VIDEO: ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಂದಿಗೆ ವಿರಾಟ್ ಕೊಹ್ಲಿ ಹೇಗೆ ವರ್ತಿಸಿದ್ರು ನೋಡಿ..!
Virat Kohli Fan Video: ಅಫ್ಘಾನಿಸ್ತಾನ್ ತಂಡದ ಈ ಇನಿಂಗ್ಸ್ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರು ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಮೈದಾನಕ್ಕೆ ನುಗ್ಗಿದ್ದಾರೆ. ಕಿಂಗ್ ಕೊಹ್ಲಿ ಬೌಂಡರಿ ಬಳಿಕ ಫೀಲ್ಡಿಂಗ್ ಮಾಡುತ್ತಿದ್ದಾಗ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಯುವಕನೊಬ್ಬ ಮೈದಾನಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾನೆ.
ಇಂದೋರ್ನ ಹೋಲ್ಕರ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ (Team India) ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಅಫ್ಘಾನಿಸ್ತಾನ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗುಲ್ಬದ್ದೀನ್ ನೈಬ್ 35 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 57 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಕರೀಮ್ ಜನ್ನತ್ (20) ಹಾಗೂ ಮುಜೀಬ್ ಉರ್ ರೆಹಮಾನ್ (21) ಉಪಯುಕ್ತ ಕಾಣಿಕೆ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡದ ಮೊತ್ತವನ್ನು 172 ಕ್ಕೆ ತಲುಪಿಸಿದರು.
ಮೈದಾನಕ್ಕೆ ನುಗ್ಗಿದ ಅಭಿಮಾನಿ:
ಅಫ್ಘಾನಿಸ್ತಾನ್ ತಂಡದ ಈ ಇನಿಂಗ್ಸ್ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರು ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಮೈದಾನಕ್ಕೆ ನುಗ್ಗಿದ್ದಾರೆ. ಕಿಂಗ್ ಕೊಹ್ಲಿ ಬೌಂಡರಿ ಬಳಿಕ ಫೀಲ್ಡಿಂಗ್ ಮಾಡುತ್ತಿದ್ದಾಗ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಯುವಕನೊಬ್ಬ ಮೈದಾನಕ್ಕೆ ಪ್ರವೇಶಿಸಿದ್ದ. ಅಷ್ಟೇ ಅಲ್ಲದೆ ನೇರವಾಗಿ ಕಿಂಗ್ ಕೊಹ್ಲಿ ಬಳಿ ಓಡಿ ಬಂದಿದ್ದಾನೆ. ಅಷ್ಟರಲ್ಲಾಗಲೇ ಭದ್ರತಾ ಸಿಬ್ಬಂದಿಗಳು ಕೂಡ ಬಂದರು.
ಆದರೆ ತನ್ನ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆಯುವ ಮುನ್ನ ವಿರಾಟ್ ಕೊಹ್ಲಿ ಅಪ್ಪುಗೆ ನೀಡಿದರು. ಇದಾದ ಬಳಿಕವಷ್ಟೇ ಭದ್ರತಾ ಸಿಬ್ಬಂದಿಗಳಿಗೆ ತನ್ನ ಫ್ಯಾನ್ನನ್ನು ವಶಕ್ಕೆ ಪಡೆಯಲು ಅನುವು ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಅಭಿಮಾನಿಯ ಫೋಟೋ ಹಾಗೂ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗೆದ್ದು ಬೀಗಿದ ಭಾರತ:
ಅಫ್ಘಾನಿಸ್ತಾನ್ ನೀಡಿದ 173 ರನ್ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 34 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 68 ರನ್ ಬಾರಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 63 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 15.4 ಓವರ್ಗಳಲ್ಲಿ 173 ರನ್ ಕಲೆಹಾಕಿ ಭರ್ಜರಿ ಜಯ ಸಾಧಿಸಿತು.
ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಮೂರನೇ ಪಂದ್ಯವು ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.
ಇದನ್ನೂ ಓದಿ: Virat Kohli: ರಿಎಂಟ್ರಿಯೊಂದಿಗೆ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ
ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜಿಬುಲ್ಲಾ ಝದ್ರಾನ್, ಕರೀಂ ಜನ್ನತ್, ಗುಲ್ಬದಿನ್ ನೈಬ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್.
Published On - 7:09 am, Mon, 15 January 24