8 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಎದುರಾಳಿ!

IND vs AFG: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕೈಕ ಟೆಸ್ಟ್ ಪಂದ್ಯವು ಜೂನ್ 6 ರಿಂದ ಶುರುವಾಗಲಿದೆ. ಈ ಪಂದ್ಯದ ಬಳಿಕ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ ಮೂರು ಮ್ಯಾಚ್​ಗಳ ಏಕದಿನ ಪಂದ್ಯಗಳನ್ನಾಡಲಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.

8 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಎದುರಾಳಿ!
Team India
Image Credit source: BCCI

Updated on: Jun 03, 2026 | 1:01 PM

ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಇದೀಗ ತವರಿನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದು ಕೂಡ 8 ಸುದೀರ್ಘ 8 ವರ್ಷಗಳ ಬಳಿಕ. ಅಂದರೆ ಉಭಯ ತಂಡಗಳು ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿ ಬರೋಬ್ಬರಿ 8 ವರ್ಷಗಳು ಕಳೆದಿವೆ.

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಅಂದಿನ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.

  • ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 474 ರನ್​ ಕಲೆಹಾಕಿದ್ದರು.
  • ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ತಂಡ 109 ರನ್​ಗಳಿಗೆ ಆಲೌಟ್ ಆಗಿದ್ದರು.
  • ಟೀಮ್ ಇಂಡಿಯಾ ಫಾಲೋಆನ್ ಹೇರಿದ ಹಿನ್ನಲೆ ಅಫ್ಘಾನಿಸ್ತಾನ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು.
  • ದ್ವಿತೀಯ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡವು ಕೇವಲ 103 ರನ್​ಗಳಿಸಿ ಆಲೌಟ್ ಆಯಿತು.
  • ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಭರ್ಜರಿ ಜಯ ಸಾಧಿಸಿದ್ದರು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ.

ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್​ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್​ಪುರ್​ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ. ಈ ಪಂದ್ಯದಲ್ಲಾದರೂ ಅಫ್ಘಾನಿಸ್ತಾನ್ ಪಡೆ ಯಂಗ್ ಇಂಡಿಯಾಗೆ ಸವಾಲೆಸೆಯಲಿದೆಯಾ ಕಾದು ನೋಡಬೇಕಿದೆ.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ.

ಇದನ್ನೂ ಓದಿ: FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು!

ಅಫ್ಘಾನಿಸ್ತಾನ್ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಝ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮಝಾಹಿ, ಶರಫುದಿನ್ ಅಶ್ರಫ್, ನಂಗಿಯಾಲೈ ಖರೋಟಿ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಂ ಸಫಿ.

 

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us