AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11?

India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವು ಡಿಸೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ, ಸರಣಿ ಗೆಲ್ಲಲು ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಗೊಳಿಸಲು ಯತ್ನಿಸಲಿದೆ. ಪಿಚ್ ವರದಿ, ಹವಾಮಾನ ಮುನ್ನೋಟ ಮತ್ತು ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಕುರಿತು ಮಾಹಿತಿ ಇಲ್ಲಿದೆ.

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11?
Ind Vs Sa 5th T20
ಪೃಥ್ವಿಶಂಕರ
|

Updated on: Dec 18, 2025 | 3:40 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಡಿಸೆಂಬರ್ 19, ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದೆ. ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರೀ ಮಂಜಿನಿಂದಾಗಿ ರದ್ದಾಗಿತ್ತು. ಈ ಟಿ20 ಸರಣಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ ಸಾಧಿಸಿದೆ. ಇದೀಗ ಅಹಮದಾಬಾದ್ ಟಿ20ಯನ್ನೂ ಗೆದ್ದರೆ, ಸೂರ್ಯ ಪಡೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇತ್ತ ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 2-2 ಅಂತರದಲ್ಲಿ ಕೊನೆಗೊಳಿಸಲು ಯತ್ನಿಸಲಿದೆ.

ಪಿಚ್ ಯಾರಿಗೆ ಸಹಕಾರಿ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಐದನೇ ಮತ್ತು ಕೊನೆಯ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟಾಸ್ ಗೆದ್ದವರು ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಬಹುದು. ಏಕೆಂದರೆ ಈ ಮೈದಾನದಲ್ಲಿ ಇದುವರೆಗೆ ನಡೆದಿರುವ 10 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಮೊದಲು ಬ್ಯಾಟ್ ಮಾಡಿದ ತಂಡವನ್ನು ಮತ್ತು ನಾಲ್ಕು ಪಂದ್ಯಗಳನ್ನು ಗುರಿ ಬೆನ್ನಟ್ಟುವ ತಂಡಗಳು ಗೆದ್ದಿವೆ. ಇಲ್ಲಿ ಟಿ20ಐಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 160 ರನ್‌ಗಳು ಎಂಬುದು ಗಮನಿಸಬೇಕಾದ ಸಂಗತಿ.

ಹವಾಮಾನ ಹೇಗಿರಲಿದೆ?

ಅಹಮದಾಬಾದ್‌ನಲ್ಲಿ ನಡೆಯಲಿರುವ ಐದನೇ ಟಿ20ಪಂದ್ಯಕ್ಕೆ ಮಳೆಯ ಆತಂಕವಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಅಹಮದಾಬಾದ್‌ನಲ್ಲಿ ಮಂಜು ಕವಿದಿರುವ ಸಾಧ್ಯತೆ ಇಲ್ಲ ಮತ್ತು ಆಕಾಶವು ಸಂಪೂರ್ಣವಾಗಿ ಸ್ಪಷ್ಟವಾಗಿರುತ್ತದೆ. ಪಂದ್ಯದ ಸಮಯದಲ್ಲಿ ತಾಪಮಾನವು 15 ರಿಂದ 30 ಡಿಗ್ರಿ ಸೆಲ್ಸಿಯಸ್ ನಡುವೆ ಇರುವ ನಿರೀಕ್ಷೆಯಿದೆ, ಇದರಿಂದಾಗಿ ಪೂರ್ಣ 40 ಓವರ್‌ಗಳನ್ನು ಯಾವುದೇ ಅಡೆತಡೆಯಿಲ್ಲದೆ ಆಡುವ ಸಾಧ್ಯತೆಯಿದೆ.

ಪ್ಲೇಯಿಂಗ್ 11 ಹೇಗಿರಲದೆ?

ಸಾಮಾನ್ಯವಾಗಿ ಯಾವುದೇ ಆಯ್ಕೆ ಮಂಡಳಿಯೂ ತನ್ನ ಗೆಲುವಿನ ಸಂಯೋಜನೆಯನ್ನು ಬಯಸಲು ನೋಡುವುದಿಲ್ಲ. ಆದಗ್ಯೂ ಟೀಂ ಇಂಡಿಯಾದ ಉಪನಾಯಕ ಶುಭ್​ಮನ್ ಗಿಲ್, 4ನೇ ಟಿ20 ಪಂದ್ಯಕ್ಕೂ ಮುನ್ನ ಅಭ್ಯಾಸದ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಟಿ20 ಸರಣಿಯನ್ನು ಹೊರಗಿಡಲಾಗಿದೆ ಎಂಬ ಮಾಹಿತಿ ಇತ್ತು. ಆದರೆ 4ನೇ ಪಂದ್ಯ ನಡೆಯದ ಕಾರಣ, ಗಿಲ್ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಒಂದು ವೇಳೆ ಗಿಲ್ ಗಾಯಗೊಂಡಿರುವುದು ನಿಜವಾದರೆ ಅವರ ಬದಲಿಗೆ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಬಹುದು.

IND vs SA: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ

ಸಂಭಾವ್ಯ ಪ್ಲೇಯಿಂಗ್ 11

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆಯಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಒಟ್ನಿಯಲ್ ಬಾರ್ಟ್‌ಮನ್, ಲುಂಗಿ ಎನ್‌ಗಿಡಿ, ಅನ್ರಿಚ್ ನೋಕಿಯಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ