
ಸೆಪ್ಟೆಂಬರ್ 15 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ನೋಡುತ್ತಿದೆ. ಇತ್ತ ಆತಿಥೇಯ ಅಫ್ಘಾನಿಸ್ತಾನ ಕೂಡ ಮೊದಲ ಟಿ20 ಸೋಲಿಗೆ ಸೇಡು ತೀರಿಸಿಕೊಳ್ಳುವ ಜೊತೆಗೆ ಸರಣಿಯನ್ನು ಸಮಬಲಗೊಳಿಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ?. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಯಾರಿಗೆ ಸಹಕಾರಿಯಾಗಲಿದೆ?. ಪಂದ್ಯದ ದಿನದಂದು ಹವಾಮಾನ ಹೇಗಿರಲಿದೆ?. ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದರ ಪೂರ್ಣ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯ ಸೆಪ್ಟೆಂಬರ್ 15 ರ ಮಂಗಳವಾರ ನಡೆಯಲಿದ್ದು, ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿರುವ ಈ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್‌ಕೋಡ್ ಅಪ್ಲಿಕೇಶನ್ನಲ್ಲಿಯೂ ಪಂದ್ಯವನ್ನು ನೇರವಾಗಿ ವೀಕ್ಷಿಸಬಹುದು.
ಅಕ್ಯೂವೆದರ್ ಪ್ರಕಾರ, ದೆಹಲಿಯಲ್ಲಿ ಇಂದು ಹವಾಮಾನವು ಪ್ರಕ್ಷುಬ್ಧವಾಗಿದ್ದು, ಶೇ. 55 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಮತ್ತು ಜೋರಾಗಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹಗಲಿನಲ್ಲಿ ಒಟ್ಟು ಎರಡು ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಸಂಜೆ ಮಳೆಯಾಗುವ ಸಾಧ್ಯತೆ ಹೆಚ್ಚು. ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆಯಾದರೂ, ಗಮನಾರ್ಹ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಓವರ್‌ಗಳ ಸಂಖ್ಯೆ ಕಡಿಮೆಯಾಗಬಹುದು.
ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಉತ್ತಮ ಬೌನ್ಸ್ ಇರಲಿದ್ದು, ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಇದು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುತ್ತದೆ. ಸಣ್ಣ ಬೌಂಡರಿಗಳು ಬೌಲರ್‌ಗಳಿಗೆ ಸವಾಲನ್ನು ಇನ್ನಷ್ಟು ಹೆಚ್ಚಿಸುತ್ತವೆ. ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ.
ಮಹಿಳಾ ಟಿ20 ಏಷ್ಯಾಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದ ಟೀಂ ಇಂಡಿಯಾ! ಬಿಸಿಸಿಐ ಕೊಟ್ಟ ಕಾರಣ ಇಲ್ಲಿದೆ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ.
ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ಮತ್ತು ಫಜಲ್ಹಕ್ ಫಾರೂಕಿ.
Published On - 5:23 pm, Tue, 15 September 26