IND vs AUS 1st T20I: ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ: ಸೇಡಿಗೆ ಕಾದು ಕುಳಿತಿದೆ ಸೂರ್ಯ ಪಡೆ

India vs Australia, 1st T20I: ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ.

IND vs AUS 1st T20I: ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ: ಸೇಡಿಗೆ ಕಾದು ಕುಳಿತಿದೆ ಸೂರ್ಯ ಪಡೆ
IND vs AUS T20I 1st T20I
Follow us
Vinay Bhat
|

Updated on: Nov 23, 2023 | 6:50 AM

ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಮತ್ತೊಂದು ಹಬ್ಬ ಶುರುವಾಗಲಿದೆ. ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ (India vs Australia) ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ.

ಸೂರ್ಯಕುಮಾರ್ ನಾಯಕ:

ಈ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಇತ್ತೀಚೆಗಷ್ಟೆ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಹೆಚ್ಚಿನ ಆಟಗಾರರ ಈ ಸರಣಿಗಿದ್ದಾರೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಮೇಲೆ ಎಲ್ಲರ ಕಣ್ಣಿದೆ. ತಿಲಕ್ ವರ್ಮಾಗೆ ಈ ಸರಣಿ ಅಗ್ನಿ ಪರೀಕ್ಷೆಯಾಗಿದೆ.

ಇನ್ನು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತವು 6 ನೇ ಸ್ಥಾನದಲ್ಲಿರುವ ಫಿನಿಶರ್‌ಗಾಗಿ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಆಲ್‌ರೌಂಡರ್‌ಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಜೊತೆ ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಇದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್, ಅವೇಶ್ ಖಾನ್ ವೇಗಿಗಳಳಾಗಿದ್ದಾರೆ.

ಇದನ್ನೂ ಓದಿ
Image
ಏಕದಿನ ರ‍್ಯಾಂಕಿಂಗ್ ಅಗ್ರ ನಾಲ್ಕರಲ್ಲಿ ಮೂವರು ಭಾರತೀಯರು..!
Image
ಟಿ20 ಕ್ರಿಕೆಟ್​ನಿಂದ ರೋಹಿತ್ ಭಾಗಶಃ ದೂರ!
Image
ಭಾರತ- ಆಸೀಸ್ ಟಿ20 ಕಾಳಗದಲ್ಲಿ ಯಾರು ಬಲಿಷ್ಠ?
Image
ಲಕ್ನೋ ತಂಡವನ್ನು ತೊರೆದು ತಾನು ಚಾಂಪಿಯನ್‌ ಮಾಡಿದ್ದ ತಂಡ ಸೇರಿಕೊಂಡ ಗಂಭೀರ್

ಕ್ರಿಕೆಟ್​ನಲ್ಲಿ ಹೊಸ ನಿಯಮ ಜಾರಿಗೆ ತಂದ ಐಸಿಸಿ; ಬೌಲಿಂಗ್ ತಂಡ ಮೈಮರೆತರೆ 5 ರನ್ ದಂಡ..!

ಆಸ್ಟ್ರೇಲಿಯಾ ತಂಡ:

ಇತ್ತ ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಡೇವಿಡ್ ವಾರ್ನರ್, ಶಾನ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಜೇಸನ್ ಬೆಹ್ರೆನ್‌ಡಾರ್ಫ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಮಾರ್ಷ್ ಅನುಪಸ್ಥಿತಿಯಲ್ಲಿ ಟಿಮ್ ಡೇವಿಡ್ ಫಿನಿಶರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಜೊತೆಗೆ ನಾಥನ್ ಎಲ್ಲಿಸ್, ತನ್ವೀರ್ ಸಂಘ, ಸೀನ್ ಅಬಾಟ್ ಮತ್ತು ಆ್ಯಡಂ ಝಂಪಾ ಇದ್ದಾರೆ. ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಮೇಲೆ ಎಲ್ಲರ ಕಣ್ಣಿದೆ.

ಪಿಚ್ ಹೇಗಿದೆ?:

ಡಾ. ವೈಎಸ್ ರಾಜಶೇಖರ್ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್, ಬ್ಯಾಟಿಂಗ್ ಟ್ರ್ಯಾಕ್‌ಗಳಿಗೆ ಹೆಸರುವಾಸಿಯಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಇಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗುವುದರಿಂದ, ಇಬ್ಬನಿ ಅಂಶವು ಎರಡೂ ತಂಡಗಳ ಮೇಲೆ ಪರಿಣಾಮ ಬೀರಬಹುದು. ವಿಶೇಷವಾಗಿ ಚೇಸಿಂಗ್ ತಂಡಕ್ಕೆ ಸುಲಭವಾಗಬಹುದು. ಇಲ್ಲಿ ಇತ್ತೀಚಿಗೆ ನಡೆದ ಪಂದ್ಯಗಳಲ್ಲಿ ಚೇಸಿಂಗ್ ತಂಡ ಹೆಚ್ಚು ಗೆದ್ದ ಸಾಧನೆ ಮಾಡಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ ಸುಮಾರು 119 ಆಗಿದೆ.

ಹವಾಮಾನ ವರದಿ

ಅಕ್ಯುವೆದರ್ ಪ್ರಕಾರ ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಶೇ. 60 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಸಂಜೆ 7 ರಿಂದ 10:30ವರೆಗೆ ಆಟದ ಸಮಯದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಟ ಪ್ರಾರಂಭವಾಗುವ ಮೊದಲು ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಉಭಯ ತಂಡಗಳು

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಆರನ್ ಹಾರ್ಡಿ, ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್‌ಸನ್, ಆ್ಯಡಂ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ