IND vs AUS: ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

|

Updated on: Sep 17, 2023 | 4:07 PM

IND vs AUS: ಪ್ರಸ್ತುತ ಏಷ್ಯಾಕಪ್ ಫೈನಲ್ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಇದೀಗ 18 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಇಂಜುರಿಯಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ಖಾಯಂ ನಾಯಕ ಪ್ಯಾಟ್ ಕಮಿನ್ಸ್ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

IND vs AUS: ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ತಂಡ
Follow us on

ಪ್ರಸ್ತುತ ಏಷ್ಯಾಕಪ್ ಫೈನಲ್ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ  (India vs Australia) ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಇದೀಗ 18 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಇಂಜುರಿಯಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ಖಾಯಂ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಇವರೊಂದಿಗೆ ಇಂಜುರಿಯಿಂದ ಚೇತರಿಸಿಕೊಂಡಿರುವ ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್ ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ಹಾಗೆಯೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಅವಕಾಶ ಪಡೆದಿದ್ದ ಟೆಸ್ಟ್ ಸ್ಪೆಷಲಿಸ್ಟ್ ಮಾರ್ನಸ್ ಲಬುಶೇನ್ (Marnus Labuschagne), ಭಾರತ ವಿರುದ್ಧದ ಏಕದಿನ ಸರಣಿಯಲ್ಲೂ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಹೆಡ್ ಔಟ್, ಲಬುಶೇನ್ ಇನ್

ದಕ್ಷಿಣ ಆಫ್ರಿಕಾದ ಏಕದಿನ ಸರಣಿಯ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದ ತಂಡದ ಎಡಗೈ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅವರನ್ನು ಏಕದಿನ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಅಲ್ಲದೆ ಭಾರತ ವಿರುದ್ಧದ ಸರಣಿ ಮಾತ್ರವಲ್ಲದೆ ಹೆಡೆ ವಿಶ್ವಕಪ್​ನಿಂದಲೂ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಟ್ರಾವಿಸ್ ಹೆಡ್ ಗಾಯಗೊಂಡ ಕಾರಣ, ಈಗ ಮಾರ್ನಸ್ ಲಬುಶೇನ್ ಅವರನ್ನು ಭಾರತ ಪ್ರವಾಸಕ್ಕೆ ಆಯ್ಕೆ ಮಾಡಲಾಗಿದ್ದು, ವಿಶ್ವಕಪ್‌ನಲ್ಲಿಯೂ ಲಬುಶೇನ್ ಆಡುವ ಸಾಧ್ಯತೆಗಳಿವೆ.

ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಗ್ಹಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.

ಏಕದಿನ ಸರಣಿ ವೇಳಾಪಟ್ಟಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಸೆಪ್ಟೆಂಬರ್ 22 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 24 ರಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ಸೌರಾಷ್ಟ್ರದಲ್ಲಿ ಸೆ.27ರಂದು ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Sun, 17 September 23