Breaking: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್- ಕೊಹ್ಲಿಗೆ ಸ್ಥಾನ..!
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಇಂದು 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ಇದು ಭಾರತದ ಕೊನೆಯ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿರಿವುದರಿಂದ ತಂಡಕ್ಕೆ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ.
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಇಂದು 16 ಸದಸ್ಯರ ಟೀಂ ಇಂಡಿಯಾವನ್ನು (India vs Afghanistan) ಪ್ರಕಟಿಸಿದೆ. ಟಿ20 ವಿಶ್ವಕಪ್‌ಗೂ (T20 World Cup 2024) ಮುನ್ನ ಇದು ಭಾರತದ ಕೊನೆಯ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿರಿವುದರಿಂದ ತಂಡಕ್ಕೆ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ. ಜನವರಿ 11 ರಿಂದ ಜನವರಿ 17 ರವರೆಗೆ ಎರಡೂ ತಂಡಗಳ ನಡುವೆ ಎಲ್ಲಾ ಮೂರು ಪಂದ್ಯಗಳು ನಡೆಯಲಿವೆ. ಇನ್ನು ಆಯ್ಕೆಯಾದ ತಂಡದ ಬಗ್ಗೆ ಹೇಳುವುದಾದರೆ,, ನಿರೀಕ್ಷೆಯಂತೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಹಾಗೆಯೇ ವಿರಾಟ್ ಕೊಹ್ಲಿ (Virat Kohli) ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
14 ತಿಂಗಳ ನಂತರ ತಂಡದಲ್ಲಿ ಅವಕಾಶ!
ಆಯ್ಕೆಯಾಗಿರುವ ತಂಡದಲ್ಲಿ ಯುವ ಆಟಗಾರರ ದಂಡೆ ತುಂಬಿದೆ. ಆದರೆ ಕೋಟ್ಯಾಂತರ ಅಭಿಮಾನಿಗಳ ನಿರೀಕ್ಷೆಗೆ ಬಿಸಿಸಿಐ ನೀರೆರಿದಿದೆ. ಅದರಂತೆ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸುಮಾರು 14 ತಿಂಗಳುಗಳ ನಂತರ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ವಾಸ್ತವವಾಗಿ ರೋಹಿತ್ ಹಾಗೂ ವಿರಾಟ್ 2022 ರಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಈ ಚುಟುಕು ಮಾದರಿಯಿಂದ ದೂರ ಉಳಿದಿದ್ದರು. ಅಲ್ಲದೆ ಈ ಇಬ್ಬರು ಈ ಮಾದರಿಯಲ್ಲಿ ಇನ್ನು ಮುಂದೆ ಆಡುವುದು ಅನುಮಾನ ಎಂತಲೂ ಭಾವಿಸಲಾಗಿತ್ತು. ಆದರೆ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಬಿಸಿಸಿಐ ಈ ಇಬ್ಬರಿಗೆ ಅವಕಾಶ ನೀಡಿದೆ.
IND vs AFG: ಸೂರ್ಯ, ಪಾಂಡ್ಯ ಸೇರಿದಂತೆ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಟಿ20 ಸರಣಿಗೆ ಅಲಭ್ಯ..!
ಪಾಂಡ್ಯ, ಸೂರ್ಯ, ರುತುರಾಜ್ಗೆ ಇಂಜುರಿ
ಮುಂಚೆಯೇ ವರದಿಯಾದಂತೆ ಈ ಟಿ20 ಸರಣಿಯಿಂದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಈ ಮೂವರು ಆಟಗಾರರು ಇಂಜುರಿಯಿಂದ ಬಳಲುತ್ತಿದ್ದು, ಅವರಿನ್ನು ಸಂಪೂರ್ಣವಾಗಿ ಫಿಟ್ ಆಗದ ಕಾರಣ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾಯಕತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಆಯ್ಕೆದಾರರಿಗೆ ಇನ್ನಷ್ಟು ಸುಲಭವಾಗಿದ್ದು, ರೋಹಿತ್ ಶರ್ಮಾ ಅವರಿಗೆ ಈ ಜವಾಬ್ದಾರಿ ಸಿಕ್ಕಿದೆ.
🚨 NEWS 🚨#TeamIndia’s squad for @IDFCFIRSTBank T20I series against Afghanistan announced 🔽
Rohit Sharma (C), S Gill, Y Jaiswal, Virat Kohli, Tilak Varma, Rinku Singh, Jitesh Sharma (wk), Sanju Samson (wk), Shivam Dube, W Sundar, Axar Patel, Ravi Bishnoi, Kuldeep Yadav,…
— BCCI (@BCCI) January 7, 2024
ಟಿ20 ಸರಣಿಗೆ ಉಭಯ ತಂಡಗಳು
ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
Published On - 7:26 pm, Sun, 7 January 24