IND vs AFG: ಏಷ್ಯನ್ ಗೇಮ್ಸ್​ ಆಡಲಿದೆ ಟೀಂ ಇಂಡಿಯಾ; ಅಫ್ಘಾನ್ ವಿರುದ್ಧದ ಏಕದಿನ ಸರಣಿ ಮುಂದೂಡಿಕೆ!

Asian Games 2023: ಜಯ್ ಶಾ ಮಾಹಿತಿ ಪ್ರಕಾರ ಮುಂದಿನ ವರ್ಷದ ಅಂದರೆ, 2024 ರ ಜನವರಿಯಲ್ಲಿ ಈ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಯೋಜಿಸುವ ಸಾಧ್ಯತೆಗಳಿವೆ.

IND vs AFG: ಏಷ್ಯನ್ ಗೇಮ್ಸ್​ ಆಡಲಿದೆ ಟೀಂ ಇಂಡಿಯಾ; ಅಫ್ಘಾನ್ ವಿರುದ್ಧದ ಏಕದಿನ ಸರಣಿ ಮುಂದೂಡಿಕೆ!
ಏಷ್ಯನ್ ಗೇಮ್ಸ್
Follow us
ಪೃಥ್ವಿಶಂಕರ
|

Updated on:Jul 08, 2023 | 9:44 AM

ಈ ಹಿಂದೆ ಕೇಳಿಬಂದ ಮಾಹಿತಿ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ,  ಅಫ್ಘಾನಿಸ್ತಾನ (India vs Afghanistan) ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸರಣಿಯನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಆದರೀಗ ಈ ಸರಣಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿರುವ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah), ಉಭಯ ತಂಡಗಳ ನಡುವಿನ ಏಕದಿನ ಸರಣಿಯನ್ನು ಸುಮಾರು 6 ತಿಂಗಳ ಕಾಲ ಮುಂದೂಡಲಾಗಿದೆ ಎಂದಿದ್ದಾರೆ. ಅಂದರೆ ಜಯ್ ಶಾ ನೀಡಿರುವ ಮಾಹಿತಿ ಪ್ರಕಾರ ಮುಂದಿನ ವರ್ಷದ ಅಂದರೆ, 2024 ರ ಜನವರಿಯಲ್ಲಿ ಈ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಯೋಜಿಸುವ ಸಾಧ್ಯತೆಗಳಿವೆ. ಸರಣಿ ಮುಂದೂಡಿಕೆಯ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಮಾಡಿರುವ ವರದಿ ಪ್ರಕಾರ, ಟೀಂ ಇಂಡಿಯಾ (Team India) ಜೂನ್ 23 ರಿಂದ ಜೂನ್ 30 ರವರೆಗೆ ಅಫ್ಘಾನಿಸ್ತಾನದೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿತ್ತು. ಆದರೆ ಕಾರಣಾಂತರಗಳಿಂದ ಇದನ್ನು ಎರಡೂ ಮಂಡಳಿಗಳ ಪರಸ್ಪರ ಒಪ್ಪಿಗೆಯೊಂದಿಗೆ ಮುಂದೂಡಲಾಗಿದೆ ಎಂದು ವರದಿ ಮಾಡಿದೆ.

ವರದಿ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ವಿಶ್ವಕಪ್‌ಗೂ ಮುನ್ನ ಯಾವುದೇ ಸರಣಿ ಇರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿದೆ ಎಂದು ಜಯ್ ಶಾ ಹೇಳಿದ್ದಾರೆ. ಹಾಗೆಯೇ ಏಷ್ಯನ್ ಗೇಮ್ಸ್‌ನಲ್ಲಿ ಟೀಂ ಇಂಡಿಯಾ ಭಾಗವಹಿಸುವುದನ್ನು ಖಚಿತಪಡಿಸಿರುವ ಜಯ್​ ಶಾ, ಸೆ.23ರಂದು ಚೀನಾದಲ್ಲಿ ಆರಂಭವಾಗಲಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಕ್ರಿಕೆಟ್ ತಂಡ ಭಾಗವಹಿಸಲಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ಅಪೆಕ್ಸ್ ಕೌನ್ಸಿಲ್ ಭಾರತೀಯ ಪುರುಷ ಮತ್ತು ಮಹಿಳಾ ತಂಡವನ್ನು ಅನುಮೋದಿಸಿದೆ ಎಂದು ಜಯ್​ ಶಾ ಹೇಳಿದ್ದಾರೆ.

Asian Games: ಧವನ್​ಗೆ ನಾಯಕತ್ವ; ಏಷ್ಯನ್ ಗೇಮ್ಸ್​ಗೆ ಭಾರತ ಸಂಭಾವ್ಯ ತಂಡ ಹೀಗಿದೆ

ಬಿ ತಂಡ ಏಷ್ಯನ್ ಗೇಮ್ಸ್‌ಗೆ ಹೋಗಲಿದೆ

ಇದೇ ಮೊದಲ ಬಾರಿಗೆ ಭಾರತದ ಪುರುಷ ಮತ್ತು ಮಹಿಳಾ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲಿದೆ. ಇದಕ್ಕೂ ಮೊದಲು 2010 ಮತ್ತು 2014ರಲ್ಲಿ ಏಷ್ಯನ್ ಗೇಮ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಂಡಿತ್ತು. ಆದರೆ ಭಾರತ ಎರಡೂ ಬಾರಿ ಭಾಗವಹಿಸಿರಲಿಲ್ಲ. 2010 ಮತ್ತು 2014ರಂತೆಯೇ ಈ ಬಾರಿಯೂ ಏಷ್ಯನ್ ಗೇಮ್ಸ್‌ನಲ್ಲಿ ಟಿ20 ಮಾದರಿಯಲ್ಲಿ ಕ್ರಿಕೆಟ್ ನಡೆಯಲಿದೆ. ಏಷ್ಯನ್ ಗೇಮ್ಸ್‌ನಲ್ಲಿ ಬಿಸಿಸಿಐ ಪುರುಷರ ಬಿ ತಂಡ ಮತ್ತು ಪೂರ್ಣ ಸಾಮರ್ಥ್ಯದ ಮಹಿಳಾ ತಂಡವನ್ನು ಕಾಣಬಹುದಾಗಿದೆ.

ಜುಲೈ 15ರೊಳಗೆ ಬಿಸಿಸಿಐ ಪಟ್ಟಿಯನ್ನು ಕಳುಹಿಸಲಿದೆ

ಕಳೆದ ಎರಡು ಆವೃತ್ತಿಗಳಲ್ಲಿ ಪುರುಷರ ವಿಭಾಗದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಚಿನ್ನ ಗೆದ್ದಿದ್ದರೆ, ಮಹಿಳೆಯರ ವಿಭಾಗದಲ್ಲಿ ಪಾಕಿಸ್ತಾನ ಎರಡೂ ಬಾರಿ ವಿಜೇತವಾಗಿತ್ತು. ಬಿಸಿಸಿಐ ತನ್ನ ಆಟಗಾರರ ಪಟ್ಟಿಯನ್ನು ಜುಲೈ 15 ರೊಳಗೆ ಒಲಿಂಪಿಕ್ ಕೌನ್ಸಿಲ್‌ಗೆ ಕಳುಹಿಸಲಿದೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಏಷ್ಯನ್ ಗೇಮ್ಸ್‌ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಬಹುದು. ಈ ತಂಡದಲ್ಲಿ ಐಪಿಎಲ್​ ಸ್ಟಾರ್​ಗಳಾದ ರುತುರಾಜ್ ಗಾಯಕ್ವಾಡ್, ಜಿತೇಶ್, ರಿಂಕು ಸಿಂಗ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ರಾಹುಲ್ ಚಹಾರ್ ಮತ್ತು ತಿಲಕ್ ವರ್ಮಾ ಅವರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Sat, 8 July 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ