IND Vs AFG Playing XI: ಟಾಸ್ ಗೆದ್ದ ಅಫ್ಘಾನ್; ರೋಹಿತ್- ಪಾಂಡ್ಯ ಔಟ್! ಉಭಯ ತಂಡಗಳು ಹೀಗಿವೆ
IND Vs AFG Playing XI: ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಪ್ರಶಸ್ತಿ ರೇಸ್‌ನಿಂದ ಹೊರಗುಳಿದಿರುವ ಭಾರತ ಕ್ರಿಕೆಟ್ ತಂಡಕ್ಕೆ ಈಗ ಏಷ್ಯಾಕಪ್‌ನಲ್ಲಿ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದೆ. ಎರಡು ಬಾರಿಯ ಚಾಂಪಿಯನ್ ಭಾರತ ತಂಡ ಈ ಬಾರಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡಿತು. ಈಗ ತಮ್ಮ ಕೊನೆಯ ಪಂದ್ಯವನ್ನು ಗೆಲುವುನೊಂದಿಗೆ ಕೊನೆಗೊಳ್ಳಿಸಲು ಭಾರತ ಶತಾಯಗತಾಯ ಪ್ರಯತ್ನಿಸಲಿದೆ. ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ ಅತ್ಯಂತ ಸಮೀಪಕ್ಕೆ ಬಂದು ಅಂತಿಮ ರೇಸ್‌ನಿಂದ ಹೊರಬಿದ್ದ ಅಫ್ಘಾನಿಸ್ತಾನ, ಟೀಂ ಇಂಡಿಯಾಕ್ಕೆ ಕೊನೆಯ ಎದುರಾಳಿಯಾಗಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಈ ಪಂದ್ಯದಲ್ಲಿ ಆಡುವ ಇಲೆವೆನ್‌ನಲ್ಲಿ ಭಾರಿ ಬದಲಾವಣೆಯಾಗಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ರೋಹಿತ್ ಬದಲಿಗೆ ಉಪನಾಯಕ ಕೆಎಲ್ ರಾಹುಲ್ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ. ಈ ಪಂದ್ಯ ಹೆಚ್ಚು ಮುಖ್ಯವಲ್ಲದ ಕಾರಣ ರೋಹಿತ್‌ಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. ಮುಂಬರುವ ಸರಣಿ ಮತ್ತು ವಿಶ್ವಕಪ್‌ಗೆ ಆಟಗಾರರನ್ನು ತಾಜಾವಾಗಿರಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ರಾಹುಲ್ ಟಾಸ್ ಸಮಯದಲ್ಲಿ ಹೇಳಿದರು.
IND vs AFG: ಇಂದಿನ ಪ್ಲೇಯಿಂಗ್ XI
ಭಾರತ: ಕೆಎಲ್ ರಾಹುಲ್ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್.
ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ಹಜರತುಲ್ಲಾ ಜಜೈ, ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಕರೀಮ್ ಜನತ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ರಹ್ಮಾನ್, ಫರೀದ್ ಅಹ್ಮದ್, ಫಜಲ್ಹಕ್ ಫರೂಕ್.
Published On - 7:08 pm, Thu, 8 September 22