IND vs AUS: ನಾಲ್ಕು ಅರ್ಧಶತಕ, ಐದು ವಿಕೆಟ್; ಟೀಂ ಇಂಡಿಯಾದ ಗೆಲುವಿನಲ್ಲಿ ಈ ಐವರೇ ಹೀರೋಗಳು

Updated on: Sep 23, 2023 | 7:45 AM

IND vs AUS: ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

1 / 6
ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

2 / 6

ಇಂದಿನ ಪಂದ್ಯದಲ್ಲಿ ಕೀಪಿಂಗ್ ವಿಷಯದಲ್ಲಿ ಕೆಎಲ್ ರಾಹುಲ್​ಗೆ ಇದು ಶುಭ ದಿನವಾಗಿರಲಿಲ್ಲ. ಆದರೆ ಈ ಪಂದ್ಯದಲ್ಲಿ ರಾಹುಲ್ ಅವರ ಬ್ಯಾಟಿಂಗ್ ಸಾಕಷ್ಟು ಪರಿಣಾಮ ಬೀರಿತು. ನಾಯಕನ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಇಶಾನ್ ಮತ್ತು ಸೂರ್ಯ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. 63 ಎಸೆತಗಳಲ್ಲಿ 58 ರನ್ ಬಾರಿಸಿದ ರಾಹುಲ್ ಸಿಕ್ಸರ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

3 / 6

ಸೂರ್ಯಕುಮಾರ್ ಯಾದವ್ ಸುದೀರ್ಘ ಸಮಯದ ನಂತರ ಏಕದಿನ ಮಾದರಿಯಲ್ಲಿ ಅರ್ಧಶತಕ ಬಾರಿಸಿದರು. 49 ಎಸೆತಗಳಲ್ಲಿ 50 ರನ್ ಚಚ್ಚಿದ ಸೂರ್ಯ, ನಾಯಕ ರಾಹುಲ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು.

4 / 6

ಶುಭ್‌ಮನ್ ಗಿಲ್ ತಮ್ಮ ಅರ್ಧಶತಕದೊಂದಿಗೆ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು. ತವರು ನೆಲದಲ್ಲಿ ಶತಕ ವಂಚಿತರಾದ ಗಿಲ್, 63 ಎಸೆತಗಳಲ್ಲಿ 74 ರನ್ ಗಳಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

5 / 6

Ruturaj Gaikwad

6 / 6

ಸಿರಾಜ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಐದು ವಿಕೆಟ್ ಕಬಳಿಸಿ ಆಸೀಸ್ ತಂಡವನ್ನು 276 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us