IND vs AFG T20I: ಭಾರತ-ಅಫ್ಘಾನಿಸ್ತಾನ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಎಲ್ಲ ಮಾಹಿತಿ
India vs Afghanistan 3rd T20I: ಅಫ್ಘಾನಿಸ್ತಾನ ವಿರುದ್ಧದ ಮೊದಲ ಎರಡು ಟಿ20 ಪಂದ್ಯ ಗೆದ್ದ ರೋಹಿತ್ ಶರ್ಮಾ ಪಡೆ ಕ್ಲೀನ್ಸ್ವೀಪ್ನತ್ತ ಚಿತ್ತ ನೆಟ್ಟಿದೆ. ಹಾಗಾದರೆ, ಇಂಡೋ-ಅಫ್ಘಾನ್ ಅಂತಿಮ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾನುವಾರ ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಭಾರತ (India vs Afghanistan) ಭರ್ಜರಿ ಜಯ ಸಾಧಿಸಿತು. ಅಕ್ಷರ್ ಪಟೇಲ್ ಬೌಲಿಂಗ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್ಗಳ ಗೆಲುವು ಕಂಡಿತು. ಈ ಮೂಲಕ ಸರಣಿ ವಶಪಡಿಸಿಕೊಂಡಿದೆ. ಇದೀಗ ರೋಹಿತ್ ಶರ್ಮಾ ಪಡೆ ಕ್ಲೀನ್ಸ್ವೀಪ್ನತ್ತ ಚಿತ್ತ ನೆಟ್ಟಿದೆ. ಹಾಗಾದರೆ, ಇಂಡೋ-ಅಫ್ಘಾನ್ ಅಂತಿಮ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ತೃತೀಯ ಅಂತಿಮ ಟಿ20 ಪಂದ್ಯ ಬುಧವಾರ, ಜನವರಿ 17 ರಂದು ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ತೃತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
IND vs AFG: ಜೈಸ್ವಾಲ್- ದುಬೆ ಸಿಡಿಲಬ್ಬರದ ಅರ್ಧಶತಕ; ಟಿ20 ಸರಣಿ ಗೆದ್ದ ಭಾರತ
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ತೃತೀಯ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್ವರ್ಕ್ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯವನ್ನು ಎಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.
ಟಿ20 ಸರಣಿಗೆ ಉಭಯ ತಂಡಗಳ ತಂಡ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ