IND vs AFG: ಭಾರತ vs ಅಫ್ಘಾನಿಸ್ತಾನ್ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು?

IND vs AFG 2024, T20 World Cup 2024: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಈ ವೇಳೆ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಇದೀಗ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿ ನಿಂತಿದೆ.

IND vs AFG: ಭಾರತ vs ಅಫ್ಘಾನಿಸ್ತಾನ್ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು?
IND vs AFG
Follow us
|

Updated on: Jun 19, 2024 | 10:59 AM

T20 World Cup 2024: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನ ಪಂದ್ಯಗಳು ಬುಧವಾರ (ಜೂನ್ 19) ಶುರುವಾಗಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಗುರುವಾರ ಆಡಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಎರಡೂ ತಂಡಗಳು ಮುಂಬರುವ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಎದುರಿಸಬೇಕಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಉಭಯ ತಂಡಗಳು. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

ಪಂದ್ಯ ಎಷ್ಟು ಗಂಟೆಗೆ ಶುರು?

ಬಾರ್ಬಡೋಸ್​ನಲ್ಲಿ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಹಗಲಿನಲ್ಲಿ ನಡೆಯಲಿದ್ದು, ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನೇರ ಪ್ರಸಾರ ಇರಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ-ಅಫ್ಘಾನಿಸ್ತಾನ್ ನಡುವಣ ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್​ವರ್ಕ್​ನ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ಇರಲಿದೆ.

ಉಚಿತವಾಗಿ ವೀಕ್ಷಿಸುವುದು ಹೇಗೆ?

ಈ ಪಂದ್ಯವನ್ನು ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ವೆಬ್​ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದ್ದು, ಇದಕ್ಕಾಗಿ ರಿಜಾರ್ಜ್​ ಮಾಡಬೇಕಾಗುತ್ತದೆ.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ