ಟಿ20 ವಿಶ್ವಕಪ್ 2024 ರ (T20 World Cup 2024) ಸೂಪರ್ 8 ಸುತ್ತಿನಲ್ಲಿ ಇಂದು ಟೀಂ ಇಂಡಿಯಾ, ಅಫ್ಘಾನಿಸ್ತಾನ (India vs Afghanistan) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ. ಅದರಂತೆ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ತಲಾ ಒಂದೊಂದು ಬದಲಾವಣೆಗಳನ್ನು ಮಾಡಿವೆ. ಇನ್ನು ಲೀಗ್ನಲ್ಲಿ ಭಾರತದ ಪ್ರದರ್ಶನದ ಬಗ್ಗೆ ಹೇಳುವುದಾದರೆ,, ರೋಹಿತ್ ಪಡೆ ಒಂದೇ ಒಂದು ಪಂದ್ಯದಲ್ಲಿ ಸೋಲು ಕಂಡಿಲ್ಲ. ಇದಲ್ಲದೇ ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತದ ದಾಖಲೆಯೂ ಅತ್ಯುತ್ತಮವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇದುವರೆಗೆ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳನ್ನು ಆಡಿದ್ದು, ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
🚨 Toss & Team Update 🚨
Captain Rohit Sharma has won the toss & #TeamIndia have elected to bat against Afghanistan.
1⃣ change in our Playing XI as Kuldeep Yadav is named in the team.
Follow The Match ▶️ https://t.co/xtWkPFaJhD #T20WorldCup | #AFGvIND pic.twitter.com/QlcAJ0MMkd
— BCCI (@BCCI) June 20, 2024
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫರೂಕ್.
WT20 2024. Afghanistan XI: R. Gurbaz (w), I. Zadran, N. Zadran, H. Zazai, G. Naib, A. Omarzai, M. Nabi, R. Khan (c), N. Ahmad, N. ul-Haq, F. Farooqi. https://t.co/gzppPXeAev #T20WorldCup #AFGvIND
— BCCI (@BCCI) June 20, 2024
ಉಭಯ ತಂಡಗಳ ಟಿ20 ಮುಖಾಮುಖಿ ದಾಖಲೆಗಳನ್ನು ನೋಡಿದರೆ, ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾದ ಪ್ರದರ್ಶನ ಅದ್ಭುತವಾಗಿದೆ. ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 8 ಬಾರಿ ಮುಖಾಮುಖಿಯಾಗಿವೆ. ಈ 8 ಪಂದ್ಯಗಳಲ್ಲಿ 7ರಲ್ಲಿ ಟೀಂ ಇಂಡಿಯಾ ಗೆದ್ದಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆದ್ದರಿಂದ ಅಂಕಿಅಂಶಗಳ ಪ್ರಕಾರ, ಟೀಂ ಇಂಡಿಯಾ ಅಫ್ಘಾನಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಅಲ್ಲದೆ, ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು 3 ಬಾರಿ ಮುಖಾಮುಖಿಯಾಗಿವೆ. ವಿಶ್ವಕಪ್‌ನಲ್ಲೂ ಟೀಂ ಇಂಡಿಯಾ ಅಜೇಯವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:40 pm, Thu, 20 June 24