T20 World Cup 2024: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಅಫ್ಘಾನಿಸ್ತಾಣ್ ತಂಡಗಳು ಮೊದಲ ಪಂದ್ಯವನ್ನಾಡಲಿದೆ. ಗುರುವಾರ (ಜೂ.20) ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ದ್ವಿತಿಯ ಸುತ್ತಿನಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿದೆ ಉಭಯ ತಂಡಗಳು.
ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಈ ವೇಳೆ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಇದೀಗ ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿ ನಿಂತಿದೆ.
ಇನ್ನು ಈ ಪಂದ್ಯವು ಎರಡೂ ತಂಡಗಳಿಗೂ ತುಂಬಾ ಮಹತ್ವದ್ದು, ಏಕೆಂದರೆ ಉಭಯ ತಂಡಗಳು ಮುಂಬರುವ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಎದುರಿಸಬೇಕಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.
ಬಾರ್ಬಡೋಸ್ನಲ್ಲಿ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಹಗಲಿನಲ್ಲಿ ನಡೆಯಲಿದ್ದು, ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನೇರ ಪ್ರಸಾರ ಇರಲಿದೆ.
ಭಾರತ-ಅಫ್ಘಾನಿಸ್ತಾನ್ ನಡುವಣ ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಇರಲಿದೆ.
ಈ ಪಂದ್ಯವನ್ನು ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ವೆಬ್ಸೈಟ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದ್ದು, ಇದಕ್ಕಾಗಿ ರಿಜಾರ್ಜ್ ಮಾಡಬೇಕಾಗುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್
ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್.
Published On - 8:04 am, Thu, 20 June 24