ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಇದೇ ಭಾನುವಾರ ಅಂದರೆ ಜನವರಿ 14 ರಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ (Holkar Stadium in Indore) ನಡೆಯಲಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ 6 ವಿಕೆಟ್ಗಳ ಸುಲಭ ಜಯ ಸಾಧಿಸಿದ್ದ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾ (Team India) ಇದೆ. ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಗುರಿ ಹೊಂದಿದೆ. ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಿರುವುದರಿಂದ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆ ಹೆಚ್ಚಿದೆ.
ಇನ್ನು ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದೊಂದಿಗೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು 14 ತಿಂಗಳ ನಂತರ ಟಿ20 ತಂಡದಲ್ಲಿ ಆಡುತ್ತಿರುವ ಕೊಹ್ಲಿಯ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಕೊಹ್ಲಿ ಆಗಮನದಿಂದ ತಿಲಕ್ ವರ್ಮಾ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಇಂಜುರಿಂದಾಗಿ ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದ ಯಶಸ್ವಿ ಜೈಸ್ವಾಲ್ ಕೂಡ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಹೀಗಾಗಿ ಈ ಪಂದ್ಯಕ್ಕೆ ರೋಹಿತ್ ಯಾವ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಾರೆ ಎಂಬುದು ಕುತೂಹಲ ಹೆಚ್ಚಿಸಿದೆ.
IND vs AFG: ಟಿ20 ಅಖಾಡಕ್ಕಿಳಿಯಲು ಕೊಹ್ಲಿ ಸಜ್ಜು; ಆಪ್ತನಿಗೆ ತಂಡದಿಂದ ಕೋಕ್ ನೀಡ್ತಾರಾ ರೋಹಿತ್?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಇದೇ ಭಾನುವಾರ, ಜನವರಿ 14 ರಂದು ನಡೆಯಲ್ಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ನಡೆಯಲ್ಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್ವರ್ಕ್ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ