IND vs AUS: ಭಾರತ- ಆಸೀಸ್ ಕಾಳಗಕ್ಕೆ ಮಳೆಕಾಟ? ಹವಾಮಾನ ವರದಿ ಹೇಳುವುದೇನು?

ಪೃಥ್ವಿಶಂಕರ

|

Updated on: Mar 16, 2023 | 3:50 PM

IND vs AUS: ಮಾರ್ಚ್ 17ರ ವರೆಗೆ ಮುಂಬೈನಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಪಂದ್ಯಕ್ಕೆ ಮಳೆಯ ಬಿಕ್ಕಟ್ಟು ಎದುರಾಗಿದೆ.

IND vs AUS: ಭಾರತ- ಆಸೀಸ್ ಕಾಳಗಕ್ಕೆ ಮಳೆಕಾಟ? ಹವಾಮಾನ ವರದಿ ಹೇಳುವುದೇನು?
ವಾಂಖೆಡೆ ಸ್ಟೇಡಿಯಂ

ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು (Border Gavaskar Trophy) ಗೆದ್ದು ಬೀಗಿರುವ ಟೀಂ ಇಂಡಿಯಾ (Team India) ಇದೀಗ ಏಕದಿನ ಸರಣಿ ಮೇಲೆಯೂ ಕಣ್ಣಿಟ್ಟಿದೆ. ಈ 3 ಪಂದ್ಯಗಳ ಏಕದಿನ ಸರಣಿಯು ಮಾರ್ಚ್ 17 ರಿಂದ ಪ್ರಾರಂಭವಾಗುತ್ತಿದ್ದು, ಈ ಮೊದಲ ಪಂದ್ಯಕ್ಕಾಗಿ ಎರಡೂ ತಂಡಗಳು ಕಠಿಣ ತಯಾರಿ ನಡೆಸಿವೆ. ಆದರೆ ಈ ಪಂದ್ಯಕ್ಕೆ ವರುಣ ವಿಲನ್ ಆಗುವ ಎಲ್ಲ ಲಕ್ಷಣ ಎದುರಾಗಿದೆ. ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪ್ರಮುಖ ಅಪ್‌ಡೇಟ್‌ ಹೊರಬಿದ್ದಿದ್ದು, ಮುಂಬೈನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ತುಂತುರು ಮಳೆಯೂ ಸುರಿದಿದೆ. ಹೀಗಾಗಿ ಪಂದ್ಯದ ದಿನ ಮಳೆ ಬಂದರೆ ಉಭಯ ತಂಡಗಳಿಗೆ ಹಿನ್ನಡೆಯುಂಟಾಗಲಿದೆ.

ಮಾರ್ಚ್ 17ರ ವರೆಗೆ ಮುಂಬೈನಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಪಂದ್ಯಕ್ಕೆ ಮಳೆಯ ಬಿಕ್ಕಟ್ಟು ಎದುರಾಗಿದೆ.

‘ನಾನು ಶಾಹಿದ್ ಅಫ್ರಿದಿ ಅಲ್ಲ’; ಮತ್ತೆ ಐಪಿಎಲ್ ಆಡುವ ಬಗ್ಗೆ ರೈನಾ ಕೊಟ್ಟ ಉತ್ತರ ಸಖತ್ ವೈರಲ್

ಹಾರ್ದಿಕ್ ಪಾಂಡ್ಯ ನಾಯಕ

ಇದೇ ವೇಳೆ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ರೋಹಿತ್, ಮೊದಲ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಗಾಗಿ ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಮತ್ತೊಂದೆಡೆ, ಸ್ಟೀವ್ ಸ್ಮಿತ್ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್‌ನ ನಂತರ, ಆಸ್ಟ್ರೇಲಿಯಾದ ನಿಯಮಿತ ನಾಯಕ ಪ್ಯಾಟ್ ಕಮಿನ್ಸ್ ಅವರ ತಾಯಿಯ ಸ್ಥಿತಿ ಗಂಭೀರವಾದ ಕಾರಣ ತವರಿಗೆ ಹಿಂತಿರುಗಿದ್ದರು. ಆದರೆ ನಾಲ್ಕನೇ ಟೆಸ್ಟ್‌ ವೇಳೆ ಪ್ಯಾಟ್‌ ಕಮಿನ್ಸ್ ಅವರ ತಾಯಿ ನಿಧನರಾದರು. ಈ ಕಾರಣದಿಂದಾಗಿ, ಪ್ಯಾಟ್ ಈಗ ಕುಟುಂಬದೊಂದಿಗೆ ಇದ್ದು, ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ, ಮಾರ್ಚ್ 17, ಮುಂಬೈ
  • ಎರಡನೇ ಏಕದಿನ ಪಂದ್ಯ, ಮಾರ್ಚ್ 19, ವಿಶಾಖಪಟ್ಟಣ
  • 3ನೇ ಏಕದಿನ ಪಂದ್ಯ, ಮಾರ್ಚ್ 22, ಚೆನ್ನೈ

ಈ ಮೂರು ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ.

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕಟ್.

ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಜೇ ರಿಚರ್ಡ್‌ಸನ್, ಸೀನ್ ಅಬಾಟ್, ಕ್ಯಾಮೂರಾನ್ ಗ್ರೀನ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada