AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND v SL: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಿಂದ ಹೊರಬಿದ್ದ ಜಸ್ಪ್ರೀತ್ ಬುಮ್ರಾ..!

IND v SL: ವಾಸ್ತವವಾಗಿ ಜನವರಿ 3 ರಂದು ಜಸ್ಪ್ರೀತ್ ಬುಮ್ರಾ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಈ ನಿರ್ಧಾರ ತೆಗೆದುಕೊಂಡ ಕೇವಲ 6 ದಿನಗಳಲ್ಲಿ ಬುಮ್ರಾ ಅವರನ್ನು ಮತ್ತೆ ತಂಡದಿಂದ ಕೈಬಿಡಲಾಗಿದೆ.

IND v SL: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಿಂದ ಹೊರಬಿದ್ದ ಜಸ್ಪ್ರೀತ್ ಬುಮ್ರಾ..!
ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್
TV9 Web
| Updated By: ಪೃಥ್ವಿಶಂಕರ|

Updated on:Jan 09, 2023 | 3:23 PM

Share

ಶ್ರೀಲಂಕಾ ವಿರುದ್ಧದ (India Vs Sri Lanka) ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಇನ್ನೊಂದೆ ದಿನ ಬಾಕಿ ಉಳಿದಿದೆ. ಆದರೆ ಮೊದಲ ಏಕದಿನ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ (Team India) ಬಿಗ್ ಶಾಕ್ ಎದುರಾಗಿದೆ. ಇಂಜುರಿಯಿಂದಾಗಿ ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರನ್ನು ಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಕೇಳಿಬಂದಿರುವ ಸುದ್ದಿ ಪ್ರಕಾರ ಜಸ್ಪ್ರೀತ್ ಬುಮ್ರಾ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ. ವಾಸ್ತವವಾಗಿ ಜನವರಿ 3 ರಂದು ಜಸ್ಪ್ರೀತ್ ಬುಮ್ರಾ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಈ ನಿರ್ಧಾರ ತೆಗೆದುಕೊಂಡ ಕೇವಲ 6 ದಿನಗಳಲ್ಲಿ ಬುಮ್ರಾ ಅವರನ್ನು ಮತ್ತೆ ತಂಡದಿಂದ ಕೈಬಿಡಲಾಗಿದೆ.

ವರದಿಯ ಪ್ರಕಾರ, ಫಿಟ್‌ನೆಸ್ ಕಾಳಜಿಯಿಂದಾಗಿ ಬುಮ್ರಾ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಶ್ರೀಲಂಕಾ ಮತ್ತು ಭಾರತ ನಡುವಿನ ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದ್ದು, ಬುಮ್ರಾ ತಂಡದೊಂದಿಗೆ ಅಲ್ಲಿಗೆ ಪ್ರಯಾಣ ಬೆಳೆಸಿಲ್ಲ ಎಂದು ವರದಿಯಾಗಿದೆ.

IND vs SL: 152, 140 ರನ್.. ಗುವಾಹಟಿಯಲ್ಲಿ ಕಿಂಗ್ ಕೊಹ್ಲಿ- ಹಿಟ್​ಮ್ಯಾನ್ ರೋಹಿತ್​ನ​ದ್ದೇ ದರ್ಬಾರು..!

ಸೆಪ್ಟೆಂಬರ್‌ನಿಂದ ಆಡಿಲ್ಲ ಬುಮ್ರಾ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯವನ್ನಾಡಿದ್ದ ಬುಮ್ರಾ ಅಂದಿನಿಂದ ಟೀಂ ಇಂಡಿಯಾ ಪರ ಕಣಕ್ಕಿಳಿದಿಲ್ಲ. ಬಳಿಕ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್ ಸೇರಿದಂತೆ ಹಲವು ಬಿಗ್ ಈವೆಂಟ್​ಗಳಲ್ಲಿ ಬುಮ್ರಾ ಅಲಭ್ಯತೆಯ ಹೊರೆಯನ್ನು ಭಾರತ ಹೊರಬೇಕಾಯಿತು. ಆದರೆ ಇಂಜುರಿಯಿಂದ ಚೇತರಿಸಿಕೊಂಡಿದ್ದ ಬುಮ್ರಾ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿತ್ತು. ಆದರೆ ಈಗ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರವನ್ನು ಗಮನಿಸಿದರೆ, ಬುಮ್ರಾ ಇನ್ನೂ ಪೂರ್ಣವಾಗಿ ಫಿಟ್‌ ಆಗಿಲ್ಲ ಎಂದು ತೋರುತ್ತದೆ.

ಫಿಟ್ ಎಂದು ಘೋಷಿಸಿದರೂ ಬುಮ್ರಾ ತಂಡದಿಂದ ಹೊರಬಿದ್ದಿದ್ದು ಏಕೆ?

ಸೆಪ್ಟೆಂಬರ್ 2022 ರಿಂದ ಕ್ರಿಕೆಟ್ ಮೈದಾನದಿಂದ ದೂರವಿರುವ ಜಸ್ಪ್ರೀತ್ ಬುಮ್ರಾ, ಬೆನ್ನುನೋವಿನ ಕಾರಣದಿಂದಾಗಿ ವಿಶ್ವಕಪ್ ಕೂಡ ಆಡಿರಲಿಲ್ಲ. ಇದರ ನಂತರ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್ನೆಸ್​ ಮೇಲೆ ಕೆಲಸ ಮಾಡಿದ ಬುಮ್ರಾ ತಂಡಕ್ಕೆ ಎಂಟ್ರಿಕೊಡುವ ಇರಾದೆಯಲ್ಲಿದ್ದರು. ಇದಕ್ಕೆ ಪೂರಕವೆಂಬಂತೆ ಎನ್​ಸಿಎ ಕೂಡ ಬುಮ್ರಾ ಫಿಟ್ ಎಂದು ಸರ್ಟಿಫಿಕೇಟ್ ನೀಡಿತ್ತು. ಇದಾದ ಬಳಿಕವೇ ಟೀಂ ಇಂಡಿಯಾದ ಆಯ್ಕೆಗಾರರು ಅವರನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ಬುಮ್ರಾಗೆ ಮತ್ತಷ್ಟು ವಿಶ್ರಾಂತಿ ನೀಡುವ ಸಲುವಾಗಿ ಅವರನ್ನು ತಂಡದಿಂದ ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಬುಮ್ರಾ ಎಂಟ್ರಿ?

ಮೂಲಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ 20 ಸರಣಿಯಲ್ಲಿ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಜನವರಿ 18ರಿಂದ ಈ ಸರಣಿ ಆರಂಭವಾಗಲಿದ್ದು, ಇದಾದ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಹೀಗಾಗಿ ಈ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ಈ ವರ್ಷ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವುದರ ಜೊತೆಗೆ ಟೀಂ ಇಂಡಿಯಾ ವಿಶ್ವಕಪ್ ಕೂಡ ಆಡಬೇಕಿದೆ. ಮತ್ತೊಂದೆಡೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತಂಡವು ಫೈನಲ್ ತಲುಪಿದರೆ, ಅಲ್ಲಿಯೂ ಬುಮ್ರಾ ಪಾತ್ರ ಪ್ರಮುಖವಾಗಿರುತ್ತದೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 9 January 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ