IND vs AFG: ಅರ್ಧಶತಕ ಸಿಡಿಸಿದ ದುಬೆ; ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್​ಗಳ ಸುಲಭ ಜಯ

IND vs AFG: ಮೊಹಾಲಿಯಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅತಿಥೇಯ ಭಾರತ 6 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ.

IND vs AFG: ಅರ್ಧಶತಕ ಸಿಡಿಸಿದ ದುಬೆ; ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್​ಗಳ ಸುಲಭ ಜಯ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jan 11, 2024 | 10:24 PM

ಮೊಹಾಲಿಯಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅತಿಥೇಯ ಭಾರತ 6 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ತಂಡದ ಪರ ಮೊಹಮ್ಮದ್ ನಬಿ 42 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಿಧಾನಗತಿಯ ಆರಂಭದ ಹೊರತಾಗಿಯೂ ಆಫ್ಘನ್ ತಂಡ ಗೌರವಾನ್ವಿತ ಸ್ಕೋರ್ ಮಾಡುವಲ್ಲಿ ನಬಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಾಯಿತು.ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ದುಬೆ (Shivam Dube) ಅವರ ಅರ್ಧಶತಕ ಹಾಗೂ ಜಿತೇಶ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ಆಧಾರದ ಮೇಲೆ 18 ಓವರ್​ಗಳಲ್ಲಿ ಗೆಲುವಿನ ದಡ ಸೇರಿತು.

ಅಫ್ಘಾನ್​ಗೆ ನಿದಾನಗತಿಯ ಆರಂಭ

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿತು. ಆದರೆ ಮಧ್ಯಮ ಓವರ್‌ಗಳಲ್ಲಿ ತಂಡದ ಇನ್ನಿಂಗ್ಸ್ ತತ್ತರಿಸಿ 57 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಅಲ್ಲಿಂದ ಅಜ್ಮತುಲ್ಲಾ ಒಮರ್ಜಾಯ್ ಜೊತೆಗೂಡಿದ ಮೊಹಮ್ಮದ್ ನಬಿ ಅಫ್ಘಾನಿಸ್ತಾನದ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡು ತಂಡದ ಸ್ಕೋರ್ ಅನ್ನು 100ರ ಗಡಿ ದಾಟಿಸಿದರು. ಈ ಅವಧಿಯಲ್ಲಿ ಮೊಹಮ್ಮದ್ ನಬಿ ಅತ್ಯಂತ ವೇಗವಾಗಿ ಬ್ಯಾಟಿಂಗ್ ಮಾಡಿ ಕೇವಲ 27 ಎಸೆತಗಳಲ್ಲಿ 42 ರನ್ ಗಳಿಸಿದರು. ಅವರ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಸೇರಿದ್ದವು. ನಬಿ ಅವರ ಬಲಿಷ್ಠ ಇನ್ನಿಂಗ್ಸ್‌ನಿಂದಾಗಿ ಅಫ್ಘಾನಿಸ್ತಾನ ಭಾರತಕ್ಕೆ ಇಷ್ಟು ದೊಡ್ಡ ಗುರಿ ನೀಡಿತು.

IND vs AFG: ಅಫ್ಘಾನ್ ವಿರುದ್ಧ ಸಂಪೂರ್ಣ ವಿಭಿನ್ನ ತಂಡವನ್ನು ಕಣಕ್ಕಿಳಿಸಿದ ರೋಹಿತ್..!

ಭಾರತದ ಬೌಲಿಂಗ್ ಹೀಗಿತ್ತು

ಅಕ್ಷರ್ ಪಟೇಲ್ 4 ಓವರ್​ಗಳಲ್ಲಿ 23 ರನ್ ನೀಡಿ ಎರಡು ವಿಕೆಟ್ ಪಡೆಯುವ ಮೂಲಕ ತಂಡದ ಪರ ಅತ್ಯುತ್ತಮ ಬೌಲರ್ ಎನಿಸಿಕೊಂಡರು. ಹಾಗೆಯೇ ಶಿವಂ ದುಬೆ 2 ಓವರ್‌ಗಳಲ್ಲಿ 9 ರನ್ ನೀಡಿ 1 ವಿಕೆಟ್ ಪಡೆದರೆ, ಮುಖೇಶ್ ಕುಮಾರ್ ಕೂಡ 4 ಓವರ್‌ಗಳಲ್ಲಿ 33 ರನ್ ನೀಡಿ ಎರಡು ವಿಕೆಟ್ ಪಡೆದರು. ಅರ್ಷದೀಪ್ ಮೊದಲ 3 ಓವರ್‌ಗಳಲ್ಲಿ ಒಂದು ಮೇಡನ್‌ನೊಂದಿಗೆ ಕೇವಲ 13 ರನ್ ನೀಡಿದ್ದರು. ಆದರೆ ಅವರ ಕೊನೆಯ ಓವರ್‌ನಲ್ಲಿ 15 ರನ್ ಬಂದರು. ಆದರೆ ರವಿ ಬಿಷ್ಣೋಯ್ 3 ಓವರ್‌ಗಳಲ್ಲಿ 35 ರನ್ ನೀಡುವ ಮೂಲಕ ಈ ಪಂದ್ಯದ ಅತ್ಯಂತ ದುಬಾರಿ ಬೌಲರ್ ಎನಿಸಿಕೊಂಡರು.

ಭಾರತಕ್ಕೆ ಕಳಪೆ ಆರಂಭ

159 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ತಂಡ 17.3 ಓವರ್‌ಗಳಲ್ಲಿ ಜಯದ ನಗೆಬೀರಿತು. ಟೀಂ ಇಂಡಿಯಾ ಪರ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 60 ರನ್​ಗಳ ಇನ್ನಿಂಗ್ಸ್ ಆಡಿದರು. ಟೀಂ ಇಂಡಿಯಾ ಗೆಲುವಿನಲ್ಲಿ ಶಿವಂ ದುಬೆ ಪಾತ್ರ ಪ್ರಮುಖವಾಗಿತ್ತು. ಏಕೆಂದರೆ ದುಬೆ ಕೇವಲ ಬ್ಯಾಟಿಂಗ್​ನಲ್ಲಿ ಮಾತ್ರವಲ್ಲದೆ ಬೌಲಿಂಗ್​ನಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಆದರೆ, ಈ ರನ್ ಚೇಸ್​ನಲ್ಲಿ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಭಾರತ ಮೊದಲ ಓವರ್‌ನಲ್ಲೇ ಶೂನ್ಯಕ್ಕೆ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತ್ತು. ಹಾಗೆಯೇ ಟೀಂ ಇಂಡಿಯಾ 28 ರನ್‌ ಕಲೆಹಾಕುವಷ್ಟರಲ್ಲಿ ಗಿಲ್ ರೂಪದಲ್ಲಿ ಎರಡನೇ ವಿಕೆಟ್ ಕಳೆದುಕೊಂಡಿತು. ಆದರೆ ಇಲ್ಲಿಂದ ಶಿವಂ ದುಬೆ, ಜಿತೇಶ್ ಶರ್ಮಾ ಮತ್ತು ನಂತರ ರಿಂಕು ಸಿಂಗ್ ಭಾರತದ ಇನ್ನಿಂಗ್ಸ್ ನಿಭಾಯಿಸಿ ತಂಡದ ಗೆಲುವಿನ ದಡ ಸೇರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Thu, 11 January 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ