IND vs AUS: ಆಸೀಸ್ ವಿರುದ್ಧ ಟಾಸ್ ಗೆದ್ದ ಭಾರತ; ಸೂರ್ಯನ ತಂಡದಲ್ಲಿ ಯಾರಿಗೆಲ್ಲ ಅವಕಾಶ?

|

Updated on: Nov 23, 2023 | 7:00 PM

IND vs AUS: ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಎಸಿಎ ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IND vs AUS: ಆಸೀಸ್ ವಿರುದ್ಧ ಟಾಸ್ ಗೆದ್ದ ಭಾರತ; ಸೂರ್ಯನ ತಂಡದಲ್ಲಿ ಯಾರಿಗೆಲ್ಲ ಅವಕಾಶ?
ಭಾರತ- ಆಸ್ಟ್ರೇಲಿಯಾ
Follow us on

ಏಕದಿನ ವಿಶ್ವಕಪ್ (ICC World Cup 2023) ನಂತರ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ (India vs Australia) 5 ಪಂದ್ಯಗಳ ಟಿ20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣಂನಲ್ಲಿ (Visakhapatnam) ನಡೆಯುತ್ತಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ಟೀಂ ಇಂಡಿಯಾ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಮ್ಯಾಥ್ಯೂ ವೇಡ್ (Matthew Wade) ಆಸ್ಟ್ರೇಲಿಯಾವನ್ನು ಮುನ್ನಡೆಸಲಿದ್ದಾರೆ. ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಎಸಿಎ ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಟಾಸ್ ಜೊತೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಪಟ್ಟಿಯೂ ಹೊರಬಿದ್ದಿದೆ.

ಟಿ20 ಅಂಕಿ-ಅಂಶಗಳು

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 15 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ ತಂಡ ಕೇವಲ 10 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಮತ್ತೊಂದೆಡೆ, ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 10 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 6 ಪಂದ್ಯಗಳಲ್ಲಿ ಗೆಲುವು ಸಾದಿಸಿದ್ದರೆ, 4 ಪಂದ್ಯಗಳಲ್ಲಿ ಸೋತಿದೆ.

IND vs AUS 1ST T20 Live Score: ಟಾಸ್ ಗೆದ್ದ ಸೂರ್ಯ; ಆಸೀಸ್ ಮೊದಲು ಬ್ಯಾಟಿಂಗ್

ಉಭಯ ತಂಡಗಳು

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.

ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

ಟಿ20 ಸರಣಿ ವೇಳಾಪಟ್ಟಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ಇಂದು ಅಂದರೆ, ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಎರಡನೇ ಪಂದ್ಯ ನವೆಂಬರ್ 26 ರಂದು ತಿರುವನಂತಪುರದಲ್ಲಿ ನಡೆಯಲಿದೆ. ಮೂರನೇ ಟಿ20 ಪಂದ್ಯ ನವೆಂಬರ್ 28 ರಂದು ಗುವಾಹಟಿಯಲ್ಲಿ ನಡೆಯಲಿದೆ. ಇದಾದ ನಂತರ ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 1 ರಂದು ನಾಗ್ಪುರದಲ್ಲಿ ನಡೆಯಲಿದ್ದು, ಸರಣಿಯ ಕೊನೆಯ ಪಂದ್ಯ ಡಿಸೆಂಬರ್ 3 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 23 November 23