AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಅಫ್ಘನ್ 2ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿ?; ದೆಹಲಿ ಪಿಚ್, ಹವಾಮಾನ ವರದಿ ಇಲ್ಲಿದೆ

ಸೆಪ್ಟೆಂಬರ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 2ನೇ ಟಿ20 ಪಂದ್ಯ ನಡೆಯಲಿದೆ. ಸರಣಿ ಗೆಲ್ಲಲು ಭಾರತ, ಸಮಬಲ ಸಾಧಿಸಲು ಅಫ್ಘನ್ ಸಜ್ಜಾಗಿವೆ. ಈ ಲೇಖನದಲ್ಲಿ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11, ಪಿಚ್ ವರದಿ, ಹವಾಮಾನ ಮುನ್ಸೂಚನೆ ಹಾಗೂ ಪಂದ್ಯವನ್ನು ವೀಕ್ಷಿಸುವ ವಿಧಾನಗಳ ಸಂಪೂರ್ಣ ಮಾಹಿತಿ ಲಭ್ಯವಿದೆ.

ಭಾರತ- ಅಫ್ಘನ್ 2ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿ?; ದೆಹಲಿ ಪಿಚ್, ಹವಾಮಾನ ವರದಿ ಇಲ್ಲಿದೆ
ಭಾರತ Vs ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on:Sep 15, 2026 | 5:31 PM

Share

ಸೆಪ್ಟೆಂಬರ್ 15 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ನೋಡುತ್ತಿದೆ. ಇತ್ತ ಆತಿಥೇಯ ಅಫ್ಘಾನಿಸ್ತಾನ ಕೂಡ ಮೊದಲ ಟಿ20 ಸೋಲಿಗೆ ಸೇಡು ತೀರಿಸಿಕೊಳ್ಳುವ ಜೊತೆಗೆ ಸರಣಿಯನ್ನು ಸಮಬಲಗೊಳಿಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ?. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಯಾರಿಗೆ ಸಹಕಾರಿಯಾಗಲಿದೆ?. ಪಂದ್ಯದ ದಿನದಂದು ಹವಾಮಾನ ಹೇಗಿರಲಿದೆ?. ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದರ ಪೂರ್ಣ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ.

ಭಾರತ- ಅಫ್ಘನ್ ನಡುವಿನ 2ನೇ ಟಿ20 ಪಂದ್ಯದ ಬಗ್ಗೆ ಪೂರ್ಣ ಮಾಹಿತಿ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಸೆಪ್ಟೆಂಬರ್ 15 ರ ಮಂಗಳವಾರ ನಡೆಯಲಿದ್ದು, ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿರುವ ಈ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್‌ಕೋಡ್ ಅಪ್ಲಿಕೇಶನ್​ನಲ್ಲಿಯೂ ಪಂದ್ಯವನ್ನು ನೇರವಾಗಿ ವೀಕ್ಷಿಸಬಹುದು.

ದೆಹಲಿಯ ಹವಾಮಾನ ಹೇಗಿರಲಿದೆ?

ಅಕ್ಯೂವೆದರ್ ಪ್ರಕಾರ, ದೆಹಲಿಯಲ್ಲಿ ಇಂದು ಹವಾಮಾನವು ಪ್ರಕ್ಷುಬ್ಧವಾಗಿದ್ದು, ಶೇ. 55 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಮತ್ತು ಜೋರಾಗಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹಗಲಿನಲ್ಲಿ ಒಟ್ಟು ಎರಡು ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಸಂಜೆ ಮಳೆಯಾಗುವ ಸಾಧ್ಯತೆ ಹೆಚ್ಚು. ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆಯಾದರೂ, ಗಮನಾರ್ಹ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಓವರ್‌ಗಳ ಸಂಖ್ಯೆ ಕಡಿಮೆಯಾಗಬಹುದು.

ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ವರದಿ

ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಉತ್ತಮ ಬೌನ್ಸ್ ಇರಲಿದ್ದು, ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಇದು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುತ್ತದೆ. ಸಣ್ಣ ಬೌಂಡರಿಗಳು ಬೌಲರ್‌ಗಳಿಗೆ ಸವಾಲನ್ನು ಇನ್ನಷ್ಟು ಹೆಚ್ಚಿಸುತ್ತವೆ. ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ.

ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ ಗೆದ್ದರೂ ಕಪ್ ಸ್ವೀಕರಿಸದ ಟೀಂ ಇಂಡಿಯಾ! ಬಿಸಿಸಿಐ ಕೊಟ್ಟ ಕಾರಣ ಇಲ್ಲಿದೆ

2ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ.

ಅಫ್ಘಾನಿಸ್ತಾನ ಸಂಭಾವ್ಯ ಪ್ಲೇಯಿಂಗ್ 11

ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ಮತ್ತು ಫಜಲ್ಹಕ್ ಫಾರೂಕಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Tue, 15 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ