AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವೀಸ್ ವಿರುದ್ಧ ಸೆಟೆದು ನಿಂತ ದೇವದತ್ ಪಡಿಕ್ಕಲ್

ಭಾರತ ಎ ಮತ್ತು ನ್ಯೂಝಿಲೆಂಡ್ ಎ ನಡುವಣ ಅನಧಿಕೃತ ಟೆಸ್ಟ್ ಪಂದ್ಯವು ನ್ಯೂಝಿಲೆಂಡ್​ನ ಲಿಂಕನ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭಾರತ ಎ ತಂಡ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ.

ಕಿವೀಸ್ ವಿರುದ್ಧ ಸೆಟೆದು ನಿಂತ ದೇವದತ್ ಪಡಿಕ್ಕಲ್
Devdutt PadikkalImage Credit source: BCCI
ಝಾಹಿರ್ ಯೂಸುಫ್
|

Updated on: Oct 25, 2026 | 1:42 PM

Share

ಲಿಂಕನ್‌ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ಎ ವಿರುದ್ಧದ ಮೊದಲ ಅನ್‌ಅಫಿಶಿಯಲ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಕರ್ನಾಟಕದ ಪ್ರತಿಭೆ ದೇವದತ್ ಪಡಿಕ್ಕಲ್ ಅಮೋಘ ಅರ್ಧಶತಕದ (56) ಮೂಲಕ ಇಂಡಿಯಾ ಎ ತಂಡಕ್ಕೆ ಆಸರೆಯಾಗಿದ್ದಾರೆ. ಮೊದಲ ಇನಿಂಗ್ಸ್‌ನ ಬ್ಯಾಟಿಂಗ್ ವೈಫಲ್ಯ ಹಾಗೂ ದ್ವಿತೀಯ ಇನಿಂಗ್ಸ್‌ನ ಆರಂಭಿಕ ಆಘಾತದಿಂದ ಕಂಗೆಟ್ಟಿದ್ದ ತಂಡವನ್ನು ಪಡಿಕ್ಕಲ್ ತಮ್ಮ ಜವಾಬ್ದಾರಿಯುತ ಆಟದ ಮೂಲಕ ಉತ್ತಮ ಸ್ಥಿತಿಗೆ ತಲುಪಿಸಿದ್ದಾರೆ.

ಮರುಕಳಿಸಿದ ಆರಂಭಿಕರ ವೈಫಲ್ಯ:

ಮೊದಲ ಇನಿಂಗ್ಸ್‌ನಲ್ಲಿ ಕೇವಲ 113 ರನ್‌ಗಳಿಗೆ ಆಲೌಟ್ ಆಗಿದ್ದ ಇಂಡಿಯಾ ಎ ವಿರುದ್ಧ ನ್ಯೂಝಿಲೆಂಡ್ ಎ ತಂಡವು 317 ರನ್ ಗಳಿಸಿ, 204 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು. ಈ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತಕ್ಕೆ ಮತ್ತೆ ಆಘಾತ ಕಾದಿತ್ತು.

ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (5) ಮತ್ತು ಅನುಭವಿ ಆಟಗಾರ ಕೆ.ಎಲ್. ರಾಹುಲ್ (4) ಮತ್ತೊಮ್ಮೆ ಅಲ್ಪ ರನ್ನಿಗೆ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಭಾರತ ಎ ತಂಡ 10 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು.

ಪಡಿಕ್ಕಲ್-ಸುದರ್ಶನ್ ಅದ್ಭುತ ಜತೆಯಾಟ:

ಭಾರತ ಎ ತಂಡ ತೀವ್ರ ಒತ್ತಡದಲ್ಲಿದ್ದಾಗ ಕ್ರೀಸ್‌ಗಿಳಿದ ದೇವದತ್ ಪಡಿಕ್ಕಲ್, ಮತ್ತೊಬ್ಬ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ (39)* ಅವರೊಂದಿಗೆ ಸೇರಿ ಪ್ರತಿರೋಧ ಒಡ್ಡಿದರು. ಕಿವೀಸ್ ಪಡೆಯ ಘಾತಕ ಬೌಲಿಂಗ್ ಅನ್ನು ಅತ್ಯಂತ ಸಂಯಮದಿಂದ ಎದುರಿಸಿದ ಈ ಜೋಡಿ, ಮೂರನೇ ವಿಕೆಟ್‌ಗೆ ಅಜೇಯ 96 ರನ್‌ಗಳ ಅತ್ಯಮೂಲ್ಯ ಜತೆಯಾಟವಾಡಿತು.

ಕೇವಲ ರಕ್ಷಣಾತ್ಮಕ ಆಟಕ್ಕೆ ಶರಣಾಗದ ಪಡಿಕ್ಕಲ್, ಸಿಕ್ಕ ಅವಕಾಶಗಳನ್ನೆಲ್ಲ ಬೌಂಡರಿಗಟ್ಟಿದರು. ತಮ್ಮ 89 ಎಸೆತಗಳ ಇನಿಂಗ್ಸ್‌ನಲ್ಲಿ 9 ಆಕರ್ಷಕ ಬೌಂಡರಿಗಳನ್ನು ಬಾರಿಸುವ ಮೂಲಕ ಕ್ರೀಡಾಂಗಣದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಅದರಂತೆ ಎರಡನೇ ದಿನದಾಟದ ಮುಕ್ತಾಯಕ್ಕೆ ಇಂಡಿಯಾ ಎ ತಂಡವು 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಭಾರತ ತಂಡವು ಈಗ ನ್ಯೂಝಿಲೆಂಡ್ ಎ ತಂಡದ ಮುನ್ನಡೆಗಿಂತ 98 ರನ್ ಹಿನ್ನಡೆಯಲ್ಲಿದ್ದು, ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದೆ.

ಭಾರತ ಎ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ದೇವದತ್ ಪಡಿಕ್ಕಲ್ , ಸಾಯಿ ಸುದರ್ಶನ್ , ಧ್ರುವ್ ಜುರೆಲ್ (ನಾಯಕ) , ಯಶ್ ರಾಥೋಡ್ , ವಾಷಿಂಗ್ಟನ್ ಸುಂದರ್ , ಅನ್ಶುಲ್ ಕಾಂಬೋಜ್ , ಆಖಿಬ್ ನಬಿ , ಆಕಾಶ್ ದೀಪ್ , ಮುಖೇಶ್ ಚೌಧರಿ.

ಇದನ್ನೂ ಓದಿ: ನಿರ್ಧಾರ ಬದಲಿಸಿದ ಟಿಮ್ ಡೇವಿಡ್: ಹೊಸ ತಂಡದ ಪರ ಕಣಕ್ಕೆ!

ನ್ಯೂಝಿಲೆಂಡ್ ಎ ಪ್ಲೇಯಿಂಗ್ 11: ರೈಸ್ ಮಾರಿಯು (ನಾಯಕ) , ಕರ್ಟಿಸ್ ಹೀಫಿ , ಟಿಮ್ ರಾಬಿನ್ಸನ್ , ಮ್ಯಾಥ್ಯೂ ಬಾಯ್ಲ್ , ಡೀನ್ ಫಾಕ್ಸ್‌ಕ್ರಾಫ್ಟ್ , ಮಿಚೆಲ್ ಹೇ (ವಿಕೆಟ್ ಕೀಪರ್), ಸೈಮನ್ ಕೀನ್ , ಕ್ರಿಶ್ಚಿಯನ್ ಕ್ಲಾರ್ಕ್ , ಫ್ರೇಸರ್ ಶೀಟ್ , ಜೇಡೆನ್ ಲೆನಾಕ್ಸ್ , ಜ್ಯಾಕ್ ಗಿಬ್ಸನ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ