IND vs AFG: ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ಮೊಹಾಲಿಯ ಹವಾಮಾನ ವರದಿ
IND vs AFG, Mohali Weather Report: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜನವರಿ 11 ರಿಂದ ನಡೆಯಲಿದೆ. 2024ರ ಟಿ20 ವಿಶ್ವಕಪ್‌ಗೆ ಸಿದ್ಧತೆಯ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಸರಣಿ ಮಹತ್ವದ್ದಾಗಿದೆ.
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜನವರಿ 11 ರಿಂದ ನಡೆಯಲಿದೆ. 2024ರ ಟಿ20 ವಿಶ್ವಕಪ್‌ಗೆ ಸಿದ್ಧತೆಯ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಸರಣಿ ಮಹತ್ವದ್ದಾಗಿದೆ. ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) 14 ತಿಂಗಳ ನಂತರ ಭಾರತ ತಂಡಕ್ಕೆ ಮರಳಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯಕ್ಕೆ ಲಭ್ಯರಿಲ್ಲ. ಆದರೆ ರೋಹಿತ್ ಶರ್ಮಾ 2022 ರ ಟಿ20 ವಿಶ್ವಕಪ್ (T20 World Cup 2024) ಬಳಿಕ ಮೊದಲ ಬಾರಿಗೆ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸಿದ್ದ ಬಹುತೇಕ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ. ಹಾಗಿದ್ದರೆ, ಜನವರಿ 11 ರಂದು ಮೊಹಾಲಿಯ ಹವಾಮಾನ (Mohali Weather Report) ಹೇಗಿರಲಿದೆ? ಪಂದ್ಯಕ್ಕೆ ಮಳೆಯ ಆತಂಕವಿದೆಯಾ ಎಂಬುದನ್ನು ನೋಡುವುದಾದರೆ..
ಮಳೆಯಾಗುವ ಸಾಧ್ಯತೆಗಳಿಲ್ಲ
ಜನವರಿ 11 ರಂದು ಮೊಹಾಲಿಯಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಆದರೆ ಪಂದ್ಯದ ವೇಳೆ ಇಬ್ಬನಿ ಬೀಳುವುದು ಖಚಿತ. ಈ ಕಾರಣದಿಂದಾಗಿ, ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸುತ್ತದೆ. ಮೊಹಾಲಿಯ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದುವರೆಗೆ ನಾಲ್ಕು ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಆದರೆ ಕೊನೆಯ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್ಗಳ ಸೋಲನ್ನು ಎದುರಿಸಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.
IND vs ENG: ಇಂಗ್ಲೆಂಡ್ ತಂಡದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡ ದಿನೇಶ್ ಕಾರ್ತಿಕ್..! ಆದರೆ..?
ಎರಡೂ ತಂಡಗಳ ದಾಖಲೆ ಹೇಗಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ 5 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ ನಾಲ್ಕರಲ್ಲಿ ಗೆದ್ದಿದ್ದರೆ, ಒಂದು ಪಂದ್ಯದ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇಲ್ಲಿಯವರೆಗೂ ಅಫ್ಘಾನಿಸ್ತಾನಕ್ಕೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ವಿರುದ್ಧ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಪ್ರಸಕ್ತ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ಮೊಹಾಲಿಯಲ್ಲಿ ನಡೆಯಲಿದ್ದು, ಎರಡನೇ ಟಿ20 ಪಂದ್ಯ ಜನವರಿ 14 ರಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಮತ್ತು ಮೂರನೇ ಟಿ20 ಪಂದ್ಯ ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಟಿ20 ಸರಣಿಗೆ ಉಭಯ ತಂಡಗಳ ತಂಡ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ