AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಟಾಸ್ ಗೆದ್ದ ಭಾರತ; ಟಿ20ಗೆ ಮರಳಿದ ಕಿಂಗ್ ಕೊಹ್ಲಿ! ತಂಡದಲ್ಲಿ 2 ಬದಲಾವಣೆ

IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯ ಇಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇನ್ನು ಈ ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ಇಲ್ಲಿಯವರೆಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

IND vs AFG: ಟಾಸ್ ಗೆದ್ದ ಭಾರತ; ಟಿ20ಗೆ ಮರಳಿದ ಕಿಂಗ್ ಕೊಹ್ಲಿ! ತಂಡದಲ್ಲಿ 2 ಬದಲಾವಣೆ
ಭಾರತ- ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on:Jan 14, 2024 | 6:56 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan ನಡುವಿನ 3 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Holkar Stadium in Indore) ನಡೆಯುತ್ತಿದೆ. ಇನ್ನು ಈ ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ಇಲ್ಲಿಯವರೆಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಇಂದು ಕೂಡ ಅಫ್ಘಾನಿಸ್ತಾನವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಮೊದಲ ಪಂದ್ಯದಂತೆ ಈ ಪಂದ್ಯದಲ್ಲೂ ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಬದಲಾವಣೆ ಕಂಡುಬಂದಿದೆ.

ಟೀಂ ಇಂಡಿಯಾದಲ್ಲಿ 2 ಬದಲಾವಣೆ

ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿದೆ. ಯಶಸ್ವಿ ಜೈಸ್ವಾಲ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಆಡುವ ಹನ್ನೊಂದರೊಳಗೆ ಪ್ರವೇಶಿಸಿದ್ದಾರೆ. ಯಶಸ್ವಿ ಗಾಯದಿಂದಾಗಿ ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದರು. ಹಾಗಾಗಿ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಯಶಸ್ವಿ ಪ್ರವೇಶದಿಂದಾಗಿ ಶುಭ್‌ಮನ್ ಹೊರಗುಳಿಯಬೇಕಾಗಿದೆ. ಹಾಗೆಯೇ ವಿರಾಟ್ ವಾಪಸಾತಿಯಿಂದಾಗಿ ತಿಲಕ್ ವರ್ಮಾ ಕೂಡ ತಂಡದಿಂದ ಹೊರಗುಳಿಯಬೇಕಾಗಿದೆ.

ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿ 1 ಬದಲಾವಣೆ ಮಾಡಿದೆ. ನೂರ್ ಅಹಮದ್ ಪ್ಲೇಯಿಂಗ್ ಇಲೆವೆನ್‌ಗೆ ಎಂಟ್ರಿ ಕೊಟ್ಟಿದ್ದರೆ. ರಹಮತ್ ಶಾ ಅವರನ್ನು ತಂಡದಿಂದ ಹೊರಗಿಡಲಾಗಿದೆ.

IND vs AFG 2nd T20I Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜಿಬುಲ್ಲಾ ಝದ್ರಾನ್, ಕರೀಂ ಜನತ್, ಗುಲ್ಬದಿನ್ ನೈಬ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕೀಬ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Sun, 14 January 24

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ