Breaking: ಮೊದಲ ಟಿ20 ಪಂದ್ಯಕ್ಕೆ ಕಿಂಗ್ ಕೊಹ್ಲಿ ಅಲಭ್ಯ! ಖಚಿತ ಪಡಿಸಿದ ದ್ರಾವಿಡ್

IND vs AFG, Virat Kohli: ಪಂದ್ಯಕ್ಕೆ ಒಂದು ದಿನ ಮೊದಲು ಮೊಹಾಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಂಡದ ಕೋಚ್ ದ್ರಾವಿಡ್, ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂಬ ಮಾಹಿತಿ ನೀಡಿದ್ದಾರೆ.

Breaking: ಮೊದಲ ಟಿ20 ಪಂದ್ಯಕ್ಕೆ ಕಿಂಗ್ ಕೊಹ್ಲಿ ಅಲಭ್ಯ! ಖಚಿತ ಪಡಿಸಿದ ದ್ರಾವಿಡ್
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on:Jan 10, 2024 | 6:27 PM

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ 3 ಪಂದ್ಯಗಳ ಟಿ20 ಸರಣಿ ಗುರುವಾರ, ಜನವರಿ 11 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಈ ಸರಣಿಯೊಂದಿಗೆ, ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಒಂದು ವರ್ಷದ ನಂತರ ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ಮರಳುತ್ತಿದ್ದಾರೆ. ಆದರೆ, ಮೊದಲ ಟಿ20ಯಲ್ಲಿ ರೋಹಿತ್ ಶರ್ಮಾ ಆಡುವುದನ್ನು ಮಾತ್ರ ಅಭಿಮಾನಿಗಳು ನೋಡುವ ಅವಕಾಶವನ್ನು ಪಡೆಯುತ್ತಾರೆ. ಏಕೆಂದರೆ ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ ಎಂದು ಪಂದ್ಯಕ್ಕೆ ಒಂದು ದಿನ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ (Rahul Dravid) ಮಾಹಿತಿ ನೀಡಿದ್ದಾರೆ.

ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯ

ಪಂದ್ಯಕ್ಕೆ ಒಂದು ದಿನ ಮೊದಲು ಮೊಹಾಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಂಡದ ಕೋಚ್ ದ್ರಾವಿಡ್, ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದರೆ, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಲಭ್ಯರಾಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ವಾಸ್ತವವಾಗಿ 2022ರ ನವೆಂಬರ್​ನಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಯಾವುದೇ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಇಂಗ್ಲೆಂಡ್ ವಿರುದ್ಧ ಅಡಿಲೇಡ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಕೊಹ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ಟೀಂ ಇಂಡಿಯಾ ಆ ಪಂದ್ಯದಲ್ಲಿ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದಿತ್ತು. ಅಂದಿನಿಂದ ಕೊಹ್ಲಿ ಈ ಸ್ವರೂಪದಿಂದ ದೂರ ಉಳಿದಿದ್ದರು.

IND vs AFG: ಮೊದಲ ಟಿ20 ಎಷ್ಟು ಗಂಟೆಗೆ ಆರಂಭ? ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ

ತಂಡ ಸೇರಿಕೊಂಡಿಲ್ಲ ರೋಹಿತ್

ಕಳೆದ 14 ತಿಂಗಳಿಂದ ಈ ಫಾರ್ಮೆಟ್​ನಿಂದ ದೂರ ಉಳಿದಿರುವ ಕೊಹ್ಲಿಯನ್ನು ಮತ್ತೆ ನೋಡಲು ಟೀಂ ಇಂಡಿಯಾ ಅಭಿಮಾನಿಗಳು ಇನ್ನಷ್ಟು ದಿನ ಕಾಯಲೇಬೇಕು. ಕೊಹ್ಲಿಯಂತೆ 14 ತಿಂಗಳ ನಂತರ ಈ ಸ್ವರೂಪಕ್ಕೆ ಮರಳುತ್ತಿರುವ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯದಿಂದಲೇ ಕಮ್ ಬ್ಯಾಕ್ ಮಾಡಲಿದ್ದಾರೆ. ಆದರೆ, ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿಯೂ ರೋಹಿತ್ ಮೊಹಾಲಿಗೆ ಬಂದಿಲ್ಲ ಎಂಬ ವರದಿಗಳಿವೆ. ರೋಹಿತ್ ತಂಡದೊಂದಿಗೆ ಮೊಹಾಲಿಗೆ ಬಂದಿರಲಿಲ್ಲ. ಆದರೆ ಅವರು ಚಾರ್ಟರ್ಡ್ ವಿಮಾನದಲ್ಲಿ ಜನವರಿ 10 ರ ಸಂಜೆಯೊಳಗೆ ಮೊಹಾಲಿ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಆರಂಭಿಕರ ಬಗ್ಗೆ ದ್ರಾವಿಡ್ ಮಾತು

ಕೊಹ್ಲಿ ಅಲಭ್ಯತೆಯ ಬಗ್ಗೆ ಮಾತನಾಡಿದ ಕೋಚ್ ದ್ರಾವಿಡ್, ಆಡುವ ಹನ್ನೊಂದರ ಬಳಗದ ಬಗ್ಗೆ ಯಾವುದೇ ವಿಶೇಷ ಮಾಹಿತಿ ನೀಡಿಲ್ಲ. ಆದರೆ ಅವರು ಈ ಸರಣಿಯಲ್ಲಿ ರೋಹಿತ್ ಜೊತೆ ಯಾರು ಓಪನ್ ಆಗುತ್ತಾರೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ವಾಸ್ತವವಾಗಿ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ರೂಪದಲ್ಲಿ ಇಬ್ಬರು ಆರಂಭಿಕ ಆಟಗಾರರು ಇದ್ದಾರೆ. ಆದರೆ, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಓಪನಿಂಗ್ ಮಾಡಲಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Wed, 10 January 24

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ