ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ನಡುವೆ ಟೀಂ ಇಂಡಿಯಾಕ್ಕೆ ಸಂಬಂದಿಸಿದಂತೆ ಪ್ರಮುಖ ಸುದ್ದಿಯೊಂದು ಹೊರಬಿದ್ದಿದೆ. ಮಾಧ್ಯಮ ವರದಿಗಳ ಪ್ರಕಾರ, ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ವಿರಾಟ್ ಕೊಹ್ಲಿ (Virat Kohli) ಕೂಡ ತಂಡದ ಭಾಗವಾಗಲಿದ್ದಾರೆ ಎಂದು ವರದಿಯಾಗಿದೆ. ಇದೇ ವರ್ಷ ಜೂನ್ 1 ರಿಂದ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಯುಎಸ್ಎನಲ್ಲಿ ನಡೆಯುತ್ತಿದೆ. ಹೀಗಾಗಿ ಟಿ20 ವಿಶ್ವಕಪ್ ದೃಷ್ಟಿಕೋನದಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಗಳು ಗಾಡವಾಗಿವೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತ ವಿರುದ್ಧದ ಟಿ20 ಸರಣಿಗಾಗಿ ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ಮೊಹಾಲಿ ಮೈದಾನದಲ್ಲಿ ನಡೆಯಲಿದೆ. ಇದಾದ ಬಳಿಕ ಜನವರಿ 14ರಂದು ಇಂದೋರ್‌ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ನಂತರ ಈ ಸರಣಿಯ ಕೊನೆಯ ಟಿ20 ಪಂದ್ಯ ಬೆಂಗಳೂರಿನಲ್ಲಿ ಜನವರಿ 17 ರಂದು ನಡೆಯಲಿದೆ. ಭಾರತ-ಅಫ್ಘಾನಿಸ್ತಾನ ಟಿ20 ಸರಣಿಯ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.
IND vs AFG: ಭಾರತ ವಿರುದ್ಧದ ಟಿ20 ಸರಣಿಗೆ 19 ಸದಸ್ಯರ ಅಫ್ಘಾನಿಸ್ತಾನ ತಂಡ ಪ್ರಕಟ
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11 ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೆ ಐದು ದಿನಗಳ ಮೊದಲು ಅಫ್ಘಾನಿಸ್ತಾನ ತಂಡ ತನ್ನ ತಂಡವನ್ನು ಪ್ರಕಟಿಸಿದೆ. ಆದರೆ, ಟೀಂ ಇಂಡಿಯಾ ಇನ್ನೂ ಪ್ರಕಟವಾಗಿಲ್ಲ. ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಟಿ20 ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿದೆ. ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ 2024 ರ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ.
ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್ ನವೀನ್ ಉಲ್ ಹಕ್, ನೂರ್ ಅಹಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:37 pm, Sat, 6 January 24