IND vs AFG: 14 ತಿಂಗಳ ನಂತರ ರೋಹಿತ್, ಕೊಹ್ಲಿ ರೀ ಎಂಟ್ರಿ; ಟಿ20 ವಿಶ್ವಕಪ್ ಆಡುವುದು ಖಚಿತ

IND vs AFG: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 14 ತಿಂಗಳ ನಂತರ ಈ ಸರಣಿಯೊಂದಿಗೆ ಟಿ20 ಕ್ರಿಕೆಟ್​ಗೆ ಮರಳಿದ್ದಾರೆ. ಇಬ್ಬರೂ 2022 ರ ವಿಶ್ವಕಪ್‌ನ ಸೆಮಿ-ಫೈನಲ್ ಪಂದ್ಯದಲ್ಲಿ ತಮ್ಮ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಈ ಚುಟುಕು ಮಾದರಿಯಿಂದ ದೂರ ಸರಿದಿದ್ದರು.

IND vs AFG: 14 ತಿಂಗಳ ನಂತರ ರೋಹಿತ್, ಕೊಹ್ಲಿ ರೀ ಎಂಟ್ರಿ; ಟಿ20 ವಿಶ್ವಕಪ್ ಆಡುವುದು ಖಚಿತ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Jan 08, 2024 | 10:40 PM

ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧ (India vs Afghanistan) ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) 14 ತಿಂಗಳ ನಂತರ ಈ ಸರಣಿಯೊಂದಿಗೆ ಟಿ20 ಕ್ರಿಕೆಟ್​ಗೆ ಮರಳಿದ್ದಾರೆ. ಇಬ್ಬರೂ 2022 ರ ವಿಶ್ವಕಪ್‌ನ ಸೆಮಿ-ಫೈನಲ್ ಪಂದ್ಯದಲ್ಲಿ ತಮ್ಮ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಈ ಚುಟುಕು ಮಾದರಿಯಿಂದ ದೂರ ಸರಿದಿದ್ದರು. ನಿರೀಕ್ಷೆಯಂತೆ ರೋಹಿತ್ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದು, ವಿರಾಟ್ ಕೊಹ್ಲಿ ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಯ್ಕೆಗಾರರ ​​ಈ ನಿರ್ಧಾರದ ನಂತರ ಇಬ್ಬರೂ ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲೂ (T20 World Cup 2024) ಆಡುವುದು ಭಾಗಶಃ ಖಚಿತವಾಗಿದೆ.

ಈ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಮತ್ತು ವಿರಾಟ್ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬ ಚರ್ಚೆ ಭಾರತೀಯ ಕ್ರಿಕೆಟ್‌ನಲ್ಲಿ ಬಹಳ ದಿನಗಳಿಂದ ಇತ್ತು. ಇದಕ್ಕೆ ಕಾರಣ ಇಬ್ಬರೂ 14 ತಿಂಗಳ ಕಾಲ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಂದ ವಿರಾಮ ಪಡೆದಿದ್ದರು. ಅಫ್ಘಾನಿಸ್ತಾನ ಸರಣಿಗೆ ಆಯ್ಕೆಯಾಗಿರುವ ತಂಡವು ಇಬ್ಬರಿಗೂ ಟಿ20 ಭವಿಷ್ಯವಿದೆ ಎಂಬುದನ್ನು ಸೂಚಿಸುವಂತಿದೆ.

Breaking: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್- ಕೊಹ್ಲಿಗೆ ಸ್ಥಾನ..!

ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ?

ಕೆಲವು ದಿನಗಳ ಹಿಂದೆ, ಟಿ20 ವಿಶ್ವಕಪ್‌ನಲ್ಲಿ ರೋಹಿತ್ ತನ್ನ ಪಾತ್ರದ ಬಗ್ಗೆ ಆಯ್ಕೆಗಾರರಿಂದ ಸ್ಪಷ್ಟತೆ ಕೇಳಿದ್ದಾರೆ ಎಂದು ಹಲವು ಮಾಧ್ಯಮ ವರದಿ ಮಾಡಿದ್ದವು. ಏಕೆಂದರೆ ಕಳೆದ ಟಿ20 ವಿಶ್ವಕಪ್‌ನಿಂದ ಹೆಚ್ಚಿನ ಟಿ20 ಸರಣಿಗಳಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಅದಕ್ಕಾಗಿಯೇ ರೋಹಿತ್ ಆಯ್ಕೆ ಮಂಡಳಿ ಎದುರು ಈ ಪ್ರಶ್ನೆ ಕೇಳಿದ್ದರು ಎಂದು ವರದಿಯಾಗಿತ್ತು. ರೋಹಿತ್ ಜೊತೆಗೆ ವಿರಾಟ್ ಕೂಡ ಟಿ20 ವಿಶ್ವಕಪ್‌ಗೆ ಸಂಪೂರ್ಣವಾಗಿ ಲಭ್ಯವಿರುವುದಾಗಿ ಆಯ್ಕೆಗಾರರಿಗೆ ತಿಳಿಸಿದ್ದರು. ಆದ್ದರಿಂದ ಇವರಿಬ್ಬರನ್ನು ಟಿ20 ವಿಶ್ವಕಪ್‌ನಲ್ಲಿ ನೇರವಾಗಿ ಆಡಿಸದೆ, ಅಫ್ಘಾನಿಸ್ತಾನ ಸರಣಿಯಲ್ಲಿ ತಯಾರಿ ನಡೆಸಲು ಅವಕಾಶ ನೀಡಿದ್ದಾರೆ.

ಐಪಿಎಲ್ ಮೇಲೆ ಕಣ್ಣು

ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಈ ಇವರಿಬ್ಬರು ಆಯ್ಕೆಯಾಗಿದ್ದರೂ, ಈ ಇಬ್ಬರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡುವ ಅಂತಿಮ ನಿರ್ಧಾರವು ಇತರ ಕೆಲವು ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ರೋಹಿತ್ ಮತ್ತು ವಿರಾಟ್ ಹೇಗೆ ಆಡುತ್ತಾರೆ ಮತ್ತು ಮುಂಬರುವ ಐಪಿಎಲ್‌ನಲ್ಲಿ ಇವರಿಬ್ಬರ ಫಾರ್ಮ್ ಹೇಗಿರಲಿದೆ ಎಂಬುದನ್ನು ಆಯ್ಕೆಗಾರರು ಗಮನಿಸಲಿದ್ದಾರೆ. ಇದರ ಆಧಾರದ ಮೇಲೆ ಇಬ್ಬರೂ ವಿಶ್ವಕಪ್‌ನಲ್ಲಿ ಆಡುವುದು ಅಂತಿಮವಾಗಲಿದೆ. ಆದರೆ ಪ್ರಸ್ತುತ ಈ ಇಬ್ಬರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿರುವುದನ್ನು ಗಮನಿಸಿದರೆ, ಆಯ್ಕೆದಾರರು ಟಿ20 ವಿಶ್ವಕಪ್‌ಗಾಗಿ ಇಬ್ಬರನ್ನೂ ಆಯ್ಕೆ ಮಾಡುವ ಇರಾದೆಯಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Sun, 7 January 24

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್