ಮತ್ತೊಂದು ಗೆಲುವಿಗೆ ಭಾರತ ಸಜ್ಜು; ಭಾರತ–ನ್ಯೂಜಿಲೆಂಡ್ 2ನೇ ಟಿ20 ಯಾವಾಗ, ಎಷ್ಟು ಗಂಟೆಗೆ?

ಭಾರತ-ನ್ಯೂಜಿಲೆಂಡ್ 2ನೇ T20 ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋತ ನ್ಯೂಜಿಲೆಂಡ್ ತಿರುಗೇಟು ನೀಡಲು ಯತ್ನಿಸಿದರೆ, ಭಾರತ ಸರಣಿ ಹಿಡಿತ ಸಾಧಿಸಲು ನೋಡಲಿದೆ. 200+ ರನ್ ನಿರೀಕ್ಷೆಯಿದ್ದು, ಪಿಚ್ ಮತ್ತು ಆಟಗಾರರ ಪ್ರದರ್ಶನ ನಿರ್ಣಾಯಕ. ಪಂದ್ಯದ ದಿನಾಂಕ, ಸಮಯ, ಸ್ಥಳ, ಮತ್ತು ನೇರ ಪ್ರಸಾರ ಮಾಹಿತಿ ಇಲ್ಲಿವೆ.

ಮತ್ತೊಂದು ಗೆಲುವಿಗೆ ಭಾರತ ಸಜ್ಜು; ಭಾರತ–ನ್ಯೂಜಿಲೆಂಡ್ 2ನೇ ಟಿ20 ಯಾವಾಗ, ಎಷ್ಟು ಗಂಟೆಗೆ?
ಭಾರತ Vs ನ್ಯೂಜಿಲೆಂಡ್

Updated on: Oct 23, 2026 | 6:52 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ. ಮೊದಲ ಪಂದ್ಯದಂತೆಯೇ ಈ ಪಂದ್ಯವೂ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ನ್ಯೂಜಿಲೆಂಡ್ ತಂಡ ತಿರುಗೇಟು ನೀಡಲು ಪ್ರಯತ್ನಿಸಲಿದೆ. ಇತ್ತ ಭಾರತ ತಂಡ ಎರಡನೇ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಗುರಿ ಹೊಂದಿದೆ. ಹೀಗಾಗಿ ಎರಡನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ಮೊದಲ ಪಂದ್ಯದಲ್ಲಿ ಎರಡೂ ತಂಡಗಳು 200ಕ್ಕೂ ಹೆಚ್ಚು ರನ್ ಗಳಿಸಿದ್ದರಿಂದ, ಎರಡನೇ ಪಂದ್ಯದಲ್ಲೂ ರನ್‌ಗಳ ಸುರಿಮಳೆಯಾಗುವ ನಿರೀಕ್ಷೆಯಿದೆ. ಆದರೆ ಪಿಚ್‌ನ ಸ್ವರೂಪ ಮತ್ತು ಆಟಗಾರರ ಪ್ರದರ್ಶನ ಪಂದ್ಯದಲ್ಲಿ ನಿರ್ಣಾಯಕವಾಗಲಿದೆ. ಉಳಿದಂತೆ ಪಂದ್ಯದ ವಿವರ ಇಂತಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಅಕ್ಟೋಬರ್ 24 ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ವೀಕ್ಷಿಸಬಹುದು.

ಟೀಂ ಇಂಡಿಯಾಕ್ಕೆ ಹಿನ್ನಡೆ: 2ನೇ ಟಿ20 ಪಂದ್ಯದಿಂದ ಇಶಾನ್ ಕಿಶನ್ ಔಟ್!

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೈಫರ್ಟ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವನ್ ಜೇಕಬ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ನಾಥನ್ ಸ್ಮಿತ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಡೆವೊನ್ ಕಾನ್ವೆ, ಕೈಲ್ ಜೇಮಿಸನ್, ಜೋಶ್ ಕ್ಲಾರ್ಕ್ಸನ್, ಜೇಕಬ್ ಡಫಿ ಮತ್ತು ಬ್ಲೇರ್ ಟಿಕ್ನರ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us