AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ರನ್​​ನಿಂದ ದ್ವಿಶತಕ ವಂಚಿತರಾದ ದೇವದತ್ ಪಡಿಕ್ಕಲ್!

ಭಾರತ ಎ ಮತ್ತು ನ್ಯೂಝಿಲೆಂಡ್ ಎ ನಡುವಣ ಅನಧಿಕೃತ ಟೆಸ್ಟ್ ಪಂದ್ಯವು ನ್ಯೂಝಿಲೆಂಡ್​ನ ಲಿಂಕನ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭಾರತ ಎ ತಂಡ ಕಳಪೆ ಪ್ರದರ್ಶನ ನೀಡಿತ್ತು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಸೆಟೆದು ನಿಂತ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಒಂದೇ ಒಂದು ರನ್​​ನಿಂದ ದ್ವಿಶತಕ ವಂಚಿತರಾದ ದೇವದತ್ ಪಡಿಕ್ಕಲ್!
Devdutt Padikkal Image Credit source: BCCI
ಝಾಹಿರ್ ಯೂಸುಫ್
|

Updated on: Oct 26, 2026 | 8:54 AM

Share

ನ್ಯೂಝಿಲೆಂಡ್ ಎ ವಿರುದ್ಧ ಲಿಂಕನ್‌ನಲ್ಲಿ ನಡೆಯುತ್ತಿರುವ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಕೇವಲ 1 ರನ್‌ನಿಂದ ದ್ವಿಶತಕ ವಂಚಿತರಾಗಿದ್ದಾರೆ. ಭಾರತ ಎ ತಂಡದ ಪರ ಎರಡನೇ ಇನಿಂಗ್ಸ್‌ನಲ್ಲಿ ಅತ್ಯಂತ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಅವರು 199 ರನ್‌ ಗಳಿಸಿ ಔಟಾಗುವ ಮೂಲಕ ತೀವ್ರ ನಿರಾಶೆ ಅನುಭವಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಎ ತಂಡದ ನಾಯಕ ರೈಸ್ ಮಾರಿಯು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೇವಲ 113 ರನ್‌ಗಳಿಗೆ ಆಲೌಟ್ ಆಗಿ ತೀವ್ರ ಹಿನ್ನಡೆ ಅನುಭವಿಸಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಎ ತಂಡ 317 ರನ್ ಗಳಿಸಿ, 204 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು.

204 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡದ ಆರಂಭ ಅತ್ಯಂತ ಕಳಪೆಯಾಗಿತ್ತು. ತಂಡದ ಮೊತ್ತ ಕೇವಲ 10 ರನ್ ಆಗುವಷ್ಟರಲ್ಲಿ ಇಬ್ಬರು ಸ್ಟಾರ್ ಓಪನರ್‌ಗಳಾದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ್ದರು.

ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ರಕ್ಷಣಾತ್ಮಕ ಆಟದೊಂದಿಗೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರಶಿಸಿದರು. ಅಲ್ಲದೆ ಮತ್ತೊಬ್ಬ ಯುವ ಬ್ಯಾಟರ್ ಸಾಯಿ ಸುದರ್ಶನ್ (91 ರನ್) ಜೊತೆಗೂಡಿ ಮೂರನೇ ವಿಕೆಟ್‌ಗೆ ಭರ್ಜರಿ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ತಂಡವು ಆರಂಭಿಕ ಆಘಾತದಿಂದ ಪಾರಾಗುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಪಡಿಕ್ಕಲ್ ಕೇವಲ 65 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕ ಕೂಡ ಅತ್ಯುತ್ತಮ ಬ್ಯಾಟಿಂಗ್ ಮುಂದುವರೆಸಿದ ಅವರು 128 ಎಸೆತಗಳಲ್ಲಿ ಶತಕ ಸಿಡಿಸಿ ಬ್ಯಾಟ್ ಮೇಲೆತ್ತಿದರು.

ಶತಕದ ಬಳಿಕ ಮತ್ತೆ ರಕ್ಷಣಾತ್ಮಕದ ಆಟದತ್ತ ಮುಖ ಮಾಡಿದ ಪಡಿಕ್ಕಲ್ 150 ರನ್​​ಗಳಿಸಲು ತೆಗೆದುಕೊಂಡಿದ್ದು 206 ಎಸೆತಗಳನ್ನು. ಈ ಮೂಲಕ ಟೀಮ್ ಇಂಡಿಯಾವನ್ನು ಫಾಲೋಆನ್ ಭೀತಿಯಿಂದ ಪಾರು ಮಾಡಿದರು.

ಇದಾದ ಬಳಿಕ ದ್ವಿಶತಕದತ್ತ ಹೆಜ್ಜೆ ಹಾಕಿದ ದೇವದತ್ ಪಡಿಕ್ಕಲ್ ಕೇವಲ ಒಂದು ರನ್​​ನಿಂದ ಡಬಲ್ ಸೆಂಚುರಿ ಮಿಸ್ ಮಾಡಿಕೊಂಡರು. ನ್ಯೂಝಿಲೆಂಡ್​ ವೇಗಿ ಬೌಲರ್ ಝಾಕ್ ಗಿಬ್ಸನ್ ಎಸೆತವನ್ನು ಫ್ಲಿಕ್ ಮಾಡಲು ಮುಂದಾಗಿ ವಿಕೆಟ್ ಕೀಪರ್ ಮಿಚೆಲ್ ಹೇಗೆ ಕ್ಯಾಚ್ ನೀಡಿ ಹೊರ ನಡೆದರು.

ದೇವದತ್ ಪಡಿಕ್ಕಲ್ ಇನ್ನಿಂಗ್ಸ್ ಹೈಲೈಟ್ಸ್:

  •  ಒಟ್ಟು ರನ್: 199
  • ಎದುರಿಸಿದ ಎಸೆತಗಳು: 248
  • ಬೌಂಡರಿಗಳು: 24 ಫೋರ್ಸ್
  •  ಸಿಕ್ಸರ್‌ಗಳು: 3 ಸಿಕ್ಸ್
  • ಸ್ಟ್ರೈಕ್ ರೇಟ್: 80.24

ದೇವದತ್ ಪಡಿಕ್ಕಲ್ ಅವರ ಈ 199 ರನ್​​ಗಳ ಭರ್ಜರಿ ಇನಿಂಗ್ಸ್ ನೆರವಿನೊಂದಿಗೆ ಭಾರತ ಎ ತಂಡವು ದ್ವಿತೀಯ ಇನಿಂಗ್ಸ್​​ನಲ್ಲಿ 90 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್​ ಕಳೆದುಕೊಂಡು 377 ರನ್ ಕಲೆಹಾಕಿದೆ.

ಭಾರತ ಎ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ದೇವದತ್ ಪಡಿಕ್ಕಲ್ , ಸಾಯಿ ಸುದರ್ಶನ್ , ಧ್ರುವ್ ಜುರೆಲ್ (ನಾಯಕ) , ಯಶ್ ರಾಥೋಡ್ , ವಾಷಿಂಗ್ಟನ್ ಸುಂದರ್ , ಅನ್ಶುಲ್ ಕಾಂಬೋಜ್ , ಆಖಿಬ್ ನಬಿ , ಆಕಾಶ್ ದೀಪ್ , ಮುಖೇಶ್ ಚೌಧರಿ.

ಇದನ್ನೂ ಓದಿ: 10ನೇ ವಿಕೆಟ್​​ಗೆ ಹೊಸ ವಿಶ್ವ ದಾಖಲೆ: ಪಾಕ್ ಪಡೆಗೆ ರಣರೋಚಕ ಜಯ!

ನ್ಯೂಝಿಲೆಂಡ್ ಎ ಪ್ಲೇಯಿಂಗ್ 11: ರೈಸ್ ಮಾರಿಯು (ನಾಯಕ) , ಕರ್ಟಿಸ್ ಹೀಫಿ , ಟಿಮ್ ರಾಬಿನ್ಸನ್ , ಮ್ಯಾಥ್ಯೂ ಬಾಯ್ಲ್ , ಡೀನ್ ಫಾಕ್ಸ್‌ಕ್ರಾಫ್ಟ್ , ಮಿಚೆಲ್ ಹೇ (ವಿಕೆಟ್ ಕೀಪರ್), ಸೈಮನ್ ಕೀನ್ , ಕ್ರಿಶ್ಚಿಯನ್ ಕ್ಲಾರ್ಕ್ , ಫ್ರೇಸರ್ ಶೀಟ್ , ಜೇಡೆನ್ ಲೆನಾಕ್ಸ್ , ಝಾಕ್ ಗಿಬ್ಸನ್.

ಭರವಸೆ ಮೂಡಿಸಿದ ಬ್ಯಾಟಿಂಗ್:

ದ್ವಿಶತಕ ಮಿಸ್ ಆಗಿದ್ದು ವೈಯಕ್ತಿಕವಾಗಿ ದೇವದತ್ ಪಡಿಕ್ಕಲ್ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದ್ದರೂ, ಕಠಿಣ ಪರಿಸ್ಥಿತಿಯಲ್ಲಿ ಅವರು ತೋರಿದ ಈ ಅಪ್ರತಿಮ ತಾಳ್ಮೆ ಹಾಗೂ ಕ್ಲಾಸ್ ಬ್ಯಾಟಿಂಗ್ ಭಾರತೀಯ ಟೆಸ್ಟ್ ಕ್ರಿಕೆಟ್‌ನ ಭವಿಷ್ಯಕ್ಕೆ ದೊಡ್ಡ ಭರವಸೆ ಮೂಡಿಸಿದೆ. ಟೀಮ್ ಇಂಡಿಯಾದ ಮೂರನೇ ಕ್ರಮಾಂಕಕ್ಕೆ ತಾನು ಸೂಕ್ತ ಆಟಗಾರ ಎಂಬುದನ್ನು ಪಡಿಕ್ಕಲ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ