿಕಾರ್ ಅಹ್ಮದ್ ಈ ಪಂದ್ಯಕ್ಕೂ ಮುನ್ನ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್‌ನಲ್ಲಿ ಫಾರ್ಚೂನ್ ಬಾರಿಶಾಲ್‌ ಪರ ಆಡಿದ್ದರು. ಬಿಪಿಎಲ್​ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಇಫ್ತಿಕಾರ್ 1 ಶತಕ ಹಾಗೂ 3 ಅರ್ಧಶತಕದೊಂದಿಗೆ ಒಟ್ಟು 347 ರನ್​ಗಳಿಸಿದ್ದರು. ಆದರೆ ಪಿಎಸ್​ಎಲ್​ ಪ್ರದರ್ಶನ ಪಂದ್ಯಕ್ಕಾಗಿ ಬಿಪಿಎಲ್ ತೊರೆದು ಪಾಕಿಸ್ತಾನಕ್ಕೆ ಮರಳಿದ್ದರು. ಇದೀಗ ಫಾರ್ಮ್​ ಮುಂದುವರೆಸಿರುವ ಇಫ್ತಿಕಾರ್ ಅಹ್ಮದ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ದಾಖಲೆ ಬರೆದಿದ್ದಾರೆ.

ವಿಶೇಷ ದಾಖಲೆ:

ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸುವ ಮೂಲಕ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ದಾಖಲೆಯು ಇಫ್ತಿಕಾರ್ ಅಹ್ಮದ್ ಪಾಲಾಗಿದೆ. ಅಲ್ಲದೆ ಟಿ20 ಲೀಗ್ ಪಂದ್ಯಗಳಲ್ಲಿ 6 ಎಸೆತಗಳಲ್ಲಿ 6 ಸಿಕ್ಸ್ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾಗಿದೆ.

ವಿಶ್ವ ದಾಖಲೆ:

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್​ ಸಿಡಿಸಿದ ದಾಖಲೆ ನಾಲ್ವರು ಬ್ಯಾಟರ್​ಗಳ ಹೆಸರಿನಲ್ಲಿದೆ. ಅವರೆಂದರೆ ಸೌತ್ ಆಫ್ರಿಕಾ ಹರ್ಷಲ್ ಗಿಬ್ಸ್, ಭಾರತದ ಯುವರಾಜ್ ಸಿಂಗ್, ವೆಸ್ಟ್ ಇಂಡೀಸ್​ನ ಕೀರಾನ್ ಪೊಲಾರ್ಡ್ ಮತ್ತು ಅಮೆರಿಕದ ಜಸ್ಕರನ್ ಮಲ್ಹೋತ್ರಾ. ಈ ನಾಲ್ವರು ಆಟಗಾರರು ಮಾತ್ರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಓವರ್‌ನಲ್ಲಿ ಆರು ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Published On - 5:04 pm, Sun, 5 February 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ