
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಕೊನೆಯ ಟಿ20ಯಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ (T20 World Cup 2024) ಮುನ್ನ ಭಾರತ ತಂಡ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ನಾಯಕ ರೋಹಿತ್ ಶರ್ಮಾ (Rohit Sharma) ಈ ಪಂದ್ಯದಲ್ಲಿ ತಮ್ಮ ಬೆಂಚ್ ಬಲವನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಅದರಂತೆ ಈ ಪಂದ್ಯದ ಟಾಸ್ ಗೆದ್ದಿರುವ ನಾಯಕ ರೋಹಿತ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಎರಡೂ ತಂಡಗಳ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಕೇಲವು ಬದಲಾವಣೆಗಳಾಗಿವೆ.
ಇನ್ನು ಟೀಂ ಇಂಡಿಯಾದಲ್ಲಾಗಿರುವ ಬದಲಾವಣೆಗಳನ್ನು ನೋಡುವುದಾದರೆ,, ತಂಡದಲ್ಲಿ 3 ಬದಲಾವಣೆಗಳಾಗಿವೆ. ಅದರಂತೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್, ಅವೇಶ್ ಖಾನ್ ಮತ್ತು ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಆಗಮನದೊಂದಿಗೆ ಜಿತೇಶ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಅರ್ಷದೀಪ್ ಸಿಂಗ್ ತಂಡದಿಂದ ಹೊರನಡೆದಿದ್ದಾರೆ.
ಏತನ್ಮಧ್ಯೆ, ಶುಭಮನ್ ಗಿಲ್ ಮತ್ತೊಮ್ಮೆ ತಂಡದ ಪ್ಲೇಯಿಂಗ್ ಹನ್ನೊಂದರಲ್ಲಿ ಅವಕಾಶ ಪಡೆದಿಲ್ಲ. ಸರಣಿಯ ಮೊದಲ ಪಂದ್ಯವನ್ನು ಗಿಲ್ ಆಡಿದ್ದರು. ಆ ಪಂದ್ಯದಲ್ಲಿ ಅವರು 12 ಎಸೆತಗಳಲ್ಲಿ 23 ರನ್ ಗಳಿಸಿದ್ದರು. ಇದರ ನಂತರ, ಅವರ ಬದಲಿಗೆ, ಯಶಸ್ವಿ ಜೈಸ್ವಾಲ್ ಅವರಿಗೆ ಎರಡನೇ ಪಂದ್ಯದಲ್ಲಿ ಅವಕಾಶ ನೀಡಲಾಯಿತ. ಸಿಕ್ಕ ಅವಕಾಶ ಬಳಿಸಿಕೊಂಡಿದ್ದ ಜೈಸ್ವಾಲ್ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇದೀಗ ಮೂರನೇ ಪಂದ್ಯದಲ್ಲೂ ಅವರಿಗೆ ಅವಕಾಶ ನೀಡಲಾಗಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅವೇಶ್ ಖಾನ್, ಮುಖೇಶ್ ಕುಮಾರ್.
🚨 Team Update 🚨
3⃣ changes in #TeamIndia‘s Playing XI for today👌👌
Follow the Match ▶️ https://t.co/oJkETwOHlL#INDvAFG | @IDFCFIRSTBank pic.twitter.com/xsjfKPW4p5
— BCCI (@BCCI) January 17, 2024
3rd T20. Afghanistan XI: R Gurbaz (wk), I Zadran (c), G Naib, A Omarzai, M Nabi, N Zadran, K Janat, S Ashraf, Q Ahmad, M S Safi, F Ahmad Malik. https://t.co/oJkETwOHlL #INDvAFG @IDFCFIRSTBank
— BCCI (@BCCI) January 17, 2024
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ (ನಾಯಕ), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಶರಫುದ್ದೀನ್ ಅಶ್ರಫ್, ಖೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫರೀದ್ ಅಹ್ಮದ್ ಮಲಿಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Wed, 17 January 24