IND vs AFG: ಮೊದಲ ಟಿ20 ಎಷ್ಟು ಗಂಟೆಗೆ ಆರಂಭ? ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ

|

Updated on: Jan 10, 2024 | 4:55 PM

IND vs AFG, 1st T20I Live Streaming: ನಾಳೆಯಿಂದ ಅಂದರೆ ಜನವರಿ 11 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಹಾಗೂ ಇಬ್ರಾಹಿಂ ಝದ್ರಾನ್ ನಾಯಕತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

IND vs AFG: ಮೊದಲ ಟಿ20 ಎಷ್ಟು ಗಂಟೆಗೆ ಆರಂಭ? ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ
ಭಾರತ- ಅಫ್ಘಾನಿಸ್ತಾನ
Follow us on

ನಾಳೆಯಿಂದ ಅಂದರೆ ಜನವರಿ 11 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಹಾಗೂ ಇಬ್ರಾಹಿಂ ಝದ್ರಾನ್ ನಾಯಕತ್ವದ ಅಫ್ಘಾನಿಸ್ತಾನ (India vs Afghanistan) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ವಿಶೇಷತೆ ಏನೆಂದರೆ 2022 ರ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಮೊದಲ ಬಾರಿಗೆ ಟಿ20 ಅಖಾಡದಲ್ಲಿ ಬ್ಯಾಟ್ ಬೀಸಲಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ಗೂ (T20 World Cup 2024) ಮುನ್ನ ಇದು ಟೀಂ ಇಂಡಿಯಾ ಆಡುತ್ತಿರುವ ಕೊನೆಯ ಟಿ20 ಸರಣಿ ಆಗಿರುವುದರಿಂದ ನಾಯಕ ರೋಹಿತ್ ಶರ್ಮಾಗೆ ಟಿ20 ವಿಶ್ವಕಪ್ ತಯಾರಿ ದೃಷ್ಟಿಯಿಂದ ಈ ಸರಣಿ ಅತ್ಯಂತ ಮಹತ್ವದಾಗಿದೆ. ಇನ್ನು ಈ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು, ಪಂದ್ಯದ ಬಗ್ಗೆ ಪೂರ್ಣ ವಿವರ ಈ ಕೆಳಗಿನಂತಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಇದೇ ಗುರುವಾರ, ಜನವರಿ 11 ರಂದು ನಡೆಯಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

IND vs AFG: ಟಿ20 ಸರಣಿಯಿಂದ ಹೊರಬಿದ್ದ ಅಫ್ಘಾನ್ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್..!

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ನಡೆಯಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್‌ವರ್ಕ್​ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.

ಟಿ20 ಸರಣಿಗೆ ಉಭಯ ತಂಡಗಳ ತಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ