IND vs AFG: ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ ಸಂಜುಗೆ ಮತ್ತೆ ಅನ್ಯಾಯ; ನೆಟ್ಟಿಗರ ಆಕ್ರೋಶ

|

Updated on: Jan 11, 2024 | 7:57 PM

IND vs AFG: ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಖಂಡಿತವಾಗಿಯೂ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ರೋಹಿತ್ ಶರ್ಮಾ ಹಾಗೆ ಮಾಡಲಿಲ್ಲ. ಪ್ಲೇಯಿಂಗ್ 11 ರಲ್ಲಿ ಸಂಜು ಹೆಸರನ್ನು ನೋಡದ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆಯ್ಕೆ ಮಂಡಳಿಯ ವಿರುದ್ಧ ಕೆಂಡಕಾರುತ್ತಿದ್ದಾರೆ.

IND vs AFG: ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ ಸಂಜುಗೆ ಮತ್ತೆ ಅನ್ಯಾಯ; ನೆಟ್ಟಿಗರ ಆಕ್ರೋಶ
ಸಂಜು ಸ್ಯಾಮ್ಸನ್
Follow us on

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಅಫ್ಘಾನಿಸ್ತಾನ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಈ ಟಾಸ್ ಜೊತೆಯ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇದರಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೊರಬಿದ್ದ ಕೂಡಲೇ ಅಭಿಮಾನಿಗಳು ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ವಾಸ್ತವವಾಗಿ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವೂ ಇದ್ದು, ಇತ್ತೀಚೆಗೆ ನಡೆದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಅದ್ಭುತ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್​ಗೆ (Sanju Samson) ತಂಡದಲ್ಲಿ ಅವಕಾಶ ನೀಡಿಲ್ಲ.

ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗಲಿಲ್ಲ

ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಖಂಡಿತವಾಗಿಯೂ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ರೋಹಿತ್ ಶರ್ಮಾ ಹಾಗೆ ಮಾಡಲಿಲ್ಲ. ಪ್ಲೇಯಿಂಗ್ 11 ರಲ್ಲಿ ಸಂಜು ಹೆಸರನ್ನು ನೋಡದ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆಯ್ಕೆ ಮಂಡಳಿಯ ವಿರುದ್ಧ ಕೆಂಡಕಾರುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಶತಕ ಸಿಡಿಸಿದ್ದರು ಸರಣಿಯ ಮೂರನೇ ಪಂದ್ಯದಲ್ಲಿ 114 ಎಸೆತಗಳನ್ನು ಎದುರಿಸಿದ್ದ ಸಂಜು 108 ರನ್ ಗಳಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಈ ಸರಣಿಯಲ್ಲಿ ಸಂಜುಗೆ ಅವಕಾಶ ಸಿಗುವುದು ಖಚಿತ ಎಂತಲೇ ಹೇಳಲಾಗಿತ್ತು. ಆದರೆ ಸಂಜುಗೆ ಮತ್ತೆ ಅನ್ಯಾಯವಾಗಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ.

IND vs AFG 1st T20 Live Score: ಅಫ್ಘಾನ್ ತಂಡದ 3ನೇ ವಿಕೆಟ್ ಪತನ; ಗುರ್ಬಾಝ್ ಔಟ್

ತಿಲಕ್ ವರ್ಮಾಗೆ ಅವಕಾಶ

ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್ ಆಗಿ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಜಿತೇಶ್ ಹೊರತಾಗಿ, ತಿಲಕ್ ವರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದು, ಕಳೆದ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಅವರಿಗೆ ತಂಡದಲ್ಲಿ ಅವಕಾಶ ನೀಡಿರುವುದು ಕೂಡ ಅಭಿಮಾನಿಗಳು ಕೋಪಗೊಳ್ಳುವಂತೆ ಮಾಡಿದೆ. ಆದರೆ ಸಂಜು ತಮ್ಮ ಕೊನೆಯ ಟಿ20 ಪಂದ್ಯದಲ್ಲಿ ಕೇವಲ 26 ಎಸೆತಗಳಲ್ಲಿ 40 ರನ್ ಗಳಿಸಿದ್ದರು. ಅದಾಗ್ಯೂ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ. ಸಂಜು ವಿಷಯದಲ್ಲಿ ಈ ಹಿಂದೆಯೂ ಹೀಗೇ ಆಗಿತ್ತು. ಈ ಕಾರಣಕ್ಕಾಗಿಯೇ ಅಭಿಮಾನಿಗಳು ಟೀಂ ಇಂಡಿಯಾದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Thu, 11 January 24