IND vs AFG: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ

T20 World Cup 2024: ಭಾರತ ತಂಡವು ಇಂದು (ಜೂ.20) ಸೂಪರ್-8 ಸುತ್ತಿನಲ್ಲಿ ತನ್ನ ಮೊದಲ ಪಂದ್ಯವನ್ನಾಡಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ ಹಾಗೂ ಡಿಸ್ನಿ ಹಾಟ್​ ಸ್ಟಾರ್​ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.

IND vs AFG: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ
Team India
Follow us
ಝಾಹಿರ್ ಯೂಸುಫ್
|

Updated on: Jun 20, 2024 | 8:27 AM

T20 World Cup 2024: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ (IND vs AFG) ತಂಡಗಳು ಮುಖಾಮುಖಿಯಾಗಲಿದೆ. ದ್ವಿತೀಯ ಸುತ್ತಿನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ನ ಪಿಚ್​ ಬೌಲರ್​ಗಳಿಗೆ ಸಹಕಾರಿಯಾಗಿತ್ತು.

ಆದರೆ ಇದೀಗ ಭಾರತ ತಂಡವು ಬಾರ್ಬಡೋಸ್​ನಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ ಆರಂಭದಲ್ಲಿ ವೇಗದ ಬೌಲರ್​ಗಳಿಗೆ ಸಹಕಾರಿಯಾಗಿದ್ದರೂ, ಇದಾದ ಬಳಿಕ ಈ ಪಿಚ್​ನಲ್ಲಿ ಬ್ಯಾಟರ್​ಗಳು ಅಬ್ಬರಿಸಲಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾ ಇಲ್ಲಿ ಅನುಭವಿ ಸ್ಪಿನ್ನರ್​ನನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಏಕೆಂದರೆ ಮಧ್ಯಮದ ಓವರ್​ಗಳು ಪಂದ್ಯದ ಫಲಿತಾಂಶದ ಪಾಲಿಗೆ ನಿರ್ಣಾಯಕವಾಗಬಹುದು. ಹೀಗಾಗಿ ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಬಹುದು.

ಇನ್ನುಳಿದಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಮುಂದುವರೆಯಲಿದ್ದಾರೆ.

ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಬ್ಯಾಟ್ ಬೀಸಲಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ.

ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ
  2. ವಿರಾಟ್ ಕೊಹ್ಲಿ
  3. ರಿಷಭ್ ಪಂತ್ (ವಿಕೆಟ್ ಕೀಪರ್)
  4. ಸೂರ್ಯಕುಮಾರ್ ಯಾದವ್
  5. ಶಿವಂ ದುಬೆ
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ಕುಲ್ದೀಪ್ ಯಾದವ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಸಿರಾಜ್
  11. ಅರ್ಷದೀಪ್ ಸಿಂಗ್

ಇದನ್ನೂ ಓದಿ: Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ