
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವು ಬುಧವಾರ, ಜನವರಿ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M.Chinnaswamy Stadium, Bengaluru) ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ (Team India) ಮೊದಲೆರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಟಿ20 ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಇತ್ತ ಅಫ್ಘಾನಿಸ್ತಾನ ಕೂಡ ಮುಜುಗರದ ಸೋಲಿನಿಂದ ಪಾರಾಗಲು ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾದ ಗುರಿ ಇಟ್ಟುಕೊಂಡಿದೆ. ಈ ನಡುವೆ ಸರಣಿಯ ಕೊನೆಯ ಪಂದ್ಯಕ್ಕಾಗಿ ಟೀಂ ಇಂಡಿಯಾ ಬೆಂಗಳೂರಿಗೆ ಆಗಮಿಸಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೂರನೇ ಟಿ20 ಪಂದ್ಯಕ್ಕಾಗಿ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಇಂದೋರ್‌ನಿಂದ ಬೆಂಗಳೂರಿಗೆ ಭಾರತ ತಂಡದ ಆಟಗಾರರ ಪ್ರಯಾಣವನ್ನು ತೋರಿಸಲಾಗಿದೆ. ಬೆಂಗಳೂರಿಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.
Indore ✈️ Bengaluru#TeamIndia in town for the 3⃣rd & final T20I 👏 👏#INDvAFG | @IDFCFIRSTBank pic.twitter.com/xKKRi6yf9W
— BCCI (@BCCI) January 15, 2024
IND vs AFG: ಬೆಂಗಳೂರಿನಲ್ಲಿ 6 ವರ್ಷಗಳ ಹಿಂದೆ ರನ್ಗಳ ಮಳೆ ಸುರಿಸಿದ್ದ ಟೀಂ ಇಂಡಿಯಾ..!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ 9 ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ 8 ಪಂದ್ಯಗಳ ಫಲಿತಾಂಶ ಹೊರಬಿದ್ದಿದೆ. ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 3 ಬಾರಿ ಗೆದ್ದರೆ ಗುರಿ ಬೆನ್ನಟ್ಟಿದ ತಂಡ 5 ಬಾರಿ ಗೆಲುವು ಸಾಧಿಸಿದೆ. ಭಾರತ ಕ್ರಿಕೆಟ್ ತಂಡ ಇಲ್ಲಿ 7 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3 ಪಂದ್ಯಗಳನ್ನು ಗೆದ್ದು 3 ಪಂದ್ಯಗಳನ್ನು ಸೋತಿದೆ. ಉಳಿದಂತೆ 1 ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ