
2025 ರ ಏಷ್ಯಾ ಕಪ್ ಗೆದ್ದ ನಂತರ ವೆಸ್ಟ್ ಇಂಡೀಸ್ ತಂಡವನ್ನು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮಕಾಡೆ ಮಲಗಿಸಿದ ಟೀಂ ಇಂಡಿಯಾ (Team India) ಇದೀಗ ಏಕದಿನ ಮಾದರಿಯಲ್ಲಿ ತನ್ನ ಶಕ್ತಿ ಪ್ರದರ್ಶಿಸಲು ಉತ್ಸುಕವಾಗಿದೆ. ಆಸ್ಟ್ರೇಲಿಯಾ (Australia) ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 19 ರಂದು ಪರ್ತ್ ಮೈದಾನದಲ್ಲಿ ನಡೆಯಲಿದೆ. 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ನಂತರ ಭಾರತ ಮೊದಲ ಬಾರಿಗೆ ಏಕದಿನ ಪಂದ್ಯವನ್ನು ಆಡಲು ಮೈದಾನಕ್ಕಿಳಿಯಲಿದೆ. ಬಹಳ ಸಮಯದ ನಂತರ, ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಪ್ರವಾಸದಲ್ಲಿ ಟೀಂ ಇಂಡಿಯಾ ಏಕದಿನ ಸರಣಿ ಮಾತ್ರವಲ್ಲದೆ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗಳ ಬಗ್ಗೆಗಿನ ಪೂರ್ಣ ಮಾಹಿತಿ ಇಲ್ಲಿದೆ.
IND vs AUS: ಆಸ್ಟ್ರೇಲಿಯಾ ನೆಲದಲ್ಲಿ ಭಯಾನಕವಾಗಿದೆ ಭಾರತದ ಏಕದಿನ ದಾಖಲೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯವು ಅಕ್ಟೋಬರ್ 19 ರ ಭಾನುವಾರದಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು, ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯವು ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಏಕದಿನ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹೆಚ್ಚುವರಿಯಾಗಿ, ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಅಕ್ಟೋಬರ್ 19, ಭಾನುವಾರದಂದು ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು JIOHotstar ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ