AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..!

IND vs AFG: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿd ಟೀಮ್ ಇಂಡಿಯಾ ದಾಂಡಿಗರು ಭರ್ಜರಿ ಬ್ಯಾಟಿಂಗ್​ ಪ್ರದರ್ಶಿಸಿದ್ದರು. ಇದೀಗ ಬೌಲರ್​ಗಳಿಂದಲೂ ಅತ್ಯುತ್ತಮ ಪ್ರದರ್ಶನ ಮೂಡಿಬಂದಿದೆ.

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..!
Team India Image Credit source: BCCI
ಝಾಹಿರ್ ಯೂಸುಫ್
|

Updated on:Jun 08, 2026 | 11:22 AM

Share

ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್​ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್ ಅರ್ಧಶತಕ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 564 ರನ್​ಗಳಿಸಿ ಡಿಕ್ಲೇರ್ ಘೋಷಿಸಿತ್ತು.

ಇದಕ್ಕುತ್ತರವಾಇಗ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ತಂಡವು ಯುವ ಸ್ಪಿನ್ನರ್ ಮಾನವ್ ಸುತಾರ್ ಸ್ಪಿನ್ ದಾಳಿಗೆ ನಲುಗಿ ಹೋಗಿದೆ. ಪರಿಣಾಮ ಕೇವಲ 152 ರನ್​ಗಳಿಗೆ ಆಲೌಟ್ ಆಗಿ ಮೊದಲ ಇನಿಂಗ್ಸ್​ನಲ್ಲಿ 412 ರನ್​ಗಳ ಹಿನ್ನಡೆ ಅನುಭವಿಸಿದೆ.

ಟೀಮ್ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯವಾಡಿರುವ ಮಾನವ್ ಸುತಾರ್ 26 ಓವರ್​ಗಳಲ್ಲಿ ಕೇವಲ 33 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಫಾಲೋಆನ್​ ಹೇರಿದ ಟೀಮ್ ಇಂಡಿಯಾ:

ಅಫ್ಘಾನಿಸ್ತಾನ್ ತಂಡವು 412 ರನ್​ಗಳ ಹಿನ್ನಡೆ ಅನುಭವಿಸಿರುವ ಕಾರಣ ಟೀಮ್ ಇಂಡಿಯಾ ಫಾಲೋಆನ್ ಹೇರಿದೆ. ಅದರಂತೆ ಇದೀಗ ಅಫ್ಘಾನ್ ತಂಡ ಮತ್ತೆ ಬ್ಯಾಟ್ ಮಾಡುತ್ತಿದೆ. ಅಂದರೆ ಅಫ್ಘಾನಿಸ್ತಾನ್ ತಂಡವು ದ್ವಿತೀಯ ಇನಿಂಗ್ಸ್​ ಆರಂಭಿಸಿದೆ.

ದ್ವಿತೀಯ ಇನಿಂಗ್ಸ್​ನಲ್ಲಿ 412 ರನ್​ಗಳಿಸಿದ ಬಳಿಕವಷ್ಟೇ  ರನ್​ ಲೆಕ್ಕಾಚಾರ ಶುರುವಾಗಲಿದೆ. ಅಂದರೆ ಫಾಲೋಆನ್ ಹೇರಿದ ಬಳಿಕ ಹಿನ್ನಡೆ ರನ್​ಗಳನ್ನು ಪೂರೈಸಿದ ಬಳಿಕವಷ್ಟೇ ಎದುರಾಳಿ ತಂಡಕ್ಕೆ ಗುರಿ ನೀಡಬಹುದು.

ಅದಕ್ಕೂ ಮುನ್ನ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ತಂಡವನ್ನು ಆಲೌಟ್ ಮಾಡಿದರೆ ಇನಿಂಗ್ಸ್ ಹಾಗೂ ರನ್​ಗಳ ಅಂತರದಿಂದ ಭರ್ಜರಿ ಜಯ ಸಾಧಿಸಬಹುದು.

ಟೀಮ್ ಇಂಡಿಯಾ ಗೆಲುವು ಖಚಿತ:

ಮೊದಲ ಇನಿಂಗ್ಸ್​ನಲ್ಲಿ ಕೇವಲ 152 ರನ್​ಗಳಿಗೆ ಆಲೌಟ್ ಆಗಿರುವ ಕಾರಣ ಅಫ್ಘಾನಿಸ್ತಾನ್ ತಂಡವು 412 ರನ್​ಗಳನ್ನು ಪೂರೈಸಿ ಟೀಮ್ ಇಂಡಿಯಾಗೆ ಗುರಿ ನೀಡುವ ಸಾಧ್ಯತೆಯಿಲ್ಲ. ಅದರೊಳಗೆ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ತಂಡವನ್ನು ಆಲೌಟ್ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಈ ಮ್ಯಾಚ್​ನಲ್ಲಿ ಭಾರತ ತಂಡದ ಗೆಲ್ಲುವುದು ಖಚಿತ ಎಂದೇ ಹೇಳಬಹುದು.

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮರ್ಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಸಲೀಮ್.

Published On - 11:16 am, Mon, 8 June 26

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​