Team India: ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

India T20 Squad: ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗೆ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದ್ದು, ಈ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

Team India: ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 14, 2022 | 11:08 AM

ಟೀಮ್ ಇಂಡಿಯಾದ (Team India) ಉಪನಾಯಕ ಕೆಎಲ್ ರಾಹುಲ್ (KL Rahul) ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದರು. ಸೌತ್ ಆಫ್ರಿಕಾ ವಿರುದ್ದದ ಸರಣಿಗೂ ಮುನ್ನ ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ರಾಹುಲ್ ತಂಡದಿಂದ ಹೊರ ನಡೆದಿದ್ದರು. ಅಷ್ಟೇ ಅಲ್ಲದೆ ಗಾಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಲು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಯನ್ನೂ ಸಹ ಮಾಡಿಸಿಕೊಂಡಿದ್ದಾರೆ. ಈಗಾಗಲೇ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿ ಬಂದಿದ್ದಾರೆ. ಇತ್ತ ಅಕ್ಟೋಬರ್-ನವೆಂಬರ್​ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದರ ನಡುವೆ ನಡೆಯುವ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಮಹತ್ವದ ಪಂದ್ಯಗಳಾಗಿವೆ. ಏಕೆಂದರೆ ಈ ಸರಣಿಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಭಾರತ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಈಗಾಗಲೇ ಟೀಮ್ ಇಂಡಿಯಾ ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ.

ಆದರೆ ಅತ್ತ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಕಾರಣ ಯಾವಾಗ ಕಂಬ್ಯಾಕ್ ಮಾಡುತ್ತಾರೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿತ್ತು. ಏಕೆಂದರೆ ಸರ್ಜರಿಯ ಬಳಿಕ ಕೆಎಲ್ ರಾಹುಲ್​ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಇಂಗ್ಲೆಂಡ್ ಸರಣಿ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾದ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ-ವೆಸ್ಟ್​ ಇಂಡೀಸ್​ 5 ಟಿ20 ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಜುಲೈ 22 ರಿಂದ ಈ ಸರಣಿ ಶುರುವಾಗಲಿದ್ದು, ಈ ವೇಳೆಗೆ ಕೆಎಲ್ ರಾಹುಲ್ ಚೇತರಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೆಯೇ ವೆಸ್ಟ್ ಇಂಡೀಸ್​ ವಿರುದ್ದದ ಟಿ20 ಸರಣಿಯು ಜುಲೈ 29 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲಗಳು, ವಿಂಡೀಸ್ ಸರಣಿಗೆ ಆಯ್ಕೆಯಾಗಲಿರುವ ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆಯುವುದು ಬಹುತೇಕ ಖಚಿತ ಎಂದಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯ ಮೂಲಕ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ವೈಭವವನ್ನು ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ವೇಳಾಪಟ್ಟಿ ಹೀಗಿದೆ:

  • ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  • ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  • ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ