AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಮಾನವ್ ಮ್ಯಾಜಿಕ್; 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ

India vs Afghanistan Test Day 2: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. 564 ರನ್​ಗಳಿಗೆ ಡಿಕ್ಲೇರ್ ಮಾಡಿದ ನಂತರ, ಅಫ್ಘಾನಿಸ್ತಾನ 113/5ಕ್ಕೆ ಕುಸಿದಿದೆ, 451 ರನ್​ಗಳ ಬೃಹತ್ ಹಿನ್ನಡೆಯಲ್ಲಿದೆ. ಯುವ ಸ್ಪಿನ್ನರ್ ಮಾನವ್ ಸುತಾರ್ ಮೂರು ಪ್ರಮುಖ ವಿಕೆಟ್ ಪಡೆದು ಭಾರತಕ್ಕೆ ಬಲ ತುಂಬಿದ್ದಾರೆ, ಪಂದ್ಯದಲ್ಲಿ ಭಾರತದ ಗೆಲುವು ಸುನಿಶ್ಚಿತವಾಗಿದೆ.

IND vs AFG: ಮಾನವ್ ಮ್ಯಾಜಿಕ್; 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ
Ind Vs Afg
ಪೃಥ್ವಿಶಂಕರ
|

Updated on:Jun 07, 2026 | 5:44 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ತಾನ ತಂಡ ಎರಡನೇ ದಿನದಾಟದಂತ್ಯಕ್ಕೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ 113 ರನ್ ಕಲೆಹಾಕಿರುವ ಅಫ್ಘನ್ ಪಡೆ 451 ರನ್​ಗಳ ಹಿನ್ನಡೆಯಲ್ಲಿದೆ. ಭಾರತದ ಪರ ಬೌಲಿಂಗ್​ನಲ್ಲಿ ಮಿಂಚಿದ ಯುವ ಸ್ಪಿನ್ನರ್ ಮಾನವ್ ಸುತಾರ್ (Manav Suthar) ಪ್ರಮುಖ 3 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ.

564 ರನ್​ಗೆ ಭಾರತದ ಇನ್ನಿಂಗ್ಸ್ ಡಿಕ್ಲೇರ್

3 ವಿಕೆಟ್ ನಷ್ಟಕ್ಕೆ 368 ರನ್ ಕಲೆಹಾಕಿ ಮೊದಲ ದಿನವನ್ನು ಮುಗಿಸಿದ್ದ ಟೀಂ ಇಂಡಿಯಾ ಇಲ್ಲಿಂದ ತನ್ನ ಎರಡನೇ ದಿನದಾಟವನ್ನು ಮುಂದುವರೆಸಿತ್ತು. ಕ್ರೀಸ್‌ನಲ್ಲಿ ಶತಕ ಬಾರಿಸಿದ್ದ ಗಿಲ್ ಹಾಗೂ ಅರ್ಧಶತಕ ಬಾರಿಸಿದ್ದ ರಿಷಭ್​ ಪಂತ್ ಇದ್ದಿದ್ದರಿಂದ ಇವರಿಬ್ಬರಿಂದ ಮತ್ತೊಂದು ಜೊತೆಯಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ 2ನೇ ದಿನದಾಟ ಆರಂಭವಾದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ 107 ರನ್ ಕಲೆಹಾಕಿ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಗಿಲ್ (126), ರಿಷಭ್ ಪಂತ್ (81) ಹಾಗೂ ಧೃವ್ ಜುರೇಲ್ ಸೇರಿದಂತೆ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ವಾಷಿಂಗ್ಟನ್ ಸುಂದರ್ ಎರಡನೇ ಸೆಷನ್‌ನಲ್ಲಿ ಅಜೇಯ 52 ರನ್ ಗಳಿಸಿ ತಂಡವನ್ನು 564 ರನ್​ಗಳಿಗೆ ಕೊಂಡೊಯ್ದರು. ಹೀಗಾಗಿ ಎರಡನೇ ಸೆಷನ್ ಮುಗಿಯುವ ಸುಮಾರು ಅರ್ಧ ಗಂಟೆ ಮೊದಲು, ಟೀಂ ಇಂಡಿಯಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು.

3 ವಿಕೆಟ್ ಪಡೆದ ಮಾನವ್

564 ರನ್‌ಗಳ ಬೃಹತ್ ಗುರಿಯೊಂದಿಗೆ ಮೊದಲ ಇನ್ನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ ಕಳಪೆ ಆರಂಭ ಪಡೆಯಿತು. ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಯುವ ಸಿನ್ನರ್ ಮಾನವ್ ಸುತಾರ್ ತಾವು ಬೌಲ್ ಮಾಡಿದ ಮೊದಲ ಓವರ್​ನಲ್ಲೇ ಅಬ್ದುಲ್ ಮಲಿಕ್ ಅವರ ವಿಕೆಟ್ ಪಡೆದರು. ಹೀಗಾಗಿ ಅಫ್ಘನ್ ಪಡೆ ಕೇವಲ 28 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆ ನಂತರ ಬಂದವರು ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನೆಲೆ ನಿಲ್ಲಲಿಲ್ಲ. ಎರಡನೇ ದಿನದಾಟದಲ್ಲಿ ಮಾನವ್ ಸುತಾರ್ 15.5 ಓವರ್‌ ಬೌಲ್ ಮಾಡಿ ಕೇವಲ 21 ರನ್‌ಗಳನ್ನು ಬಿಟ್ಟುಕೊಟ್ಟು 3 ವಿಕೆಟ್‌ಗಳನ್ನು ಪಡೆದರು.

IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್

ಫಾಲೋ-ಆನ್ ಭೀತಿಯಲ್ಲಿ ಅಫ್ಘನ್

ಮೊದಲ ವಿಕೆಟ್ ರೂಪದಲ್ಲಿ ಅಬ್ದುಲ್ ಮಲಿಕ್ ಅವರ ವಿಕೆಟ್ ಪಡೆದ ಮಾನವ್ ಸುತಾರ್, ಆ ನಂತರ ರಹಮಾನಲ್ಲಾ ಗುರ್ಬಾಜ್ ಮತ್ತು ಅಫ್ಸರ್ ಜಜೈ ಅವರನ್ನು ಸಹ ಔಟ್ ಮಾಡಿದರು. ಮಾನವ್​​ಗೆ ಸಾಥ್ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ 7 ಓವರ್‌ಗಳಲ್ಲಿ 27 ರನ್‌ ನೀಡಿ 2 ವಿಕೆಟ್‌ಗಳನ್ನು ಪಡೆದರು. ಪ್ರಸ್ತುತ ಇನ್ನಿಂಗ್ಸ್ ಹಿನ್ನಡೆಯಲ್ಲಿರುವ ಅಫ್ಘಾನಿಸ್ತಾನ ಫಾಲೋ-ಆನ್ ತಪ್ಪಿಸಿಕೊಳ್ಳಲು ಮೊದಲ ಇನ್ನಿಂಗ್ಸ್‌ನಲ್ಲಿ ಕನಿಷ್ಠ 364 ರನ್ ಗಳಿಸಬೇಕಾಗಿದೆ. ಆದರೆ ಅದು ಪ್ರಸ್ತುತ ಕಷ್ಟಕರವೆಂದು ಕಾಣುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sun, 7 June 26

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ